ಮದ್ಯ ಮಾರಾಟ ಬೇಡವೇ ಬೇಡ
Team Udayavani, May 7, 2020, 1:32 PM IST
ಧಾರವಾಡ: ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧ ಮಾಡುವುದರ ಜೊತೆಗೆ ದೇಶದ ಉಳಿದ ರಾಜ್ಯಗಳಲ್ಲೂ ಮದ್ಯ ನಿಷೇಧಕ್ಕಾಗಿ ಆಯಾ ರಾಜ್ಯಗಳ ಸಿಎಂಗಳು ಸಹ ಗಂಭೀರ ಚಿಂತನೆ ನಡೆಸಬೇಕು ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ ಹೇಳಿದರು.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ರಾಜ್ಯ ಸರ್ಕಾರಗಳು ಒಟ್ಟಾಗಿ ಮದ್ಯ ನಿಷೇಧ ಮಾಡಬೇಕು. ಒಂದು ರಾಜ್ಯದಲ್ಲಿ ಮದ್ಯ ಬಂದ್ ಮಾಡಿದರೆ ಮತ್ತೂಂದು ರಾಜ್ಯದಿಂದ ಆಮದು ಮಾಡಿಕೊಳ್ಳಲಾಗುತ್ತದೆ. ಹೀಗಾಗಿ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳು ಈ ಬಗ್ಗೆ ಪರಾಮರ್ಶಿಸಿ ತೀರ್ಮಾನ ಕೈಗೊಳ್ಳಬೇಕು.
ಇನ್ನೂ ಕರ್ನಾಟಕದ ಸಿಎಂ ಯಡಿಯೂರಪ್ಪ ಕೂಡ ಮದ್ಯ ಸೇವಿಸುವುದಿಲ್ಲ. ಅವರಿಗೆ ಯಾವುದೇ ದುಶ್ಚಟಗಳಿಲ್ಲ. ಅವರಿಗೆ ಇರುವ ಚಟ ಎಂದರೆ ಕೇವಲ ಸಮಾಜ ಸೇವೆ ಮಾಡುವುದು ಹಾಗೂ ರಾಜ್ಯದ ಜನತೆಯ ಹಿತ ಕಾಪಾಡುವುದಷ್ಟೇ. ಹೀಗಾಗಿ ಅವರು ಈ ಬಗ್ಗೆ ಮತ್ತೂಮ್ಮೆ ಚಿಂತನೆ ನಡೆಸಬೇಕು ಎಂದು ಆಗ್ರಹಿಸಿದರು.
ಮದ್ಯ ಮಾರಾಟ ದಿಂದಲೇ ಸರ್ಕಾರದ ಬೊಕ್ಕಸಕ್ಕೆ ಹೆಚ್ಚಿನ ಆದಾಯ ಬರುತ್ತದೆ ಎಂಬುದು ತಪ್ಪು ಕಲ್ಪನೆ. ಸರ್ಕಾರಕ್ಕೆ ಇದಕ್ಕಿಂತಲೂ ಹೆಚ್ಚಿನ ಆದಾಯ ತಂದು ಕೊಡುವ ದೊಡ್ಡ-ದೊಡ್ಡ ಕೈಗಾರಿಕೆಗಳಿವೆ. ಮದ್ಯ ಮಾರಾಟದಿಂದಲೇ ಸರ್ಕಾರಗಳು ನಡೆಯುತ್ತವೆ ಎಂಬುದು ತಪ್ಪು. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಹಾಗೂ ಪ್ರಧಾನ ಮಂತ್ರಿಗಳಿಗೆ ವೈಯಕ್ತಿಕವಾಗಿ ಪತ್ರ ಕೂಡ ಬರೆಯುತ್ತೇನೆ. ಈ ಸಂಬಂಧ ವಿವಿಧ ಮಠಾಧಿಧೀಶರು ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರೊಂದಿಗೂ ಮಾತನಾಡಿದ್ದೇನೆ. ಅವರೂ ಸಹ ಮದ್ಯ ಮಾರಾಟದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.