ರೈತರಿಗೆ ಟೋಲ್ ವಿನಾಯಿತಿ: ನಿರ್ಧಾರ ತಿಳಿಸುವಂತೆ ಕೇಂದ್ರಕೆ ಕೋರ್ಟ್ ಸೂಚನೆ
Team Udayavani, May 7, 2020, 12:29 PM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಕೋವಿಡ್-19 ಹಾಗೂ ಲಾಕ್‌ಡೌನ್ ಪರಿಣಾಮ ಸಂಕಷ್ಟದಲ್ಲಿರುವ ರೈತರು ತಮ್ಮ ತಮ್ಮ ಕೃಷಿ ಉತ್ಪನ್ನಗಳನ್ನು ಸಾಗಾಣಿಕೆ ಮಾಡುವಾಗ ಅವರಿಗೆ ಟೋಲ್ ಶುಲ್ಕ ಪಾವತಿಯಿಂದ ವಿನಾಯಿತಿ ನೀಡುವ ಬಗ್ಗೆ ಪರಿಶೀಲಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಈ ಕುರಿತು ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ. ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿದೆ. ವಿಚಾರಣೆ ವೇಳೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪರ ವಕೀಲರು ವಾದ ಮಂಡಿಸಿ ಟೋಲ್ ಶುಲ್ಕ ವಿನಾಯಿತಿ ಕುರಿತು ಕಾನೂನಿನಲ್ಲಿರುವ ಅವಕಾಶಗಳ ಬಗ್ಗೆ ನ್ಯಾಯಪೀಠಕ್ಕೆ ತಿಳಿಸಿದರು.
ಅದಕ್ಕೆ, ಲಾಕ್‌ಡೌನ್ ಪರಿಣಾಮವಾಗಿ ಈಗಾಗಲೇ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಮೇಲಾಗಿ ಅವರ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಸಾಗಾಣಿಕೆಯ ಅಡಚಣೆಗಳಿಂದಾಗಿ
ಬೇಕಾ ಬಿಟ್ಟಿ ಬೆಲೆಗಳಿಗೆ ಉತ್ಪನ್ನ ಮಾರಾಟ ಮಾಡುವಂತಾಗಿದೆ. ಇಂತಹ ಸಮಯದಲ್ಲಿ ಅವರು ಮಾಡಿದ ಖರ್ಚು ಸಹ ರೈತರಿಗೆ ಸಿಗುತ್ತಿಲ್ಲ. ಹಾಗಾಗಿ, ಕೃಷಿ ಉತ್ಪನ್ನಗಳ ಸಾಗಾಣಿಕೆಗೆ ನಿರ್ದಿಷ್ಟ ಅವಧಿಗೆ ಟೋಲ್ ಶುಲ್ಕ ಪಾವತಿಯಿಂದ ರೈತರಿಗೆ ವಿನಾಯಿತಿ ನೀಡಿದರೆ ಅನುಕೂಲವಾಗಲಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿತು. ಆದ್ದರಿಂದ, ರೈತರು ಕೃಷಿ, ತೋಟಗಾರಿಕೆ ಹಾಗೂ ಹೈನು ಉತ್ಪನ್ನಗಳ ಸಾಗಾಣಿಕೆಗೆ ಟೋಲ್ ಶುಲ್ಕ ಪಾವತಿಯಿಂದ ವಿನಾಯಿತಿ ನೀಡುವ ಕುರಿತ ತೀರ್ಮಾನದ ಬಗ್ಗೆ ಮುಂದಿನ ವಿಚಾರಣೆ ವೇಳೆಗೆ ತಿಳಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿ ನ್ಯಾಯಪೀಠ ವಿಚಾರಣೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ
ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್ ಸೂಚನೆ
Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
MUST WATCH
ಹೊಸ ಸೇರ್ಪಡೆ
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.