ಎಣ್ಣೆ ಆಸೆಗೆ ತಿಂದರು ದೊಣ್ಣೆ ಏಟು!

ಮೂರು ಕಿ.ಮೀ ನಡೆದು ಬಂದ ಮದ್ಯಪ್ರಿಯರು ಮದ್ಯದಂಗಡಿಗೆ ಮುಗಿಬಿದ್ದ ಮಂದಿ

Team Udayavani, May 6, 2020, 3:22 PM IST

5-May-15

ಸಾಂದರ್ಭಿಕ ಚಿತ್ರ

ವಾಡಿ: ಲಾಕ್‌ಡೌನ್‌, ಸೀಲ್‌ಡೌನ್‌ ಹಾಗೂ ಕಂಟೇನ್ಮೆಂಟ್‌ ಜೋನ್‌ ಸಂಕಷ್ಟದಲ್ಲಿರುವ ಪಟ್ಟಣದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಿಲ್ಲವಾದರೂ, ಮದ್ಯ ಪ್ರಿಯರು ಮೂರು ಕಿ.ಮೀ ದೂರದ ಇಂಗಳಗಿ ಗ್ರಾಮದ ಎಂಎಸ್‌ ಐಎಲ್‌ ಮದ್ಯದಂಗಡಿ ಎದುರು ಪಾಳೆ ಹಚ್ಚಿ ಪೊಲೀಸರಿಂದ ಲಾಠಿ ಏಟು ತಿಂದ ಪ್ರಸಂಗ ಮಂಗಳವಾರ ನಡೆದಿದೆ.

ವಾಡಿ ನಗರ ಸೇರಿದಂತೆ ಶಹಾಬಾದ, ರಾವೂರ, ಕುಂದನೂರು, ಹಳಕರ್ಟಿ, ಕಮರವಾಡಿ, ಲಕ್ಷ್ಮೀಪುರವಾಡಿ ಗ್ರಾಮಗಳಿಂದ ಇಂಗಳಗಿಗೆ ಆಗಮಿಸಿದ್ದ ಸಾವಿರಾರು ಜನರು ಸಾಮಾಜಿಕ ಅಂತರವನ್ನು ಗಾಳಿಗೆ ತೂರುವ ಮೂಲಕ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. ಕೆಲವರಂತೂ ಬೆಳಗ್ಗೆ 7 ಗಂಟೆಗೆ ಪಾಳಿ ಹಚ್ಚಿದ್ದರು. ಬೈಕ್‌ ಮತ್ತು ಕಾರುಗಳಲ್ಲಿ ಬರುತ್ತಿದ್ದ ಯುವಕರ ತೆಕ್ಕೆಯಲ್ಲಿ ಮದ್ಯದ ಬಾಟಲಿಗಳೇ ಕಾಣುತ್ತಿದ್ದವು. ನಮಗೆ ಎಣ್ಣೆ ಸಿಗುತ್ತೋ ಇಲ್ಲವೋ ಎಂಬಂತೆ ಜನರು ಕಿಕ್ಕಿರಿದು ಸೇರಿ ಗದ್ದಲಕ್ಕೆ ಕಾರಣವಾದರು. ಇದರಿಂದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

ಮದ್ಯದಂಗಡಿಗೆ ಮುಗಿಬಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. ಮದ್ಯ ಖರೀದಿಸಲು ಉದ್ದದ ಸಾಲು ಒಂದೆಡೆಯಾದರೆ, ಗೆಳೆಯರನ್ನು ಪಾಳಿಗೆ ನಿಲ್ಲಲು ಹೇಳಿ ದೂರದಲ್ಲಿ ಜಮಾಯಿಸಿದ್ದ ಯುವಕರ ಗುಂಪು ಮತ್ತೂಂದೆಡೆ ನಿಂತಿತ್ತು. ಕೇವಲ ಮೂರು ತಾಸಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಮದ್ಯ ಮಾರಾಟವಾಗಿದ್ದು, ಮದ್ಯ ಸಿಗದೆ ಅನೇಕರು ನಿರಾಸೆಯಿಂದ ಊರಿಗೆ ಮರಳಿದರು. ಪಿಎಸ್‌ಐ ದಿವ್ಯಾ ಮಹಾದೇವ್‌, ಎಎಸ್‌ಐ ವೆಂಕಟೇಶ ಹಾಗೂ ಸಿಬ್ಬಂದಿ ಬಂದೋಬಸ್ತ್ ಒದಗಿಸಿದ್ದರು.

ಮದ್ಯ ವಂಚಿತ ಗ್ರಾಮಸ್ಥರ ಅಳಲು
ನಮ್ಮೂರಿನಲ್ಲಿ ಎಂಎಸ್‌ಐಎಲ್‌ ಮದ್ಯದ ಅಂಗಡಿಯಿದ್ದು, ನಮಗೆ ಮದ್ಯ ಖರೀದಿಸಲು ಅವಕಾಶವಿಲ್ಲದಂತೆ ಆಗಿದೆ. ವಾಡಿ, ಶಹಾಬಾದ ಹಾಗೂ ಇನ್ನಿತರ ಗ್ರಾಮದ ಜನರೇ ಹೆಚ್ಚು ಸೇರಿದ್ದಾರೆ. ಇದು ಗ್ರಾಮದ ಮದ್ಯ ಪ್ರಿಯರಿಗೆ ಅನ್ಯಾಯ ಮಾಡಿದಂತಾಗಿದೆ. ಕೂಡಲೇ ಮದ್ಯ ಖರೀದಿಸಲು ಸ್ಥಳೀಯರಿಗೆ ಮೊದಲ ಆದ್ಯತೆ ನೀಡುವಂತೆ ಆದೇಶಿಸಬೇಕು ಎಂದು ಇಂಗಳಗಿಯ ಕೆಲ ಗ್ರಾಮಸ್ಥರು ಪಿಡಿಒ ರೇಶ್ಮಾ ಕೋತ್ವಾಲ್‌ ಅವರಿಗೆ
ಮೌಖೀಕವಾಗಿ ದೂರು ನೀಡಿದ್ದಾರೆ.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ದೇಶದ ಆರ್ಥಿಕತೆಗೆ ‘ಸಹಕಾರʼದ ಕೊಡುಗೆ ಶ್ರೇಷ್ಠ: ಸಚಿವ ಈಶ್ವರ ಖಂಡ್ರೆ

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Bidar: ವಾಂತಿ-ಭೇದಿ… ವಸತಿ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

Lokayukta Raid: ಜಿಲ್ಲಾ ತರಬೇತಿ‌ ಕೇಂದ್ರದ‌ ಅಧಿಕಾರಿ‌ ನಿವಾಸದಲ್ಲಿ ದಾಖಲೆಗಳ ಪರಿಶೀಲನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.