ಕಾವ್ರಾಡಿ ಗ್ರಾ.ಪಂ: ಜಲಜೀವನ್ ಮಿಷನ್ ಸಭೆ
Team Udayavani, May 6, 2020, 6:58 AM IST
ಬಸ್ರೂರು: ಕಾವ್ರಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜಲಜೀವನ್ ಮಿಷನ್ ಯೋಜನೆಯಂತೆ ನೀರಿನ ಸ್ಥಿತಿಗತಿ ಬಗ್ಗೆ ಮೌಲ್ಯಮಾಪನ ಮತ್ತು ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆಯ ವಿಶೇಷ ಸಭೆಯನ್ನು ಕರೆಯಲಾಗಿದ್ದು ಗ್ರಾ.ಪಂ.ಅಧ್ಯಕ್ಷೆ ಗೌರಿ ಆರ್. ಶ್ರೀಯಾನ್ ಅಧ್ಯಕ್ಷತೆಯಲ್ಲಿ ನಡೆಯಿತು.
ಗ್ರಾಮವಾರು ಪ್ರತಿ ಮನೆಗಳಿಗೆ ಕುಡಿ ಯುವ ನೀರು, ಪ್ರತಿಯೊಬ್ಬ ವ್ಯಕ್ತಿಗೆ ತಲಾ 55 ಲೀ. ನಂತೆ ನೀರು ನೀಡಬೇಕಾಗಿದ್ದು ಬಾಕಿ ಇರುವ ಎಲ್ಲ ಮನೆಗಳಿಗೆ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ಮುಂದಿನ ನಾಲ್ಕು ವರ್ಷಗಳ ಯೋಜನೆ ತಯಾರಿಕೆ ಬಗ್ಗೆ ಚರ್ಚಿಸಲಾಯಿತು. ಎಲ್ಲ ವಾರ್ಡುಗಳಲ್ಲಿ ಆದ್ಯತೆಯ ಕಾಮಗಾರಿಯಾದ ಪೈಪ್‌ಲೈನ್ ವಿಸ್ತರಣೆ, ಬಾವಿ ಆಳ ಮಾಡುವುದು ಇತ್ಯಾದಿ ಮತ್ತು ಮುಂದಿನ ದಿನಗಳಲ್ಲಿ ನೀರಿನ ಬವಣೆಯಾಗದಂತೆ ವಾರಾಹಿ ನದಿಯಲ್ಲಿ ಜಾಕ್‌ವೆಲ್ ಮೂಲಕ ನೀರಿನ ಶುದ್ಧೀಕರಣಗೊಳಿಸಿ ಕುಡಿಯುವ ನೀರಿನ ವ್ಯವಸ್ಥೆ ಬಗ್ಗೆ ಮಾತುಕತೆ ನಡೆಯಿತು.
ನೀರಿನ ಬಳಕೆ ಯೋಜನೆ ತಯಾರಿ ಬಗ್ಗೆ ಸಹಾಯಕ ಎಂಜಿನಿಯರ್ ಶರತ್ ಮಾರ್ಗದರ್ಶನ ನೀಡಿದರು.
ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷ ಸಂತೋಷ ಶೆಟ್ಟಿ, ಸದಸ್ಯರು, ನೀರು ನೈರ್ಮಲ್ಯ ಸಮಿತಿಯ ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನ ವಾಡಿ ಕಾರ್ಯಕರ್ತೆಯರು, ಆರೋಗ್ಯ ಕಾರ್ಯಕರ್ತೆಯರು, ಶಾಲಾ ಮುಖ್ಯೋ ಪಾಧ್ಯಾಯರು, ಅಧ್ಯಾಪಕರು ಭಾಗವಹಿಸಿ ದ್ದರು. ಗ್ರಾ.ಪಂ. ಕಾರ್ಯ ದರ್ಶಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ ಯೋಜನೆಯ ಮಾಹಿತಿ ನೀಡಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
MUST WATCH
ಹೊಸ ಸೇರ್ಪಡೆ
Bengaluru: ಎಸ್‌ಎಸ್‌ಎಲ್‌ಸಿ ಫೇಲ್ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ
Fraud: ಡ್ರಗ್ಸ್ ಕೇಸ್ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ
Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ ಜನರ ಭೇಟಿ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್‌ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.