ಎಪಿಎಂಸಿ ಉಪಮಾರುಕಟ್ಟೆ: ಇಂದಿನಿಂದ ಕೃಷಿ ಉತ್ಪನ್ನ ಖರೀದಿ


Team Udayavani, May 4, 2020, 5:11 AM IST

ಎಪಿಎಂಸಿ ಉಪಮಾರುಕಟ್ಟೆ: ಇಂದಿನಿಂದ ಕೃಷಿ ಉತ್ಪನ್ನ ಖರೀದಿ

ಪುತ್ತೂರು: ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಉಪಮಾರುಕಟ್ಟೆಗಳಾದ ಕಡಬ, ನೆಲ್ಯಾಡಿ, ಕಾಣಿಯೂರು, ಆರ್ಲಪದವು, ಉಪ್ಪಿನಂಗಡಿ ಹಾಗೂ ಈಶ್ವರಮಂಗಲ ವ್ಯಾಪ್ತಿಯಲ್ಲಿ ಮೇ 4ರಿಂದ ಕೃಷಿ ಮತ್ತು ಕಾಡುತ್ಪತ್ತಿ ಖರೀದಿ ನಡೆಸಲು ನಿರ್ಧರಿಸಲಾಗಿದೆ.

ಗ್ರಾಮೀಣ ಭಾಗಗಳಲ್ಲಿ ಕಾಡುತ್ಪತ್ತಿ ಹಾಗೂ ಅಡಿಕೆ ಮತ್ತಿತರ ವಸ್ತುಗಳ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಸಂದರ್ಭದಲ್ಲಿಯೂ ಮಾರುಕಟ್ಟೆ ಪ್ರವೇಶಕ್ಕೆ ಮಾಸ್ಕ್, ಸಾಮಾಜಿಕ ಅಂತರ ಷರತ್ತು ಅನ್ವಯವಾಗಲಿದೆ ಎಂದು ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.

ಎಪಿಎಂಸಿ ಉಪ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡುವ ವ್ಯಾಪಾರಿಗಳು ಎಪಿಎಂಸಿ ಅಥವಾ ಸ್ಥಳೀಯಾಡಳಿತದ ಪರವಾನಿಗೆ ಪಡೆದುಕೊಳ್ಳಬೇಕು. ರೈತರು ಅಗತ್ಯಕ್ಕೆ ತಕ್ಕಂತೆ ಕೃಷಿ ಉತ್ಪನ್ನಗಳ ಮಾರಾಟಕ್ಕೆ ಮುಂದಾಗಬೇಕು. ಅಡಿಕೆ ಬೆಳೆಗಾರರು, ಗೇರು ಬೀಜ ಬೆಳೆಗಾರರು, ಕೊಕ್ಕೋ ಬೆಳೆಗಾರರು ಈ ಅವಕಾಶವನ್ನು ಬಳಸಿಕೊಳ್ಳಬೇಕು ಎಂದವರು ತಿಳಿಸಿದ್ದಾರೆ.

ಗ್ಯಾಸ್‌ ತತ್‌ಕ್ಷಣ ಪಡೆಯಿರಿ
ಉಜ್ವಲ್‌ ಗ್ಯಾಸ್‌ ಸಂಪರ್ಕ ಪಡೆದುಕೊಂಡವರು ಉಚಿತ ಸಿಲಿಂಡರ್‌ ಅನ್ನು ತತ್‌ಕ್ಷಣ ಪಡೆದುಕೊಳ್ಳಬಹುದು. ಈಗಾಗಲೇ ಅದಕ್ಕೆ ಬೇಕಾದಂತಹ ಮೊತ್ತ ಗ್ಯಾಸ್‌ ಏಜೆನ್ಸಿಗಳ ಖಾತೆಗೆ ಜಮೆ ಆಗಿದೆ. ಅನಿಲ ಭಾಗ್ಯ ಯೋಜನೆಯಲ್ಲಿ ಗ್ಯಾಸ್‌ ಸಂಪರ್ಕ ಪಡೆದವರಿಗೂ ಮುಂದಿನ ದಿನಗಳಲ್ಲಿ ಉಚಿತ ಗ್ಯಾಸ್‌ ಸಿಗುವ ವ್ಯವಸ್ಥೆ ಆಗುತ್ತದೆ ಎಂದರು.

ಕಟ್ಟಡ ಕಾರ್ಮಿಕರಿಗೆ ನೆರವು
ನೋಂದಾಯಿತ ಕಟ್ಟಡ ಕಾರ್ಮಿಕರ ಖಾತೆಗೆ 2 ಸಾವಿರ ರೂ.ನಂತೆ ಜಮೆ ಮಾಡಲು ಬೇಕಾದ ಮೊತ್ತವನ್ನು ಕಾರ್ಮಿಕ ಇಲಾಖೆ ಖಾತೆಗೆ ರಾಜ್ಯ ಸರಕಾರ ಜಮೆ ಮಾಡಿದೆ. ನೋಂದಾಯಿತ ಕಟ್ಟಡ ಕಾರ್ಮಿಕರು ತಮ್ಮ ಬ್ಯಾಂಕ್‌ ಖಾತೆಯನ್ನು ಇಲಾಖೆಗೆ ನೀಡಿದರೆ ಹಣ ಜಮೆ ಮಾಡುತ್ತಾರೆ ಎಂದರು.ಎಪಿಎಂಸಿ ಅಧ್ಯಕ್ಷ ದಿನೇಶ್‌ ಮೆದು ಉಪಸ್ಥಿತರಿದ್ದರು.

ದರ ಏರಿಕೆ: ಎಚ್ಚರಿಕೆ
ಸಿಮೆಂಟ್‌, ಕಬ್ಬಿಣ ಮತ್ತಿತರ ವಸ್ತುಗಳಿಗೆ ತಮಗೆ ಬೇಕಾದಂತೆ ದರ ಹೆಚ್ಚಿಸುವ ವ್ಯಾಪಾರಿಗಳ ಬಗ್ಗೆ ನಿಗಾ ಇಡಲಾಗಿದೆ. ಇಂತಹ ಘಟನೆಗಳು ಮರುಕಳಿಸಿದರೆ ಕಾನೂನು ಪ್ರಕಾರ ವ್ಯಾಪಾರಿಗಳ ಮೇಲೆ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಮಠಂದೂರು ಅವರು ಎಚ್ಚರಿಕೆ ನೀಡಿದ್ದಾರೆ.

ಮರಳು ನೀತಿ ಸಿದ್ಧ
ರಾಜ್ಯದಲ್ಲಿ ಹೊಸ ಮರಳು ನೀತಿ ಬಗ್ಗೆ ಸಚಿವರು ಭರವಸೆ ನೀಡಿದ್ದರು. ಇದೀಗ ಹೊಸ ಮರಳು ನೀತಿ ಸಿದ್ಧವಾಗಿದೆ. ಈ ಹೊಸ ನೀತಿಗೆ ಮುಖ್ಯಮಂತ್ರಿ ಸಹಿ ಹಾಕಲು ಮಾತ್ರ ಬಾಕಿ ಇದೆ. ಸರಕಾರದಿಂದ ಅಧಿಕೃತ ಆದೇಶ ಕೆಲವೇ ದಿನಗಳಲ್ಲಿ ಬರಲಿದೆ.
– ಸಂಜೀವ ಮಠಂದೂರು
ಶಾಸಕರು

ಟಾಪ್ ನ್ಯೂಸ್

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

SriLanka ನೌಕಾಪಡೆಯಿಂದ 17 ತಮಿಳುನಾಡಿನ ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ

12-google-search

Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?

Jaipur: 13 ಮಂದಿಯನ್ನು ಬಲಿ ಪಡೆದ ದುರಂತದಲ್ಲಿ LPG ಟ್ಯಾಂಕರ್ ಚಾಲಕ ಬದುಕುಳಿದಿದ್ದೇ ರೋಚಕ

ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು

Yearender 2024:ಸುಶೀಲ್‌ ಕುಮಾರ್‌ ಮೋದಿ To ಬಾಬಾ-2024ರಲ್ಲಿ ವಿಧಿವಶರಾದ ರಾಜಕೀಯ ಮುಖಂಡರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

Police-logo

CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆ ಬಂಟ್ವಾಳಕ್ಕೆ

aane

Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

death

Puttur: ಅಪಘಾತದಲ್ಲಿ ಗಾಯಾಳಾಗಿದ್ದ ಬೈಕ್‌ ಸಹ ಸವಾರ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ

Laxmi-Minister

ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.