ಕೋವಿಡ್ ನಿಯಂತ್ರಣಕ್ಕೆ ಕೇಂದ್ರ- ರಾಜ್ಯ ಸರ್ಕಾರ ಕ್ರಮ: ಭೂಸನೂರ
Team Udayavani, May 7, 2020, 5:18 PM IST
ಸಿಂದಗಿ: ಕೋವಿಡ್ ನಿಯಂತ್ರಣಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿವೆ. ಲಾಕ್‌ಡೌನ್‌ನಿಂದ ನಿರಾಶ್ರಿತರಾದ ಅನೇಕ ಕುಟುಂಬಗಳಿಗೆ ನೆರವು ನೀಡಿ ಧೈರ್ಯ ತುಂಬುವ ಕೆಲಸ ಮಾಡಲಾಗುತ್ತಿದೆ ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.
ಇತ್ತೀಚೆಗೆ ಪಟ್ಟಣದ ತಹಶೀಲ್ದಾರ್ ಕಚೇರಿಗೆ ಆಗಮಿಸಿದ ನಿರಾಶ್ರಿತರಿಗಾಗಿ ತಾಲೂಕಾ ಆಡಳಿತ ಹಮ್ಮಿಕೊಂಡ ಅನ್ನ ದಾಸೋಹ ಕೇಂದ್ರಕ್ಕೆ ಆಹಾರ ಧಾನ್ಯ ದೇಣಿಗೆ ನೀಡಿ ಅವರು ಮಾತನಾಡಿದರು. ಲಾಕ್‌ಡೌನ್‌ನಿಂದ ಸಂಕಷ್ಟಕ್ಕೊಳಗಾದ ನಿರ್ಗತಿಕರು, ಕಡು ಬಡವರಿಗೆ ತಾಲೂಕು ಆಡಳಿತದಿಂದ ತಹಶೀಲ್ದಾರ್ ಸಂಜೀವಕುಮಾರ ದಾಸರ ನೇತೃತ್ವದಲ್ಲಿ ದಾಸೋಹ ಕಾರ್ಯ ನಡೆಯುತ್ತಿರುವುದು ಶ್ಲಾಘನೀಯ. ಈ ದಾಸೋಹ ಕೇಂದ್ರಕ್ಕೆ ಆಹಾರ ದಾನ್ಯಗಳನ್ನು ನೀಡುವ ಜೊತೆಗೆ ಆಲಮೇಲ ತಾಲೂಕಿನಲ್ಲಿನ ಕ್ಷೌರಿಕ ವೃತ್ತಿಯನ್ನೇ ನಂಬಿ ಜೀವನ ನಡೆಸುತ್ತಿರುವ ಹಡಪದ ಸಮಾಜದ 50 ಕುಟುಂಬಗಳಿಗೆ ಆಹಾರದ ಕಿಟ್ ನೀಡಲಾಗಿದೆ ಎಂದು ಹೇಳಿದರು.
ಶಾಸಕ ರಮೇಶ ಭೂಸನೂರ ಅವರು ತಾಲೂಕು ಆಡಳಿತದ ಅನ್ನದಾಸೋಹ ಕೇಂದ್ರಕ್ಕೆ 10 ಕ್ವಿಂಟಲ್ ಅಕ್ಕಿ, 5 ಕ್ವಿಂಟಲ್ ಸಕ್ಕರೆ, 5 ಕ್ವಿಂಟಲ್ ರವೆ ಹಾಗೂ 30 ಕೆಜಿ ಡಾಲ್ಡಾ ನೀಡಿದರು. ಬಿಜೆಪಿ ಮಂಡಳ ಅಧ್ಯಕ್ಷ ಈರಣ್ಣ ರಾವೂರ, ಸಂತೋಷ ಪಾಟೀಲ ಡಂಬಳ ಮಾತನಾಡಿದರು. ತಹಶೀಲ್ದಾರ್ ಸಂಜೀವಕುಮಾರ ದಾಸರ ಮಾತನಾಡಿ, ತಾಲೂಕು ಆಡಳಿತದಿಂದ ಅನೇಕ ದಿನಗಳಿಂದ ಅನ್ನ ದಾಸೋಹ ನಡೆಯುತ್ತಿದೆ. ಪ್ರತಿ ನಿತ್ಯ ಅನೇಕ ಬಡ ಹಾಗೂ ನಿರಾಶ್ರಿತರು ಇಲ್ಲಿ ಊಟ ಮಾಡುತ್ತಿದ್ದಾರೆ. ಇದೊಂದು ಮಾನವೀಯ ಕಾರ್ಯ. ದಾನಿಗಳು ನಿತ್ಯವು ಇದಕ್ಕೆ ಸಹಾಯ ಹಸ್ತ ನೀಡುತ್ತಿದ್ದಾರೆ. ನಾವು ದಿನಾಲು 2 ಹೊತ್ತು ಊಟದ ವ್ಯವಸ್ಥೆ ಮಾಡುತ್ತಿದ್ದೇವೆ. ಆದರೆ ಇನ್ನು ಮುಂದೆ ದಾನಿಗಳು ಆಹಾರ ಧಾನ್ಯ ಕೊಡಲು ಮುಂದಾದಲ್ಲಿ ದಿನಕ್ಕೆ 3 ಬಾರಿ ಊಟದ ವ್ಯವಸ್ಥೆ ಮಾಡಲಾಗುವುದು ಎಂದರು.
ಇದೇ ಸಂದಭದಲ್ಲಿ ಮಾಜಿ ಶಾಸಕ ರಮೇಶ ಭೂಸನೂರ ಅವರು ಪತ್ರಕರ್ತರಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ವಿತರಿಸಿದರು. ಪುರಸಭೆ ಸದಸ್ಯ ಮಹಾಂತಗೌಡ ಬಿರಾದಾರ, ಸಿದ್ದು ಬುಳ್ಳಾ, ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ, ಸುನಂದಾ ಯಂಪುರೆ, ಅನಸುಬಾಯಿ ಪರಗೊಂಡ, ರವಿ ನಾಯ್ಕೋಡಿ, ಸಿದ್ರಾಯ ಪೂಜಾರಿ, ಶಿವು ಆಲಮೇಲ, ಗುರು ತಳವಾರ, ಸಾಯಬಣ್ಣ ದೇವರಮನಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ಹೊಸ ಸೇರ್ಪಡೆ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.