ಪೊಲೀಸರ ಮೇಲೆ ಕಲ್ಲು ತೂರಾಟ ಪ್ರಕರಣ: ಮಹಿಳಾ ಆರೋಪಿಗಳಿಗೆ ಜಾಮೀನು
Team Udayavani, May 4, 2020, 6:13 AM IST
ಬೆಂಗಳೂರು: ಹುಬ್ಬಳ್ಳಿಯ ಮಂಟೂರು ರಸ್ತೆಯ ಅರಳಿಕಟ್ಟಿ ಕಾಲನಿಯಲ್ಲಿ ಲಾಕ್‌ಡೌನ್ ಉಲ್ಲಂಘಿಸಿ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಲು ಮುಂದಾದವರನ್ನು ತಡೆಯಲು ಹೋದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದ 23 ಆರೋಪಿಗಳ ಪೈಕಿ 6 ಮಹಿಳೆಯರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿರುವ ಹೈಕೋರ್ಟ್ ಉಳಿದ 17 ಆರೋಪಿಗಳ ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದೆ.
ಆರೋಪಿಗಳಾದ ಶಬಾನಾ ಎಂ. ರೋಣ ಮತ್ತು ಇತರ 22 ಮಂದಿ ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾ| ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.
ಜನರ ಹಿತದೃಷ್ಟಿಯಿಂದ ಕೋವಿಡ್-19 ವೈರಸ್ ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟಲು ಸರಕಾರ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅರ್ಜಿದಾರರು (ಆರೋಪಿಗಳು) ಈ ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಲ್ಲದೇ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ಅರ್ಜಿದಾರರ ಈ ವರ್ತನೆ ಸಮರ್ಥನೀ ಯವಲ್ಲ. ಪೊಲೀಸ್ ವಿಚಾರಣೆ ಪೂರ್ಣ ಗೊಳ್ಳುವವರೆಗೆ ಆರೋಪಿಗಳು ಜಾಮೀನು ಪಡೆದುಕೊಳ್ಳಲು ಅರ್ಹರಲ್ಲ. ಆದರೆ ಮೊದಲ ಆರು ಆರೋಪಿ ಗಳು ಮಹಿಳೆಯರಾಗಿದ್ದು, ಅವರಿಗೆ ಚಿಕ್ಕ ಮಕ್ಕಳಿದ್ದಾರೆ. ಮಕ್ಕಳನ್ನು ನೋಡಿಕೊಳ್ಳಬೇಕಾಗಿರುವುದರಿಂದ ಅವರಿಗೆ ವಿನಾಯಿತಿ ನೀಡಬಹುದು ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ 6 ಮಂದಿ ಮಹಿಳೆಯರಿಗೆ ಷರತ್ತಿನ ಜಾಮೀನು ನೀಡಿ, ಉಳಿದ ಆರೋಪಿಗಳ ಅರ್ಜಿಗಳನ್ನು ವಜಾಗೊಳಿಸಿ ಅದೇಶಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ
Udupi: ಪೊಲೀಸ್ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.