15 ಗ್ರಾಮಗಳಲ್ಲಿ ನೀರಿಗೆ ಪರದಾಟ
Team Udayavani, May 4, 2020, 10:51 AM IST
ಆಳಂದ: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿ ಕೊಳ್ಳಬೇಕು ಎನ್ನುವ ಸರ್ಕಾರದ ಮುಂಜಾಗ್ರತಾ ಕ್ರಮದ ನಡುವೆಯೂ ತಾಲೂಕಿನ ತಾಂಡಾ ಸೇರಿದಂತೆ 188
ಹಳ್ಳಿಗಗಳ ಪೈಕಿ 15 ಹಳ್ಳಿಗಳಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಈ ನಡುವೆ ನೀರು ಪೂರೈಕೆಗೆ ಅಗತ್ಯವಾಗಿರುವ ವಿದ್ಯುತ್ ಸರಬರಾಜು ಸಹ ನಿರೀಕ್ಷಿತವಾಗಿ ಪೂರೈಕೆ ಆಗುತ್ತಿಲ್ಲ. ನಿಂಗದಳ್ಳಿ, ತಡಕಲ್, ಮಾಡಿಯಾಳ, ಕಣ್ಮಸ್ ದಲಿತ ಬಡಾವಣೆ, ನಂದಗೂರ ಹೀಗೆ 15 ಹಳ್ಳಿಗಳಲ್ಲಿ ನೀರಿಲ್ಲದ ಪರಿಸ್ಥಿತಿ ತಲೆದೂರಿದೆ.
ಬಾರದ ಗ್ರಾ.ಪಂ ಅಧಿ ಕಾರಿಗಳು: ಕೋವಿಡ್-19 ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವುದು ಸೇರಿದಂತೆ ಗ್ರಾಮಗಳಲ್ಲಿ ಕುಡಿಯುವ ನೀರು ಪೂರೈಕೆಗೆ ಸ್ಪಂದಿಸಬೇಕಾದ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು ಕೇಂದ್ರ ಸ್ಥಾನಕ್ಕೆ ಬರುತ್ತಲೇ ಇಲ್ಲ.
20 ಲಕ್ಷ ರೂ. ಬಿಡುಗಡೆ: ನೀರಿನ ಸಮಸ್ಯೆಗೆ ಸ್ಪಂದಿಸುವ ಸಲುವಾಗಿ ಟಾಸ್ಕ್ ಪೋರ್ಸ್ ಸಮಿತಿಯಿಂದ 20ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಇದರಲ್ಲಿ ಪೈಪ್‌ಲೈನ್ ಕಾಮಗಾರಿ ಸೇರಿ
ಎಂಟು ಕೊಳವೆ ಬಾವಿ ತೋಡಬೇಕಿದ್ದು, ಈಗಾಗಲೇ ಮಾಡಿಯಾಳದಲ್ಲಿ ಕೊರೆದ ಕೊಳವೆ ವಿಫಲವಾಗಿದೆ. ಮದಗುಣಕಿಯಲ್ಲಿ ಒಂದಿಂಚು ನೀರು ದೊರೆತಿದ್ದು ಸಾಕಾಗೋದಿಲ್ಲ ಎಂದು ಜಿ.ಪಂ ಗ್ರಾಮೀಣ ನೀರು ಸರಬರಾಜು ಎಇಇ ಚಂದ್ರಮೌಳಿ ತಿಳಿಸಿದ್ದಾರೆ.
ಮಾಡಿಯಾಳ ಗ್ರಾ.ಪಂ ಕೇಂದ್ರವಾಗಿದ್ದು, ಹಲವು ದಿನಗಳಿಂದ ಜನತೆ ನೀರಿಲ್ಲದೆ ಪರದಾಡುತ್ತಿದ್ದಾರೆ. ಲಾಕ್ ಡೌನ್‌ನಿಂದಾಗಿ ಗುಳೆಹೋದ ಕಾರ್ಮಿಕರು ಮರಳಿ ಬಂದಿದ್ದಾರೆ. ಕುಡಿಯಲು ಗ್ರಾಮದಲ್ಲಿ ನೀರಿನ ಸಮಸ್ಯೆ ತಲೆದೋರಿದೆ. ಸಂಬಂಧಿತರು ಸ್ಪಂದಿಸದಿದ್ದಲ್ಲಿ ಹೋರಾಟ ಕೈಗೊಳ್ಳಲಾಗುವುದು.
ಭೀಮಾಶಂಕರ
ಮಾಡಿಯಾಳ, ಸಿಪಿಐ ಜಿಲ್ಲಾ
ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ
CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.