ಮೀನು ಹಿಡಿಯಲು ಹೋಗಿ ನೀರಿನಲ್ಲಿ ಮುಳುಗಿ ಮೂವರು ಸಾವು
Team Udayavani, May 5, 2020, 12:59 PM IST
ಶಿವಮೊಗ್ಗ: ಒಬ್ಬ ಬಾಲಕ ಸೇರಿದಂತೆ ಮೂವರು ಮೀನು ಹಿಡಿಯಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಸೊರಬ ತಾಲೂಕು ತ್ಯಾವರೆತೆಪ್ಪ ಗ್ರಾಮದಲ್ಲಿ ನಡೆದಿದೆ.
ತ್ಯಾವರೆತೆಪ್ಪ ಗ್ರಾಮದ ಬಸವರಾಜ್ (45), ಬಸವರಾಜ್ ಅವರ ಮಗ ಆಕಾಶ್(14) ಹಾಗೂ ಶಿವಮೂರ್ತಿ(49) ಮೃತಪಟ್ಟವರು. ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು ಮೂವರು ತ್ಯಾವರೆತೆಪ್ಪ ಗ್ರಾಮದ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದರು.
ಕೋವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ಇವರು ರಾತ್ರಿ ವೇಳೆ ಮೀನು ಹಿಡಿಯಲು ಹೋಗಿದ್ದರು. ಇಂದು ಬೆಳಗಿನ ಜಾವ ಮೂವರ ಶವಗಳನ್ನು ಕೆರೆಯಿಂದ ಮೇಲಕ್ಕೆತ್ತಲಾಗಿದೆ.
ಅಗ್ನಿ ಶಾಮಕದಳದ ಸಿಬ್ಬಂದಿ ಹಾಗೂ ಸ್ಥಳೀಯ ಈಜುಗಾರರು ಕಾರ್ಯಾಚರಣೆ ನಡೆಸಿ ಇಂದು ಬೆಳಗಿನ ಜಾವ ಕೆರೆಯಿಂದ ಶವ ಮೇಲಕ್ಕೆತ್ತಿದ್ದಾರೆ. ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Channapatna: ಕೆಲಸದ ಒತ್ತಡ ತಾಳಲಾರದೆ ಮುಖ್ಯ ಶಿಕ್ಷಕ ವಿಷ ಸೇವಿಸಿ ಆತ್ಮಹ*ತ್ಯೆ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
ಸ್ಪೀಕರ್, ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಭಾಪತಿ ಹೊರಟ್ಟಿ
ಕೆಕೆಆರ್‌ಡಿಬಿಯಲ್ಲಿ ಕಾಂಗ್ರೆಸ್ ಮುಖಂಡರಿಗೆ ಮಾತ್ರ ಅವಕಾಶ: ಪ್ರತಿಪಕ್ಷ ಸದಸ್ಯರ ಬೇಸರ
Rain: 5 ವಿದ್ಯುತ್ ನಿಗಮ ವ್ಯಾಪ್ತಿಯಲ್ಲಿ 156 ಕೋಟಿರೂ. ಸೌಕರ್ಯ ಹಾನಿ: ಕೆ.ಜೆ. ಜಾರ್ಜ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.