ಚೀನ ಮೇಲಿನ ಆರೋಪಕ್ಕೆ ಅಮೆರಿಕ ಸಾಕ್ಷ್ಯ ಕೊಟ್ಟಿಲ್ಲ
Team Udayavani, May 6, 2020, 2:28 PM IST
ಜಿನಿವಾ: ಕೋವಿಡ್ ವುಹಾನ್ ಪ್ರಯೋಗಾಲಯದಲ್ಲಿ ಹುಟ್ಟಿಕೊಂಡಿದೆ ಎಂಬ ಅಮೆರಿಕ ಅಧ್ಯಕ್ಷರ ಹೇಳಿಕೆಗೆ ಪೂರಕವಾದ ಸಾಕ್ಷ್ಯಗಳನ್ನು ಅ ದೇಶ ನೀಡಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ವೈರಸ್ ಮೂಲಕ್ಕೆ ಸಂಬಂಧಿಸಿದಂತೆ ಅಮೆರಿಕದಿಂದ ಯಾವುದೇ ನಿರ್ದಿಷ್ಟ ಪುರಾವೆಗಳು ಲಭ್ಯವಾಗಿಲ್ಲ. ಈ ಕಾರಣದಿಂದ ಅಮೆರಿಕ ಆರೋಪವು ನಮ್ಮ ದೃಷ್ಟಿಕೋನದಲ್ಲಿ ಊಹಾತ್ಮಕವಾಗಿಯೇ ಉಳಿದಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ ತುರ್ತು ನಿರ್ದೇಶಕ ಮೈಕೆಲ್ ರಯಾನ್ ಹೇಳಿದ್ದಾರೆ.
ಚೀನದ ವುಹಾನ್ ನಗರದಲ್ಲಿರುವ ವನ್ಯಜೀವಿ ಮಾಂಸ ಮಾರುಕಟ್ಟೆ (ವೆಟ್ ಮಾರ್ಕೆಟ್)ಯಲ್ಲಿ ಪ್ರಾಣಿಗಳಿಂದ ಮನುಷ್ಯನಿಗೆ ಈ ವೈರಸ್ ಹರಡಿರುವ ಸಾಧ್ಯತೆ ಇದೆ ಎಂದು ವಿಜ್ಞಾನಿಗಳು ಹೇಳಿದ್ದಾರೆ. ನಂಬಿದ್ದಾರೆ. ಚೀನ ರೋಗವನ್ನು ಸರಿಯಾಗಿ ನಿರ್ವಹಿಸಿಲ್ಲ ಎಂದು ಈ ವರೆಗೆ ಆರೋಪಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ವೈರಸ್ನ ಉಗಮ ಸ್ಥಾನ ವುಹಾನ್ ಪ್ರಯೋಗಾಲಯ ಎಂಬುದನ್ನು ಹಲವು ಸಂದರ್ಭಗಳಲ್ಲಿ ಉಲ್ಲೇಖೀಸಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಪುರವಾವೆಗಳಿವೆ ಎಂದೂ ವಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Russia; ಅಭಿವೃದ್ಧಿಪಡಿಸಲಾದ ಕ್ಯಾನ್ಸರ್ ಲಸಿಕೆ ಉಚಿತವಾಗಿ ಲಭ್ಯ
Israel ನಡೆಸಿದ ಭಾರೀ ದಾಳಿಗೆ ಸಿರಿಯಾದಲ್ಲಿ ಲಘು ಭೂಕಂಪನ!
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.