ತ್ವರಿತ ಪಾಸ್‌ ವಿತರಣೆಗೆ ಡಿಸಿ ಸೂಚನೆ

ಹೊರ ಜಿಲ್ಲೆಗಳಿಗೆ ತೆರಳುವವರಿಗೆ ಬಸ್‌ ವ್ಯವಸ್ಥೆ ಕಲ್ಪಿಸಿ

Team Udayavani, May 6, 2020, 2:32 PM IST

5-May-34

ಶಿವಮೊಗ್ಗ: ಹೊರ ಜಿಲ್ಲೆಗಳಿಗೆ ಒಂದು ಅವಧಿಗೆ ಮಾತ್ರ ತೆರಳುವವರಿಗೆ ಈಗಾಗಲೇ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್‌ ಹಂತದಲ್ಲಿ ವನ್‌ ವೇ ಪಾಸ್‌ ನೀಡಲಾಗುತ್ತಿದ್ದು, ವಿಳಂಬಕ್ಕೆ ಅವಕಾಶವಿಲ್ಲದಂತೆ ಅರ್ಜಿ ಸಲ್ಲಿಸಿದ ಎರಡು ಗಂಟೆ ಒಳಗಾಗಿ ಪಾಸ್‌ ವಿತರಿಸಬೇಕು ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್‌ ಸೂಚನೆ ನೀಡಿದರು.

ಅವರು ಮಂಗಳವಾರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್‌ ಸಂದರ್ಭದಲ್ಲಿ ಈ ಕುರಿತು ಸೂಚನೆ ನೀಡಿದರು. ಅರ್ಜಿಯಲ್ಲಿ ಮೊಬೈಲ್‌ ಸಂಖ್ಯೆ ಸೇರಿದಂತೆ ಕನಿಷ್ಟ ಮಾಹಿತಿಗಳನ್ನು ಮಾತ್ರ ಪಡೆಯಬೇಕು. ಜನರನ್ನು ಕಾಯಿಸದೆ ನೇರವಾಗಿ ಅರ್ಜಿಯನ್ನು ಸ್ವೀಕರಿಸಬೇಕು. ಒಂದು ವೇಳೆ ಪಾಸ್‌ ನೀಡಲು ಸಾಧ್ಯವಿಲ್ಲದಿದ್ದರೆ ಅರ್ಜಿ ಸ್ವೀಕರಿಸುವ ಸಂದರ್ಭದಲ್ಲಿಯೇ ತಿಳಿಸಬೇಕು. ಅರ್ಜಿಗಳನ್ನು ತಹಶೀಲ್ದಾರ್‌ ಕಚೇರಿಯಲ್ಲಿ ಸ್ವೀಕರಿಸಬೇಕು. ಪಾಸ್‌ಗಳನ್ನು ಮೊಬೈಲ್‌ ಸಂಖ್ಯೆ ತಿಳಿಸಿ ನಾಡ ಕಚೇರಿಯಲ್ಲಿ ಪಡೆಯಬೇಕು ಎಂದು ಹೇಳಿದರು.

ಹೊರ ಜಿಲ್ಲೆಗಳಿಗೆ ತೆರಳುವವರು ಬಸ್‌ ಸೌಲಭ್ಯ ಬಯಸಿದರೆ ಕಲ್ಪಿಸಬೇಕು. ಯಾವುದಾದರೂ ಒಂದು ಊರಿಗೆ ಒಂದು ಬಸ್‌ ನಲ್ಲಿ ಪ್ರಯಾಣಿಸುವಷ್ಟು ಜನರಿಂದ ವಿನಂತಿ ಬಂದರೆ, ಕೆಎಸ್‌ ಆರ್‌ಟಿಸಿ ಅಧಿಕಾರಿಗಳಿಗೆ ಮಾತನಾಡಿ ಬಸ್‌ ವ್ಯವಸ್ಥೆ ಮಾಡಿ ಅರ್ಜಿದಾರರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ಮಾಹಿತಿ ಕಡ್ಡಾಯ: ಜಿಲ್ಲೆಯ ಎಪಿಎಂಸಿಗಳಿಗೆ ಸೇರಿದಂತೆ ಕೈಗಾರಿಕಾ ವಲಯಗಳಿಗೆ ಹೊರ ರಾಜ್ಯಗಳಿಂದ ಲಾರಿಗಳಲ್ಲಿ ಆಗಮಿಸುವವರ ಸಂಪೂರ್ಣ ವಿವರಗಳನ್ನು ಪಡೆಯಬೇಕು. ಹೊರ ರಾಜ್ಯಗಳಿಂದ ಲಾರಿಗಳಲ್ಲಿ ಅನ ಧಿಕೃತವಾಗಿ ಯಾರೂ ಜಿಲ್ಲೆ ಪ್ರವೇಶಿಸುವಂತಿಲ್ಲ. ಎಪಿಎಂಸಿಗಳಿಗೆ ಆಗಮಿಸುವ ಲಾರಿಗಳ ಚಾಲಕರ ವಿವರ, ಒಂದು ವೇಳೆ ಹಮಾಲಿಗಳು ಆಗಮಿಸಿದ್ದರೆ ಅವರ ವಿವರ, ಆಗಮಿಸಿದ ಹಾಗೂ ಹಿಂತಿರುಗುವ ದಿನಾಂಕ ಇತ್ಯಾದಿಗಳನ್ನು ಎಪಿಎಂಸಿ ಕಾರ್ಯದರ್ಶಿಗಳು ಪಡೆದು ಪೊಲೀಸರಿಗೆ ಸಲ್ಲಿಸಬೇಕು. ಯಾವುದೇ ಕಾರಣಕ್ಕೂ ಲಾರಿಯಲ್ಲಿ ಆಗಮಿಸುವವರು ಎಪಿಎಂಸಿ ಆವರಣದ ಹೊರಗೆ ಅಡ್ಡಾಡುವಂತಿಲ್ಲ. ಇದನ್ನು ಉಲ್ಲಂಘಿಸಿದರೆ ಸಂಬಂಧಪಟ್ಟ ಸಗಟು ಡೀಲರ್‌ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.

ಅನಾವಶ್ಯಕವಾಗಿ ಹೊರ ಬರಬೇಡಿ: ಲಾಕ್‌ಡೌನ್‌ ಸಡಿಲಿಕೆ ಮಾಡಿದ್ದರೂ, ಸಾರ್ವಜನಿಕರು ಅಗತ್ಯ ಸಂದರ್ಭಗಳಲ್ಲಿ ಮಾತ್ರ ಮನೆಯಿಂದ ಹೊರಗೆ ಬರಬೇಕು. ಅಗತ್ಯ ಸಾಮಗ್ರಿಗಳನ್ನು ಮನೆಯ ಸಮೀಪದಲ್ಲೇ ಖರೀದಿಸಬೇಕು. ಯಾವುದೇ ಅಂಗಡಿಗಳ ಮುಂದೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳದೇ ವ್ಯಾಪಾರ ನಡೆಸುತ್ತಿದ್ದರೆ, ಅಂತಹ ಅಂಗಡಿ ಮಾಲಿಕರಿಗೆ ದಂಡ ವಿಧಿಸುವಂತೆ ಜಿಲ್ಲಾ ಧಿಕಾರಿ ಅವರು ತಿಳಿಸಿದರು.

ಸೆಲೂನ್‌ ಅವಕಾಶ: ಜಿಲ್ಲೆಯಲ್ಲಿ ಸೆಲೂನ್‌ ತೆರೆಯಲು ಅನುಮತಿ ನೀಡಲಾಗಿದೆ. ಆದರೆ ಕಡ್ಡಾಯವಾಗಿ ಮಾಸ್ಕ್ ಮತ್ತು ಕೈಗವಸು ಸೇರಿದಂತೆ ಎಲ್ಲಾ ಅಗತ್ಯ ಮುಂಜಾಗರೂಕತೆ ವಹಿಸಿರಬೇಕು ಎಂದರು. ಪೊಲೀಸ್‌ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ಮತ್ತಿತರರು ಇದ್ದರು.

ಟಾಪ್ ನ್ಯೂಸ್

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

8

Holehonnuru: ಕಿರು ಅರಣ್ಯ ಪ್ರದೇಶದಲ್ಲಿ ಕಡವೆ ಬೇಟೆ; ಆರೋಪಿ ಬಂಧನ

6-hosanagar

Hosanagara: ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್ ಪಲ್ಟಿ; ದೇಗುಲಕ್ಕೆ ಹಾನಿ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

Shimoga: ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ನಾಪತ್ತೆಯಾಗಿದ್ದ ಮೂವರ ಶವ ಪತ್ತೆ

K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ

K. S. Eshwarappa: ಮುಸ್ಲಿಮರಿಗೆ ಮೀಸಲು ನೀಡಿದರೆ ಸಂತರ ನೇತೃತ್ವದಲ್ಲಿ ದಂಗೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

2

Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

1

Sullia: ಬಿಎಸ್ಸೆನ್ನೆಲ್‌ ಟವರ್‌ಗೆ ಸೋಲಾರ್‌ ಪವರ್‌!

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.