ತ್ಯಾಜ್ಯ ವಿಲೇವಾರಿಗೆ ಸಚಿವರ ಸೂಚನೆ
ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ
Team Udayavani, May 7, 2020, 1:14 PM IST
ಶಿವಮೊಗ್ಗ: ಜಿಪಂ ಸಭಾಂಗಣದಲ್ಲಿ ನಾನಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು
ಶಿವಮೊಗ್ಗ: ಎಲ್ಲಾ ಗ್ರಾಪಂ ವ್ಯಾಪ್ತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕಗಳನ್ನು ಆರಂಭಿಸಿ ತ್ಯಾಜ್ಯ ವಿಲೇವಾರಿಯನ್ನು ಆರಂಭಿಸಲು ತಕ್ಷಣ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಸೂಚನೆ ನೀಡಿದರು.
ಬುಧವಾರ ಜಿಪಂ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಇದುವರೆಗೆ 271 ಗ್ರಾಪಂಗಳ ಪೈಕಿ ಕೇವಲ 53 ಗ್ರಾಪಂಗಳು ಘನತ್ಯಾಜ್ಯ ಘಟಕಗಳಿಗೆ ಜಮೀನು ಗುರುತಿಸಿ ಪ್ರಸ್ತಾವನೆ ಸಲ್ಲಿಸಿದ್ದು, 48 ಪ್ರಸ್ತಾವನೆಗಳಿಗೆ ಅನುಮೋದನೆ ದೊರೆತಿದೆ. ಕೇವಲ 12 ಗ್ರಾಪಂಗಳು ಕಾರ್ಯ ಆರಂಭಿಸಿದ್ದು, ಜಮೀನು ಅಂತಿಮಗೊಳಿಸದ ಗ್ರಾಪಂಗಳು ತಮ್ಮಲ್ಲಿರುವ ಹಳೆ ಕಟ್ಟಡಗಳಲ್ಲಿ ತ್ಯಾಜ್ಯ ವಿಲೇವಾರಿ ಕಾರ್ಯವನ್ನು ಆರಂಭಿಸಬೇಕು. ಈಗಾಗಲೇ ಅನುದಾನ ಬಿಡುಗಡೆಯಾಗಿರುವ ಗ್ರಾಮ ಪಂಚಾಯತ್‌ಗಳು ವಾಹನ ಖರೀದಿ, ಬಕೆಟ್ ಖರೀದಿ, ಶೆಡ್ ನಿರ್ಮಾಣ ಇತ್ಯಾದಿ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸಬೇಕು ಎಂದು ಹೇಳಿದರು.
ಪ್ರತಿ ಮನೆಗೆ ಕುಡಿಯುವ ನೀರು: ಎಲ್ಲಾ ಗ್ರಾಪಂಗಳಲ್ಲಿ ಪ್ರತಿ ಮನೆಗೆ ಕುಡಿಯುವ ನೀರು ಒದಗಿಸುವ ಮನೆ ಮನೆಗೆ ಗಂಗೆ ಯೋಜನೆಯಡಿ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಲು ಸೂಚಿಸಲಾಗಿದೆ. ಈಗಾಗಲೇ ನಲ್ಲಿ ಸಂಪರ್ಕ ಇರುವ ಮನೆಗಳನ್ನು ಹೊಸದಾಗಿ ಕ್ರಿಯಾ ಯೋಜನೆಯಲ್ಲಿ ಸೇರಿಸಬಾರದು. ಜಿಲ್ಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಕಾರ್ಯವನ್ನು ಆಯಾ ಗ್ರಾಪಂಗಳೇ ಇನ್ನು ಮುಂದೆ ನಿರ್ವಹಿಸಬೇಕು ಎಂದು ಸಚಿವರು ಹೇಳಿದರು.
ಪಿಡಿಒಗಳಿಗೆ ಎಚ್ಚರಿಕೆ: ಕೆಲವು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರದೆ, ಶಿವಮೊಗ್ಗ ನಗರದಲ್ಲಿ ವಾಸ್ತವ್ಯವಿದ್ದು ದೂರವಾಣಿಗೂ ಸಿಗದಿರುವ ಬಗ್ಗೆ ದೂರುಗಳು ಬರುತ್ತಿವೆ. ಪಿಡಿಒಗಳು ಕಡ್ಡಾಯವಾಗಿ ಪ್ರತಿದಿನ ಕಚೇರಿಯಲ್ಲಿ ಹಾಜರಿದ್ದು, ಸಾರ್ವಜನಿಕರಿಗೆ ಸ್ಪಂದಿಸಬೇಕು. ತಮ್ಮ ವರ್ತನೆಯನ್ನು ತಿದ್ದಿಕೊಳ್ಳದ ಪಿಡಿಒಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದರು.
ಉದ್ಯೋಗ ಖಾತ್ರಿ ಅನುಷ್ಠಾನ: ಎನ್‌ಆರ್‌ಇಜಿ ಅಡಿ ಈ ವರ್ಷ 218 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದ್ದು, ಎಲ್ಲಾ ಇಲಾಖೆಗಳು ತಮಗೆ ನಿಗದಿಪಡಿಸಿರುವ ಮಾನವ ದಿನಗಳ ಗುರಿಯನ್ನು ಪೂರ್ಣಗೊಳಿಸಬೇಕು. ಸಾಮಾಜಿಕ ಅರಣ್ಯ ಇಲಾಖೆ ಇದುವರೆಗೆ ಯಾವುದೇ ಗುರಿಯನ್ನು ಸಾಧಿ ಸಿಲ್ಲ. ಹಿಂದಿನ ವರ್ಷದ ಅಪೂರ್ಣ ಕಾಮಗಾರಿಗಳನ್ನು ತಕ್ಷಣ ಪೂರ್ಣಗೊಳಿಸಬೇಕು ಎಂದರು.
ತೆರಿಗೆ ನಿಗದಿ ವೈಜ್ಞಾನಿಕವಾಗಿ ಮಾಡಿ: ಪ್ರತಿ ಗ್ರಾಪಂಗಳು ಎರಡು ವರ್ಷಗಳಿಗೊಮ್ಮೆ ಮೌಲ್ಯ ಮಾಪನ ಮಾಡಿ ತೆರಿಗೆಯನ್ನು ವೈಜ್ಞಾನಿಕವಾಗಿ ಮರು ನಿಗದಿಪಡಿಸಬೇಕು ಎಂದು ಗ್ರಾಮೀಣಾವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಕೆ.ಎಲ್.ಅತೀಕ್ ತಿಳಿಸಿದರು.ಇಲಾಖೆ ಆಯುಕ್ತ ಅನಿರುದ್ಧ ಶ್ರವಣ್, ಸಿಇಒ ಎಂ.ಎಲ್. ವೈಶಾಲಿ, ಹಿರಿಯ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ವಿದ್ಯುತ್ ಬೇಲಿ ಸ್ಪರ್ಶಿಸಿ ಕಾಡಾನೆ ಸಾವು; ಜಮೀನು ಮಾಲೀಕನ ಬಂಧನ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Infectious Disease: ರಾಜ್ಯಕ್ಕೂ ಬೇಕಿದೆ “ವಿಷಾಣು ಯುದ್ಧ ಅಭ್ಯಾಸ್”
MUST WATCH
ಹೊಸ ಸೇರ್ಪಡೆ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್ ಗಂಡು ಸಿಂಹ’ ಆಗಮನ
ನ.8 ರಂದು ಕಾಪು ದಂಡತೀರ್ಥ ಪದವಿ ಪೂರ್ವ ಕಾಲೇಜಿನ ರಜತ ಮಹೋತ್ಸವ ಸಮಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.