ವಿವಾಹಕ್ಕೆ ಕೆಲ ಮಾರ್ಗದರ್ಶಿ ಸೂತ್ರ
Team Udayavani, May 7, 2020, 12:34 PM IST
ಧಾರವಾಡ: ಕೋವಿಡ್ 19 ಸೋಂಕು ಪತ್ತೆ ಆಗಿರುವ ಕಂಟೈನ್‌ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ಜಿಲ್ಲಾದ್ಯಂತ ವಿವಾಹಗಳನ್ನು ನಡೆಸಲು ರಾಜ್ಯ ಸರ್ಕಾರವು ಕೆಲವು ಮಾರ್ಗದರ್ಶಿ ಸೂತ್ರಗಳನ್ನು ಸೂಚಿಸಿದೆ.
ಎಲ್ಲಾ ಸಾಮಾಜಿಕ, ರಾಜಕೀಯ, ಕ್ರೀಡೆ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಗಳು ಮತ್ತು ಇತರ ಸಭೆಗಳನ್ನು ಮೇ 4ರಿಂದ ಜಾರಿಗೆ ಬರುವಂತೆ ಎರಡು ವಾರಗಳ ಅವಧಿಗೆ ನಿಷೇಧಿಸಲಾಗಿದೆ. ಉಳಿದಂತೆ ಮದುವೆಗೆ ಸಂಬಂಧಿಸಿದ ಕೂಟಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಗರಿಷ್ಠ 50ಕ್ಕಿಂತ ಹೆಚ್ಚು ಸಂಖ್ಯೆಯ ಅತಿಥಿಗಳು ಭಾಗವಹಿಸಬಾರದು.
ಸಾರ್ವಜನಿಕ ಸ್ಥಳಗಳಲ್ಲಿ, ಸಮುದಾಯ ಭವನ, ಧಾರ್ಮಿಕ ಸ್ಥಳಗಳಲ್ಲಿ ಮದುವೆಗಳನ್ನು ಹಮ್ಮಿಕೊಳ್ಳಬಾರದು. ವಿವಾಹ ಆಯೋಜನೆಗೆ ಯಾವುದೇ ವಿಶೇಷ ಅನುಮತಿ ಅಗತ್ಯವಿಲ್ಲ. ವಿವಾಹದ ಉದ್ದೇಶಕ್ಕಾಗಿ ಯಾವುದೇ ಅಂತರ ರಾಜ್ಯಗಳ ಸಂಚಾರಕ್ಕೆ ಅನುಮತಿ ಇಲ್ಲ. ಈ ಸಲಹೆಗಳನ್ನು ಉಲ್ಲಂಘಿಸುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುತ್ತದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಡಿಸಿ ದೀಪಾ ಚೋಳನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.