ಜಿಲ್ಲೆಯಲ್ಲಿ 3.55 ಕೋಟಿ ರೂ. ಮದ್ಯ ಮಾರಾಟ

Team Udayavani, May 5, 2020, 4:55 PM IST

ಜಿಲ್ಲೆಯಲ್ಲಿ  3.55 ಕೋಟಿ ರೂ. ಮದ್ಯ ಮಾರಾಟ

ಕಲಬುರಗಿ: ಕಳೆದ 55 ದಿನಗಳಿಂದ ಬಂದ್‌ ಆಗಿದ್ದ ಮದ್ಯ ಮಾರಾಟ ಸೋಮವಾರ ಮಧ್ಯಾಹ್ನ ನಂತರ ಶುರುವಾದರೂ ಸಂಜೆ 7ರ ಹೊತ್ತಿಗೆ ಜಿಲ್ಲೆಯಾದ್ಯಂತ 3.55 ಕೋಟಿ ರೂ.ಗೂ ಅಧಿಕ ಮೊತ್ತದ ಮದ್ಯ ಮಾರಾಟವಾಗಿದೆ.

ಎಲ್ಲ ಕಡೆ ಬೆಳಗ್ಗೆ 9ರಿಂದ ಮದ್ಯ ಮಾರಾಟ ಶುರುವಾದರೆ ಕಲಬುರಗಿಯಲ್ಲಿ ಜಿಲ್ಲಾಧಿಕಾರಿ ಬೆಳಗ್ಗೆ 11ಕ್ಕೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಸಮಾಲೋಚಿಸಿ ತದನಂತರ ತೀರ್ಮಾನ ಪ್ರಕಟಿಸಿದರು. ಆ ನಂತರವೇ ಜಿಲ್ಲಾದ್ಯಂತ ಮಾರಾಟ ಪ್ರಕ್ರಿಯೆ ಶುರುವಾಯಿತು.

ಬೆಳಗ್ಗೆ 9ಕ್ಕೆ ಅಂಗಡಿಗಳು ತೆರೆದು ಮದ್ಯ ನೀಡಲಾಗುತ್ತದೆ ಎನ್ನುವುದನ್ನು ತಿಳಿದ ಮದ್ಯವ್ಯಸನಿಗಳು ಬೆಳಗ್ಗೆ 7ರಿಂದಲೇ ಅಂಗಡಿ ಮುಂದೆ ಸರತಿ ಸಾಲಿನಲ್ಲಿ ನಿಂತಿದ್ದರು. ಆದರೆ ಜಿಲ್ಲಾಧಿಕಾರಿಗಳು ಇನ್ನೂ ಆದೇಶ ನೀಡಿಲ್ಲವೆಂಬ ವಿಷಯ ಅರಿತ ಕೆಲವರು ಜಾಗ ಖಾಲಿ ಮಾಡಿ ಮತ್ತೆ ಮಧ್ಯಾಹ್ನ ಸುಡು ಬಿಸಿಲನ್ನು ಲೆಕ್ಕಿಸದೇ ಸರದಿಯಲ್ಲಿ ನಿಂತು ಎಣ್ಣೆ ಪಡೆದರು.

ಬಿಸಿಲಲ್ಲಿ ಒಂದು ಕಿ.ಮೀ ದೂರದಷ್ಟು ಸರದಿಯಲ್ಲಿ ಜನ ನಿಂತಿದ್ದರು. ಮದ್ಯ ತೆಗೆದುಕೊಂಡು ಹೋಗಲು ಹಲವರು ಬ್ಯಾಗ್‌ ತೆಗೆದುಕೊಂಡು ಬಂದಿದ್ದರೆ ಇನ್ನು ಕೆಲವರು ಸಹಾಯಕರನ್ನು ಕರೆದುಕೊಂಡು ಬಂದಿದ್ದರು. ಸಾಮಾಜಿಕ ಅಂತರ ಕಣ್ಮರೆ: ಸಾಮಾಜಿಕ ಅಂತರ ಕಾಪಾಡಿಕೊಳ್ಳದಿದ್ದರೆ ಅಂತಹ ಮದ್ಯದಂಗಡಿಗಳ ಪರವಾನಗಿ ರದ್ದುಪಡಿಸುವುದಾಗಿ ಅಬಕಾರಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದರು. ಆದರೆ ಅಬಕಾರಿ ಅಧಿಕಾರಿಗಳ ಆದೇಶ-ಎಚ್ಚರಿಕೆ ಕವಡೆ ಕಾಸಿಗೆ ಕಿಮ್ಮತ್ತಿಲ್ಲ ಎನ್ನುವಂತೆ ಮದ್ಯದಂಗಡಿಗಳ ಎದುರು ಮದ್ಯವ್ಯಸನಿಗಳು ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಒಬ್ಬರ ಹಿಂದೆ ಒಬ್ಬರು ಹಿಂದೆ ನೂಕು ನುಗ್ಗಲು ಎನ್ನುವಂತೆ ನಿಂತಿದ್ದು ಬಹುತೇಕ ಎಲ್ಲ ಅಂಗಡಿಗಳ ಮುಂದೆ ಕಂಡು ಬಂತು.

ಕೆಲವೆಡೆಯಂತೂ ಜನರನ್ನು ನಿಯಂತ್ರಿಸಲು ಪೊಲೀಸ್‌ರು ಹರಸಾಹಸಪಟ್ಟರು. ಡಿಸಿ ಸಭೆಯತ್ತ ನೆಟ್ಟ ಎಲ್ಲರ ಚಿತ್ತ: ಸೋಮವಾರ ಬೆಳಗ್ಗೆ 11ಕ್ಕೆ ಜಿಲ್ಲಾಧಿಕಾರಿ ಶರತ್‌ ಬಿ. ಅವರು ಕರೆದ ಸಭೆಯಲ್ಲೇ ಮದ್ಯ ಮಾರಾಟ ಸಂಬಂಧವಾಗಿ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂಬ ಮಾಹಿತಿ ಅರಿತ ಮದ್ಯ ದಂಧೆಕೋರರು, ಮದ್ಯ ವ್ಯಸನಿಗಳು ಆ ಕಡೆಯಿಂದ ಈಕಡೆಗೆ ಹಾಗೂ ಈ ಕಡೆಯಿಂದ ಆ ಕಡೆಗೆ ಅಲೆದಾಡುತ್ತಿರುವುದು ಕಂಡು ಬಂತು. ಒಟ್ಟಾರೆ ಬೆಳಗ್ಗೆ 9ರಿಂದಲೇ ಮಾರಾಟ ಶುರುವಾಗಿದ್ದರೆ ಇನ್ನಷ್ಟು ಮೊತ್ತದ ಮದ್ಯ ಮಾರಾಟವಾಗುತ್ತಿತ್ತು ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ.

ಟಾಪ್ ನ್ಯೂಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

10

Nayanthara: ʼರಕ್ಕಯಿʼ ಆಗಿ ದುಷ್ಟರ ಪಾಲಿಗೆ ದುಸ್ವಪ್ನವಾದ ಲೇಡಿ ಸೂಪರ್‌ ಸ್ಟಾರ್

BGT 2024-25: Virat Kohli returns to form in Aussies

BGT 2024-25: ಆಸೀಸ್‌ ನಲ್ಲಿ ಲಯಕ್ಕೆ ಮರಳಿದ ವಿರಾಟ್‌ ಕೊಹ್ಲಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರು ಪಾಲು

Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

Emergency: ಹತ್ತಾರು ವಿಳಂಬದ ಬಳಿಕ ಕೊನೆಗೂ ಕಂಗನಾ ʼಎಮರ್ಜೆನ್ಸಿʼ ರಿಲೀಸ್ ಗೆ ಡೇಟ್‌ ಫಿಕ್ಸ್

IPL Mega Auction: 13-year-old boy in mega auction: Who is Vaibhav Suryavanshi?

IPL Mega Auction: ಮೆಗಾ ಹರಾಜಿನಲ್ಲಿ 13ರ ಬಾಲಕ: ಯಾರಿದು ವೈಭವ್‌ ಸೂರ್ಯವಂಶಿ

2

Mangaluru: ಹೆದ್ದಾರಿ ಬದಿ ನಿಲ್ಲುವ ವಾಹನ; ಅಪಾಯಕ್ಕೆ ಆಹ್ವಾನ

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

Gujarat: ಹಿರಿಯ ವಿದ್ಯಾರ್ಥಿಗಳ Ragging-ಪ್ರಥಮ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿ ಸಾ*ವು

1

Puttur: ಕಲ್ಪವೃಕ್ಷಕ್ಕೆ ಮರುಜೀವವಿತ್ತ ಎಂಜಿನಿಯರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.