ಲಾಕ್‌ಡೌನ್‌; ಬೆಂಗಳೂರಿನಲ್ಲಿ ಸಿಲುಕಿದ್ದವರು ತವರಿಗೆ ವಾಪಸ್‌

ಸಾರಿಗೆ ಸಂಸ್ಥೆ 16 ಬಸ್‌ಗಳಲ್ಲಿ ನಿನ್ನೆ ರಾತ್ರಿ ಆಗಮನ | ಹುಬ್ಬಳ್ಳಿ-ಧಾರವಾಡ ನಿಲ್ದಾಣಗಳಲ್ಲಿ ಆರೋಗ್ಯ ತಪಾಸಣೆ | ಹೋಂ ಕ್ವಾರಂಟೈನ್‌

Team Udayavani, May 4, 2020, 11:40 AM IST

04-May-06

ಹುಬ್ಬಳ್ಳಿ: ಬೆಂಗಳೂರಿನಿಂದ ಬಂದವರ ಆರೋಗ್ಯ ತಪಾಸಣೆ

ಹುಬ್ಬಳ್ಳಿ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಿಲುಕಿಕೊಂಡಿದ್ದವರನ್ನು ಸಾರಿಗೆ ಸಂಸ್ಥೆಗಳ ಬಸ್‌ಗಳ ಮೂಲಕ ರವಿವಾರ ರಾತ್ರಿ ನಗರಕ್ಕೆ ಕರೆತರಲಾಯಿತು. ಬೆಂಗಳೂರಿನಿಂದ ನಗರಕ್ಕೆ ಆಗಮಿಸಿದವರನ್ನು ಗೋಕುಲ ರಸ್ತೆಯ ಹೊಸ ಬಸ್‌ನಿಲ್ದಾಣಕ್ಕೆ ಕರೆ ತರಲಾಯಿತು.  ಒಟ್ಟು 16 ಬಸ್‌ಗಳಲ್ಲಿ ಸುಮಾರು 500 ಜನರು ಆಗಮಿಸಲಿದ್ದಾರೆ ಎನ್ನುವ ಮಾಹಿತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು.  ರಾತ್ರಿ 9:50ಕ್ಕೆ ಮೊದಲ ಬಸ್‌ ನಗರಕ್ಕೆ ಆಗಮಿಸಿತು.

ಪ್ರತಿಯೊಬ್ಬರ ಪರೀಕ್ಷೆ: ಬೆಂಗಳೂರಿನಿಂದ ಆಗಮಿಸಿದ ಪ್ರತಿಯೊಬ್ಬರನ್ನು ನಿಲ್ದಾಣದಲ್ಲಿಯೇ ತಪಾಸಣೆ ಮಾಡಲಾಯಿತು. ಪಿಪಿಇ ಕಿಟ್‌ ಧರಿಸಿದ್ದ ವೈದ್ಯಕೀಯ ಸಿಬ್ಬಂದಿ ಪ್ರತಿಯೊಬ್ಬರನ್ನು ಥರ್ಮಲ್‌ ಸ್ಕ್ರೀನಿಂಗ್‌ಗೆ ಒಳಪಡಿಸಿದರು. ಪ್ರತಿಯೊಬ್ಬರ ಸಂಪೂರ್ಣ ಮಾಹಿತಿ ಪಡೆದು ಹೋಮ್‌ ಕ್ವಾರಂಟೈನ್‌ ಸೀಲ್‌ ಹಾಕಲಾಯಿತು. ಹೋಂ ಕ್ವಾರಂಟೈನ್‌ ಮುಗಿಯುವವರೆಗೂ ಹೊರಗಡೆ ಸಂಚಾರ ಮಾಡುವಂತಿಲ್ಲ. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು.

ಜಿಲ್ಲಾಡಳಿತದ ವತಿಯಿಂದ ಪ್ರಯಾಣಿಕರಿಗೆ ಶುದ್ಧ ಕುಡಿಯುವ ನೀರು, ಆಹಾರ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಲಾಗಿತ್ತು. ದೂರದ ಊರುಗಳಿಗೆ ತೆರಳುವ ಪ್ರಯಾಣಿಕರಿಗೆ ಸಮಾಜ ಕಲ್ಯಾಣ ಹಾಸ್ಟೆಲ್‌ಗ‌ಳಲ್ಲಿ ತಂಗಲು ವ್ಯವಸ್ಥೆ ಕಲ್ಪಿಸಲಾಗಿತ್ತು. ಇನ್ನೂ ಗದಗ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಯ ಕೆಲ ಜನರು ಮಾಹಿತಿ ಕೊರತೆಯಿಂದ ನಗರಕ್ಕೆ ಬಂದಿದ್ದನ್ನುಅಧಿಕಾರಿಗಳು ಪತ್ತೆ ಹಚ್ಚಿ ಸದ್ಯಕ್ಕೆ ಇಲ್ಲೇ  ಉಳಿದುಕೊಳ್ಳಬೇಕು. ಜಿಲ್ಲಾಡಳಿತದ ನಿರ್ದೇಶನ ಪಡೆದು ಮುಂದಿನ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಶಾಸಕರ ಬೆಲ್ಲದ ಭೇಟಿ: ಶಾಸಕ ಅರವಿಂದ ಬೆಲ್ಲದ ನಿಲ್ದಾಣಕ್ಕೆ ಆಗಮಿಸಿ ಪ್ರಯಾಣಿಕರ ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡರು. ಗುರುದ್ವಾರ ಫೌಂಡೇಶನ್‌ ವತಿಯಿಂದ ಪ್ರಯಾಣಿಕರಿಗೆ ಆಹಾರ ಪೊಟ್ಟಣ ವಿತರಿಸಲಾಯಿತು. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಹಾಗೂ ವಲಸೆ ಕಾರ್ಮಿಕರ ನೋಡಲ್‌ ಅಧಿಕಾರಿ ಪುರುಷೋತ್ತಮ್‌, ನಗರ ತಹಶೀಲ್ದಾರ್‌ ಶಶಿಧರ ಮಾಡ್ಯಾಳ, ಡಿಡಿಪಿಐ ಹಂಚಾಟೆ, ವಾಯವ್ಯ ಸಾರಿಗೆ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ರಾಮನಗೌಡರ್‌, ಡಿಟಿಒ ಅಶೋಕ ಪಾಟೀಲ, ಪಾಲಿಕೆ ವೈದ್ಯಾಧಿಕಾರಿ
ಡಾ| ಪ್ರಭು ಬಿರಾದಾರ, ಗೋಕುಲ ಠಾಣೆ ಪೊಲೀಸರು ಇದ್ದರು.

ಟಾಪ್ ನ್ಯೂಸ್

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maharastra: ಕಾರಿನ ಮೇಲೆ ಕಲ್ಲು ತೂರಾಟ… ಮಾಜಿ ಸಚಿವ ಅನಿಲ್ ದೇಶಮುಖ್ ಹಣೆಗೆ ಗಾಯ

Maha-Leaders

Assembly Election: ಮಹಾರಾಷ್ಟ್ರ ಕದನದಲ್ಲಿ ಘಟಾನುಘಟಿಗಳ ಭವಿಷ್ಯ ಪಣಕ್ಕೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.