ಇರಾನ್ ಮಸೀದಿಗಳ ಆರಂಭಕ್ಕೆ ಅನುಮತಿ
Team Udayavani, May 4, 2020, 3:36 PM IST
ಟೆಹರಾನ್: ದೇಶದ ಬಹುಭಾಗಗಳಲ್ಲಿ ಮಸೀದಿಗಳು ಸೋಮವಾರದಿಂದ ತೆರೆಯಲಿವೆ ಎಂದು ಸರಕಾರ ತಿಳಿಸಿದೆ.
ಇರಾನಿನಲ್ಲಿ ಕೋವಿಡ್ ಸೋಂಕಿನಿಂದ ಸಾಯುವವರ ಸಂಖ್ಯೆ ಕಡಿಮೆಯಾದ ಹಿನ್ನೆಲೆಯಲ್ಲಿ ಈ ಪ್ರಕಟನೆ ಹೊರಡಿಸಲಾಗಿದೆ.
ಸರಕಾರದ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 47 ಮಂದಿ ಮಾತ್ರ ಬಲಿಯಾಗಿದ್ದಾರೆ. ಇದು ಕಳೆದ 55 ದಿನಗಳಿಗೆ ಹೋಲಿಸಿದರೆ ಅತ್ಯಂತ ಕಡಿಮೆ. ಮುಂದಿನ ದಿನಗಳಲ್ಲೂ ಇದೇ ಟ್ರೆಂಡ್ ಪುನರಾವರ್ತನೆಯಾಗಲಿದೆ ಎಂದು ಇರಾನ್ ಅಧ್ಯಕ್ಷ ಹಸನ್ ರೂಹಾನಿ ಆಶಾವಾದ ವ್ಯಕ್ತಪಡಿಸಿದ್ದಾರೆ.
ದೇಶದ ಮೂರನೇ ಒಂದು ಭಾಗದಷ್ಟು ಆಡಳಿತ ವಿಭಾಗಗಳಲ್ಲಿ ಮಸೀದಿಗಳು ತೆರೆಯಲು ಅವಕಾಶ ನೀಡಲಾಗಿದೆ. ಪ್ರಾರ್ಥನೆ ಸಲ್ಲಿಸುವಾಗಲೂ ಸಾಮಾಜಿಕ ಅಂತರ ಪಾಲನೆ ಅಗತ್ಯ ಎಂದು ಸರಕಾರ ಸೂಚಿಸಿದೆ. ಮಾಚ್ ತಿಂಗಳಿನಿಂದಲೇ ಮಸೀದಿಗಳಲ್ಲಿ ಪ್ರಾರ್ಥನೆಗೆ ಅವಕಾಶವನ್ನು ನಿರಾಕರಿಸಲಾಗಿತ್ತು. ಇದುವರೆಗೆ ಇರಾನಿನಲ್ಲಿ 97 ಸಾವಿರಕ್ಕೂ ಹೆಚ್ಚು ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 6, 203 ಮಂದಿ ಮೃತರಾಗಿದ್ದಾರೆ.
ಇತರೆ ದೇಶಗಳೊಂದಿಗೆ ಹಂಚಿಕೆ
ಕೋವಿಡ್ ವಿರುದ್ಧದ ಹೋರಾಟದ ಅನುಭವವನ್ನು ತನ್ನ ಸ್ನೇಹಿತ ರಾಷ್ಟ್ರಗಳಾದ ಅಫ್ಘಾನಿಸ್ತಾನ, ಪಾಕಿಸ್ತಾನ, ಒಮನ್, ಖತಾರ್, ಕುವೈತ್, ಸಿರಿಯಾ ಹಾಗೂ ಲೆಬನಾನ್ ದೇಶಗಳೊಂದಿಗೆ ಹಂಚಿಕೊಳ್ಳಲು ಸಿದ್ಧವಿದೆ ಎಂದು ಜನರಲ್ ಬಗೇರಿ ತಿಳಿಸಿರುವುದಾಗಿ ಟೆಹರಾನ್ ಟೈಮ್ಸ್ ವರದಿ ಮಾಡಿದೆ.
ಸಮರ್ಥ ಅಧ್ಯಕ್ಷರ ಯೋಜನೆ ಹಾಗೂ ಮಾರ್ಗದರ್ಶನದ ಜತೆಗೆ ಸಂಘಟಿತ ಪ್ರಯತ್ನದಿಂದ ಕೋವಿಡ್ ಸೋಂಕನ್ನು ನಿಯಂತ್ರಿಸಲು ಸಾಧ್ಯವಾಗಿದೆ. ಆದ್ದರಿಂದ ಈ ಅನುಭವವನ್ನು ಹಂಚಿಕೊಳ್ಳಲು ಇರಾನಿನ ಸೇನೆ ಉತ್ಸುಕವಾಗಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kim Jong Un: ಉತ್ತರ ಕೊರಿಯಾದಿಂದ ಆತ್ಮಹತ್ಯಾ ಡ್ರೋನ್ ಪರೀಕ್ಷೆ
Iran: ಹಿಜಾಬ್ ನಿರಾಕರಿಸಿದರೆ ವಿಶೇಷ ಕ್ಲಿನಿಕ್: ಇರಾನ್ ತೀರ್ಮಾನಕ್ಕೆ ಆಕ್ರೋಶ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
MUST WATCH
ಹೊಸ ಸೇರ್ಪಡೆ
Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು
Jamia Millia Islamia: ಇಸ್ಲಾಂಗೆ ಮತಾಂತರಗೊಳ್ಳಿ ಅಥವಾ ಅತ್ಯಾಚಾರಕ್ಕೆ ಒಳಗಾಗಿ: ಭಾರಿ ಆರೋಪ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Tamil Director: ಖ್ಯಾತ ತಮಿಳು ಚಿತ್ರ ನಿರ್ದೇಶಕ ಸುರೇಶ್ ಸಂಗಯ್ಯ ವಿಧಿವಶ
SMAT 2024: ಸಯ್ಯದ್ ಮುಷ್ತಾಕ್ ಅಲಿ ಕೂಟಕ್ಕೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.