ಚಿಕ್ಕಬಳ್ಳಾಪುರದ ಸೀಲ್ ಡೌನ್ ಪ್ರದೇಶದಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್
Team Udayavani, May 4, 2020, 11:37 AM IST
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಸರ್ಕಾರ ಆದೇಶಿಸಿದ್ದರು, ಜಿಲ್ಲೆಯ ಕೆಲವು ಪ್ರದೇಶದಲ್ಲಿ ಮದ್ಯ ಮಾರಾಟಕ್ಕೆ ಜಿಲ್ಲಾಡಳಿತ ಬೇಕ್ ಹಾಕಿದೆ.
ಹೌದು, ಜಿಲ್ಲೆಯ ಕೊವಿಡ್-19 ಸೋಂಕಿತರು ಕಾಣಸಿಕೊಂಡಿರುವ ಗೌರಿಬಿದನೂರು, ಚಿಕ್ಕಬಳ್ಳಾಪುರ ನಗರದಲ್ಲಿ ಮದ್ಯ ಮಾರಾಟಕ್ಕೆ ಸಿದ್ದತೆ ನಡೆಸಿದ್ದ ಅಬಕಾರಿ ಅಧಿಕಾರಿಗಳು, ಸೋಮವಾರ ಬೆಳಗ್ಗೆ ಮದ್ಯ ಮಾರಾಟ ಮಾಡದಂತೆ ಗೌರಿಬಿದನೂರು, ಚಿಕ್ಕಬಳ್ಳಾಪುರ ನಗರದ ಎಂಎಸ್ಐಎಲ್ ಮಳಿಗೆ ಮಾಲೀಕರಿಗೆ ಸೂಚಿಸಿದ್ದಾರೆ. ಹೀಗಾಗಿ ಮದ್ಯ ಸಿಗುವ ಉತ್ಸಾಹದಲ್ಲಿದ್ದ ಮದ್ಯ ಪ್ರಿಯರಿಗೆ ಭಾರೀ ನಿರಾಸೆ ಮೂಡಿದೆ.
ಜಿಲ್ಲೆಯಲ್ಲಿ ಗೌರಿಬಿದನೂರು ಹಾಗೂ ಚಿಕ್ಕಬಳ್ಳಾಪುರ ಹೊರತುಪಡಿಸಿ ಉಳಿದ ಕಡೆಗೆ ಮದ್ಯ ಮಾರಾಟಕ್ಕೆ ಅನುವು ಮಾಡಿಕೊಡಲಾಗಿದೆ. ಹೀಗಾಗಿ ಗೌರಿಬಿದನೂರು ಹಾಗೂ ಚಿಕ್ಕಬಳ್ಳಾಪುರ ನಗರದ ಮದ್ಯ ಪ್ರಿಯರು ಬೇರೆ ತಾಲೂಕುಗಳ ಕಡೆಗೆ ಮುಖ ಮಾಡಬೇಕಿದೆ. ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಗೌರಿಬಿದನೂರು ಹಾಗೂ ಚಿಕ್ಕಬಳ್ಳಾಪುರದಲ್ಲಿ ಮದ್ಯ ಮಾರಾಟಕ್ಕೆ ತಡೆ ನೀಡಲಾಗಿದೆಯೆಂದು ಅಬಕಾರಿ ಆಯುಕ್ತ ನರೇಂದ್ರ ಕುಮಾರ್ ಉದಯವಾಣಿಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.