ವಾರದ ಎಲ್ಲ ದಿನ ವಹಿವಾಟಿಗೆ ಸಮ್ಮತಿ
ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯವಹರಿಸಬೇಕು: ಎಸ್ಪಿ ಶ್ರೀನಿವಾಸಗೌಡ
Team Udayavani, May 6, 2020, 2:27 PM IST
ಸಾಂದರ್ಭಿಕ ಚಿತ್ರ
ಹಾಸನ: ವಾರದಲ್ಲಿ ಮೂರು ದಿನ ಮಾತ್ರ ಆರ್ಥಿಕ ಚಟುವಟಿಕೆಗಳಿಗೆ ಅನುಮತಿ ನೀಡಿದ್ದ ಹಾಸನಜಿಲ್ಲಾಡಳಿತವು ಈಗ ದಿಢೀರನೆ ತನ್ನ ನಿರ್ಧಾರವನ್ನು ಬದಲಿಸಿ ವಾರದ ಎಲ್ಲ 7
ದಿನವೂ ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆವರೆಗೆ ವ್ಯಾಪಾರ, ವಹಿವಾಟು ನಡೆಸಲು ಅವಕಾಶ ನೀಡಿದೆ. ಜಿಲ್ಲಾಧಿಕಾರಿ ಆರ್.ಗಿರೀಶ್ ಹಾಗೂ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಆರ್.ಶ್ರೀನಿವಾಸ ಗೌಡ ಅವರು ಪ್ರತ್ಯೇಕವಾಗಿ ಈ ಬಗ್ಗೆ ಮಾಹಿತಿ ನೀಡಿ, ಕೋವಿಡ್ ನಿಯಂತ್ರಣ ಕ್ರಮಗಳಿಗೆ ಒತ್ತು ನೀಡಿ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ವ್ಯವಹರಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಆರ್ಥಿಕತೆಗೆ ಒತ್ತು ನೀಡುವ ಉದ್ದೇಶ: ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿ, ಮೇ 17ರ ವರೆಗೆ ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ವಾರದಲ್ಲಿ ಮೂರು ದಿನ ಮಾತ್ರ ಹಾಸನ ಜಿಲ್ಲೆಯಲ್ಲಿ ಮೂರು ದಿನಗಳು ಮಾತ್ರ ವ್ಯಾಪಾರ, ವಹಿವಾಟಿಗೆ ಅನುಮತಿ ನೀಡಲಾಗಿತ್ತು. ಆದರೆ ಹಾಸನ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ವರದಿಯಾಗಿರುವುದರಿಂದ ಹಸಿರು ಪಟ್ಟಿಯಲ್ಲಿದೆ. ಹಾಗಾಗಿ ಆರ್ಥಿಕ ಚಟುವಟಿಕೆಗೆ ಒತ್ತು ನೀಡುವ ಉದ್ದೇಶದಿಂದ ಈಗ ವಾರದ ಎಲ್ಲ 7 ದಿನಗಳೂ ಸರ್ಕಾರದ ಅನುಮೋದಿತ ವ್ಯವಹಾರಗಳನ್ನು ಬೆಳಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದರು.
ಶಾಲಾ-ಕಾಲೇಜುಗಳಿಗೆ ನಿಬಂಧ: ವಾಣಿಜ್ಯ ಚಟುವಟಿಕೆಗಳು ವಾರದ 7 ದಿನ ನಡೆದರೂ ಶಾಲಾ-ಕಾಲೇಜು, ತರಬೇತಿ ಸಂಸ್ಥೆಗಳು, ಜಿಮ್ ಗಳನ್ನು ತೆರೆಯುವಂತಿಲ್ಲ. ಹೊರ ಜಿಲ್ಲೆಗೆ
ಅನಿವಾರ್ಯವಾಗಿ ಹೋಗಬೇಕಾದವರು ಸಂಬಂಧಪಟ್ಟ ಪೊಲೀಸ್ ಠಾಣೆ ಅಥವಾ ಎಸ್ಪಿ ಕಚೇರಿಯಲ್ಲಿ ಪಾಸ್ ಪಡೆಯುವುದು ಕಡ್ಡಾಯ. ಕೆಎಸ್‌ಪಿ ಆ್ಯಪ್ ಮೂಲಕ ಅರ್ಜಿ ಸಲ್ಲಿಸಿ ಪಾಸ್ ಪಡೆಯಬಹುದು ಎಂದು ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಆರ್. ಶ್ರೀನಿವಾಸಗೌಡ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಲಾಕ್‌ಡೌನ್ ಬಹುತೇಕ ಯಶಸ್ವಿಯಾಗಿದೆ. ಇದುವರೆಗೂ ಹಾಸನ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಕರಣ ದಾಖಲಾಗಿಲ್ಲ. ಹಾಗಾಗಿ ಹಸಿರು ವಲಯದಲ್ಲಿ ಇಷ್ಟು ದಿನ ಸ್ಥಾನಪಡೆದುಕೊಂಡು ಬಂದಿರುವ ಹಾಸನ ಜಿಲ್ಲೆ ಯಲ್ಲಿ ಮುಂದೆಯೂ ಕೋವಿಡ್ ಪ್ರಕರಣಗಳು ದಾಖಲಾಗದಂತೆ ಸಾರ್ವಜನಿಕರು ಎಚ್ಚರ ವಹಿಸಬೇಕು. ಸಾರ್ವಜನಿಕರು ಹೊರ ಬರದೆ ಮನೆಯಲ್ಲಿಯೇ ಇದ್ದು ಸಹಕರಿಸಬೇಕು. ಅನಿವಾರ್ಯ ಸಂದರ್ಭಗಳಲ್ಲಿ ಹೊರಬರಬೇಕಾದರೂ ಮಾಸ್ಕ್ ಧಾರಣೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಇಷ್ಟು ದಿವಸ ಹಸಿರು ಜಿಲ್ಲೆಯಾಗಿರುವಂತೆ ಮುಂದೆಯೂ ಕೂಡ ಪ್ರಕರಣ ದಾಖಲಾಗದಂತೆ ಸಾರ್ವಜನಿಕರು ಸಹಕರಿಸಬೇಕು ಎಂದರು.
ನಿಯಮ ಉಲ್ಲಂಘಿಸಿದರೆ ದಂಡ: ಎಸ್ಪಿ ಎಚ್ಚರಿಕೆ
ವ್ಯಾಪಾರ, ವಹಿವಾಟು ಸಂದರ್ಭದಲ್ಲಿ ವ್ಯಾಪಾರಿಗಳು ಹಾಗೂ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್ ಧಾರಣೆ ಮತ್ತು ಸ್ಯಾನಿಟೈಸರ್ ಬಳಕೆ ಕಡ್ಡಾಯ. ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ ನಿಯಮ ಉಲ್ಲಂಘನೆ ಮಾಡಿದರೆ ಮಾಡಿದರೆ ದಂಡ ವಿಧಿಸುವುದಾಗಿ ಎಸ್ಪಿ ಶ್ರೀನಿವಾಸಗೌಡ ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.