covid 19 ವೈರಸ್; ಭಾರತದಲ್ಲಿ 50 ಸಾವಿರಕ್ಕೆ ತಲುಪಿದ ಸಂಖ್ಯೆ,3 ದಿನದಲ್ಲಿ 10 ಸಾವಿರ ಪ್ರಕರಣ
Team Udayavani, May 7, 2020, 3:02 PM IST
ನವದೆಹಲಿ:ಕೋವಿಡ್ 19 ವೈರಸ್ ತಡೆಗಟ್ಟುವ ಹೋರಾಟ ಮುಂದುವರಿದಿರುವ ನಡುವೆಯೇ ಭಾರತದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 50ಸಾವಿರಕ್ಕೆ ತಲುಪಿದೆ. ಕೇರಳದಲ್ಲಿ ಮೊದಲ ಪ್ರಕರಣ ಪತ್ತೆಯಾದ ನಾಲ್ಕು ತಿಂಗಳ ಬಳಿಕ ಕೋವಿಡ್ ಪ್ರಕರಣದ ಸಂಖ್ಯೆ ಏರಿಕೆಯಾಗುತ್ತ ಸಾಗಿತ್ತು.
ಇದೀಗ ದೇಶದಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 50,545ಕ್ಕೆ ತಲುಪಿದೆ. ಇದರಲ್ಲಿ ಮಹಾರಾಷ್ಟ್ರದಲ್ಲಿಯೇ ಅತೀ ಹೆಚ್ಚು ಪ್ರಕರಣ ವರದಿಯಾಗಿದೆ. ಕಳೆದ ಮೂರು ದಿನಗಳಲ್ಲಿ ಹತ್ತು ಸಾವಿರ ಸೋಂಕಿತರ ಪತ್ತೆಯಾಗಿದೆ ಎಂದು ಎನ್ ಡಿಟಿವಿ ವರದಿ ಮಾಡಿದೆ.
ಭಾರತದಲ್ಲಿ ಈವರೆಗೆ 14,183 ಮಂದಿ ಕೋವಿಡ್ 19 ವೈರಸ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ ಚಾರ್ಜ್ ಆಗಿದ್ದಾರೆ. ಮೇ17ರವರೆಗೆ ಲಾಕ್ ಡೌನ್ ಮುಂದುವರಿಯಲಿದೆ. ಜಾಗತಿಕವಾಗಿ 37 ಲಕ್ಷ ಕೋವಿಡ್ 19 ವೈರಸ್ ಪ್ರಕರಣ ಪತ್ತೆಯಾಗಿದೆ. ಸುಮಾರು 2.52ಲಕ್ಷ ಮಂದಿ ಸಾವನ್ನಪ್ಪಿದ್ದು, ಅಮೆರಿಕ ಕೋವಿಡ್ 19 ವೈರಸ್ ಗೆ ತತ್ತರಿಸಿ ಹೋಗಿದೆ ಎಂದು ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.