ದಿಗಂತ್ ಕೈಯಲ್ಲಿ ಗೋಲ್ಡ್ ಬಿಸ್ಕೆಟ್!
Team Udayavani, May 4, 2020, 11:04 AM IST
ಕನ್ನಡ ಚಿತ್ರರಂಗದಲ್ಲಿ ದೂದ್ಪೇಡ ಎಂದೇ ಕರೆಸಿಕೊಳ್ಳುವ ಗುಳಿಕೆನ್ನೆ ಹುಡುಗ ದಿಗಂತ್ ಕೈಯಲ್ಲಿ ಈಗ ಎರಡು ಮತ್ತೂಂದು ಚಿತ್ರಗಳಿವೆ. ಸದ್ಯಕ್ಕೆ ದಿಗಂತ್ ಅಭಿನಯಿಸಿರುವ “ಹುಟ್ಟು ಹಬ್ಬದ ಶುಭಾಶಯಗಳು ‘ ಚಿತ್ರ ಬಿಡುಗಡೆಗೆ ರೆಡಿಯಾಗಿದೆ. ಈ ಚಿತ್ರದ ಮೇಲೆ ದಿಗಂತ್ಗೆ ನಿರೀಕ್ಷೆಯೂ ಇದೆ.
ಯೋಗರಾಜ್ ಭಟ್ ನಿರ್ದೇಶನದ “ಗಾಳಿಪಟ 2′ ಚಿತ್ರವೂ ಇದೆ. ಈ ಸಿನಿಮಾದಲ್ಲಿ ಗಣೇಶ್ ಹಾಗು ಪವನ್ಕುಮಾರ್ ದಿಗಂತ್ನೊಂದಿಗಿದ್ದಾರೆ. ಇನ್ನು, ಇದೇ ಮೊದಲ ಬಾರಿಗೆ ಕಾಮಿಡಿ ಥ್ರಿಲ್ಲರ್ ಕಥಾಹಂದರ ಹೊಂದಿರುವ “ಮಾರಿಗೋಲ್ಡ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ರಾಘವೇಂದ್ರ ಎಂ.ನಾಯಕ್ ನಿರ್ದೇಶನ ಮಾಡುತ್ತಿದ್ದು, ಆರ್.ವಿ.ಪ್ರೊಡಕ್ಷನ್ಸ್ ಬ್ಯಾನರ್ನಲ್ಲಿ ರಘುವರ್ಧನ್ ಅವರು “ಮಾರಿಗೋಲ್ಡ್’ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ. “ಮಾರಿಗೋಲ್ಡ್’
ಅಂದಾಕ್ಷಣ ಎಲ್ಲರಿಗೂ ಬಿಸ್ಕತ್ ನೆನಪಾಗಬಹುದು. ಇಲ್ಲಿ ಹೆಸರು ಮಾತ್ರ ಹಾಗೆ ಇಡಲಾಗಿದೆ. ಚಿತ್ರದೊಳಗಿರುವ ಕಥಾಹಂದರ ಹೊಸತನದೊಂದಿಗೆ ಕೂಡಿದ್ದು, ದಿಗಂತ್ಗೆ ಇದೇ ಮೊದಲ ಬಾರಿಗೆ ಒಂದು ವಿಶೇಷ ಪಾತ್ರ ಸೃಷ್ಟಿ ಮಾಡಲಾಗಿದೆ. ದಿಗಂತ್ ಕೂಡ ಕಥೆ, ಪಾತ್ರ ಮೆಚ್ಚಿಕೊಂಡು ಚಿತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ಹೊಸ ಬಗೆಯ ಕಥೆ, ಪಾತ್ರ ಎದುರು ನೋಡುತ್ತಿದ್ದ ದಿಗಂತ್ಗೆ “ಮಾರಿಗೋಲ್ಡ್’ ಹೊಸ ರೀತಿಯ ಸಿನಿಮಾ ಆಗಲಿದೆ ಎಂಬುದು ಸಿನಿಮಾ ತಂಡದ ಅಭಿಪ್ರಾಯ.
ಅಂದಹಾಗೆ, ಈಗಾಗಲೇ ಮೊದಲ ಹಂತದ ಚಿತ್ರದ ಚಿತ್ರೀಕರಣ ನಡೆದಿದೆ. ಬೆಂಗಳೂರು, ಚಿತ್ರದುರ್ಗ ಸುತ್ತಮುತ್ತಲ ಸ್ಥಗಳಲ್ಲಿ ಚಿತ್ರೀಕರಿಸಿರುವ ತಂಡ, ಎರಡನೇ ಹಂತದ ಚಿತ್ರೀಕರಣಕ್ಕೆ ಸಜ್ಜಾಗುವ ಹೊತ್ತಿಗೆ ಕೋವಿಡ್ 19 ಸಮಸ್ಯೆ ಎದುರಾಗಿದೆ. ಲಾಕ್ ಡೌನ್ ನಂತರ ಎರಡನೇ ಹಂತದ ಚಿತ್ರೀಕರಣಕ್ಕೆ ಹೊರಡಲು ಸಿದ್ಧತೆ ಮಾಡಿಕೊಂಡಿರುವ ಈ ಚಿತ್ರದಲ್ಲಿ ದಿಗಂತ್ಗೆ ಜೋಡಿಯಾಗಿ ಸಂಗೀತಾ ಶೃಂಗೇರಿ ನಟಿಸುತ್ತಿದ್ದಾರೆ. ಉಳಿದಂತೆ ಚಿತ್ರದಲ್ಲಿ “ಟಗರು’ ಕಾಕ್ರೋಚ್ ಖ್ಯಾತಿಯ ಸುಧಿ, ಯಶ್ಶೆಟ್ಟಿ, ಸಂಪತ್ ಕುಮಾರ್ ಸೇರಿದಂತೆ ಹಲವು ಕಲಾವಿದರು ನಟಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Kaup town: ಟ್ರಾಫಿಕ್ ಒತ್ತಡ, ಪಾರ್ಕಿಂಗ್ ಕಿರಿಕಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.