ಬಿತ್ತನೆ ಆಲೂಗಡ್ಡೆ ದರ ನಿಗದಿ ಮಾಡಿ: ರೇವಣ್ಣ
ತಕ್ಷಣ ಶಾಸಕರ ಸಭೆ ಕರೆದು ಬಿತ್ತನೆ ಆಲೂಗಡ್ಡೆ ಮಾರಾಟ ವ್ಯವಸ್ಥೆ ಬಗ್ಗೆ ಡಿಸಿ ರ್ಚಿಸಲಿ
Team Udayavani, May 7, 2020, 4:50 PM IST
ಸಾಂದರ್ಭಿಕ ಚಿತ್ರ
ಹಾಸನ: ಶಾಸಕರನ್ನು ಕಡೆಗಣಿಸಿ ವರ್ತಕರ ಸಭೆ ನಡೆಸಿ ಬಿತ್ತನೆ ಆಲೂಗಡ್ಡೆ ಮಾರಾಟದ ದಿನ ನಿಗದಿಪಡಿಸಿರುವ ಜಿಲ್ಲಾಧಿಕಾರಿ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಜೆಡಿಎಸ್ ಮುಖಂಡ ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರು, ತಕ್ಷಣವೇ ಶಾಸಕರ ಸಭೆ ಕರೆದು ಬಿತ್ತನೆ ಆಲೂಗಡ್ಡೆ ದರ ನಿಗದಿಪಡಿಸಬೇಕು ಎಂದು ಆಗ್ರಹಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಿಂದಿನ ಜಿಲ್ಲಾಧಿಕಾರಿಗಳು ಶಾಸಕರು, ರೈತ ಮುಖಂಡರು, ವರ್ತಕರ ಸಭೆ ಕರೆದು ಬಿತ್ತನೆ ಆಲೂಗಡ್ಡೆ ದರ ನಿಗದಿ ಹಾಗೂ ಮಾರಾಟ ವ್ಯವಸ್ಥೆ ಮಾಡುತ್ತಿದ್ದರು ಆದರೆ ಜಿಲ್ಲಾಧಿಕಾರಿ ಗಿರೀಶ್ ಅವರು ಆಲೂಗಡ್ಡೆ ವರ್ತಕರ ಸಭೆ ನಡೆಸಿ ಆಲೂಗಡ್ಡೆ ಮಾರಾಟದ ಬಗ್ಗೆ ನಿರ್ಧಾರ ಮಾಡಿದ್ದಾರೆ. ಆಲೂಗಡ್ಡೆಯನ್ನು ರೈತರು ಬಿತ್ತನೆ ಮಾಡಿದ ನಂತರ ಹಾನಿಯಾದರೆ ಅದಕ್ಕೆ ಹೊಣೆ ಯಾರು ? ಬಿತ್ತನೆ ಆಲೂಗಡ್ಡೆ ದರ ನಿಗದಿ ಮಾಡದಿದ್ದರೆ ವರ್ತಕರು ಮನಬಂದ ದರ ನಿಗದಿ ಪಡಿಸಿ ಮಾರಾಟ ಮಾಡುತ್ತಾರೆ. ಮಾರುಕಟ್ಟೆಯಲ್ಲಿ ಈಗ ಆಲೂಗಡ್ಡೆ ದರ ಕೇಜಿಗೆ 15 ರೂ. ಇದೆ. ಇದರ ಆಧಾರದ ಮೇಲೆ ದರ ನಿಗದಿಪಡಿಸಬೇಕು ಎಂದರು.
ಕಡ್ಡಾಯವಾಗಿ ರಶೀದಿ ನೀಡಿ: ರೈತರಿಗೆ ಗುಣಮಟ್ಟದ ಬಿತ್ತನೆ ಆಲೂಗಡ್ಡೆ ಮಾರಾಟದ ಬಗ್ಗೆ ಖಾತರಿಪಡಿಸಿಕೊಳ್ಳಬೇಕು. ರೈತರಿಗೆ ವರ್ತಕರು ಕಡ್ಡಾಯವಾಗಿ ರಶೀದಿ ನೀಡುವು
ದನ್ನು ಕಡ್ಡಾಯ ಮಾಡಬೇಕು. ರಶೀದಿಯಲ್ಲಿ ಬಿತ್ತನೆ ಆಲೂಗಡ್ಡೆ ಎಂಬುದನ್ನು ನಮೂದು ಮಾಡಬೇಕು. ಬಿತ್ತನೆ ಬೀಜದ ಜೊತೆಗೆ ಆಲೂಗಡ್ಡೆ ಬೆಳೆಗಾರರಿಗೆ ತಾಂತ್ರಿಕ ಮಾಹಿತಿ, ಔಷಧ, ರಸಗೊಬ್ಬರ ಒಂದೇ ಕಡೆ ಆಲೂಗಡ್ಡೆ ಮಾರುಕಟ್ಟೆಯಲ್ಲಿಯಲ್ಲಿಯೇ ಸಿಗುವ ವ್ಯವಸ್ಥೆ ಆಗಬೇಕು. ಈ ಎಲ್ಲ ಕ್ರಮಗಳ ಬಗ್ಗೆ ಚರ್ಚಿಸಲು ಗುರುವಾರ ಶಾಸಕರ ಸಭೆ ಕರೆಯಬೇಕು ಎಂದು ಜಿಲ್ಲಾಧಿಕಾರಿಯನ್ನು ಒತ್ತಾಯಿಸಿದರು.
ಜನಪ್ರತಿನಿಧಿಗಳನ್ನು ಕಡೆಗಣಿಸದಿರಿ: ಜನ ಪ್ರತಿನಿಧಿಗಳನ್ನು ಕಡೆಗಣಿಸಿ ಬಿತ್ತನೆ ಆಲೂಗಡ್ಡೆ ಮಾರಾಟದ ನಿರ್ಧಾರ ಮಾಡಿರುವ ಜಿಲ್ಲಾಡಳಿತವು ಮುಂದೆ ಅನಾಹುತವಾದರೆ
ಜಿಲ್ಲಾಧಿಕಾರಿ, ಎಸ್ಪಿ, ಎಪಿಎಂಸಿ ಕಾರ್ಯದರ್ಶಿಯವರೇ ಹೊಣೆಗಾರರಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿ ರೈತರ ಪರವಾಗಿರಬೇಕು. ವರ್ತಕರು, ಪುಡಾರಿಗಳ ಮಾತುಕೇಳಿ ನಿರ್ಧಾರ ತೆಗೆದುಕೊಳ್ಳಬಾರದು. ಆಲೂಗಡ್ಡೆ ಮಾರಾಟದ ಬಗ್ಗೆ ಹಿಂದಿನ ಜಿಲ್ಲಾಧಿಕಾರಿ ಯವರು ನಡೆಸಿದ ಸಭೆಯ ನಡವಳಿಕೆ ಗಳು ಹಾಗೂ ಶಾಸಕರ ಸಲಹೆ ಸೂಚನೆ ಗಳಿಗೆ ಮನ್ನಣೆ ನೀಡಿ ಕ್ರಮ ಕೈಗೊಳ್ಳಬೇಕು ಎಂದರು.
ಅನುದಾನ ಏನಾಗಿದೆ?
ಕೋವಿಡ್ ನಿಯಂತ್ರಣ ಕ್ರಮಗಳಿಗೆ ಹಾಸನ ಜಿಲ್ಲೆಗೆ 2.10 ಕೋಟಿ ರೂ. ಬಿಡುಗಡೆಯಾಗಿದೆ. ಆ ಮೊತ್ತವನ್ನು ಏನಾಗಿದೆ ಎಂಬುದೂ ಗೊತ್ತಿಲ್ಲ. ಬಹುಶಃ ಜಿಲ್ಲಾ ಖಜಾನೆಯಲ್ಲಿಯೇ ಆ ಮೊತ್ತ ಭದ್ರವಾಗಿರಬಹುದು ಎಂದು ವ್ಯಂಗ್ಯ ವಾಡಿದರು. ಲಾಕ್‌ಡೌನ್ ಸಂದರ್ಭದಲ್ಲಿ ಶಾಸಕರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು, ವಿವಿಧ ಸಂಘ- ಸಂಸ್ಥೆಗಳು ಸಂಕಷ್ಟಕ್ಕೆ ಸಿಲುಕಿದವರಿಗೆ ನೆರವಾಗಿದ್ದನ್ನು ಬಿಟ್ಟರೆ ಜಿಲ್ಲಾಡಳಿತ ದಿಂದ ನಿರೀಕ್ಷಿತ ಸ್ಪಂದನೆ ಸಿಕ್ಕಿಲ್ಲ. ಸರ್ಕಾರವೂ ಕೇವಲ ಓಟ್‌ಬ್ಯಾಂಕ್ ರಾಜಕಾರಣ ಮಾಡಬಾರದು. ಬಿಜೆಪಿಯವರಿಗೆ ಮಾತ್ರ ನೆರವಾಗುವಂತೆ ನಡೆದುಕೊಳ್ಳದೇ ಪಕ್ಷಾತೀತ ವಾಗಿ ಸಂಕಷ್ಟದಲ್ಲಿರುವವರಿಗೆ ಸ್ಪಂದಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ್ವೇಷದ ರಾಜಕಾರಣ ಸುಡುವ ಕಾಲ ಸನ್ನಿಹಿತ: ಸೂರಜ್ ರೇವಣ್ಣ
ಚಲಿಸುತ್ತಿದ್ದ ಖಾಸಗಿ ಬಸ್‌ನಲ್ಲಿ ದಿಢೀರ್ ಕಾಣಿಸಿಕೊಂಡ ಬೆಂಕಿ; ತಪ್ಪಿದ ಭಾರಿ ಅನಾಹುತ
Hasana: ಕರೆಯನ್ನು ಸ್ವೀಕರಿಸದ ಪ್ರಿಯಕರಗೆ ಚಾಕು ಇರಿದು ಪ್ರಿಯತಮೆ ಪರಾರಿ
Hassan: ಪತ್ನಿ ಕಿರುಕುಳ: ಹೇಮಾವತಿ ಹಿನ್ನೀರಿಗೆ ಹಾರಿ ಟೆಕ್ಕಿ ಆತ್ಮಹ*ತ್ಯೆ
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.