ಸವಣೂರಿನಲ್ಲಿ ಕೋವಿಡ್-19 ಆಸ್ಪತ್ರೆ
Team Udayavani, May 7, 2020, 5:31 PM IST
ಹಾವೇರಿ: ಸವಣೂರಿನಲ್ಲಿ ಇಬ್ಬರಿಗೆ ಕೋವಿಡ್ ಸೋಂಕು ಪತ್ತೆಯಾಗಿರುವುದರಿಂದ ತಾಲೂಕಾಸ್ಪತ್ರೆಯನ್ನು ಕೋವಿಡ್-19 ಆಸ್ಪತ್ರೆಯನ್ನಾಗಿ ಮಾಡಲಾಗಿದೆ. ಇತರ ರೋಗಿಗಳಿಗಾಗಿ ಪಟ್ಟಣದ ನಗರ ಆರೋಗ್ಯ ಕೇಂದ್ರದಲ್ಲಿ ತಾತ್ಕಾಲಿಕ ಹೊರರೋಗಿ ವಿಭಾಗ ಆರಂಭಿಸಬೇಕು ಹಾಗೂ ಪಟ್ಟಣದ ಎಚ್. ಎಲ್.ವಿ. ಶಾಲೆಯಲ್ಲಿ ತಾತ್ಕಾಲಿಕವಾಗಿ ಒಳರೋಗಿ ವಿಭಾಗ ಆರಂಭಿಸಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.
ಕೋವಿಡ್ ಪಾಸಿಟಿವ್ ಪ್ರಕರಣ ಕಂಡುಬಂದ ಹಿನ್ನೆಲೆಯಲ್ಲಿ ಸವಣೂರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ, ಅಧಿಕಾರಿಗಳಿಗೆ ಕೆಲ ಸೂಚನೆ ನೀಡಿದರು. ಸೀಲ್‌ಡೌನ್ ಪ್ರದೇಶದಲ್ಲಿ ಕಾರ್ಯನಿರ್ವಹಿಸುವ ಆಶಾ ಕಾರ್ಯಕರ್ತೆಯರಿಗೆ, ಆರೋಗ್ಯ ಕಾರ್ಯಕರ್ತೆಯರಿಗೆ ಫೀವರ್ ಕ್ಲಿನಿಕ್‌ನಲ್ಲಿ ಖಾಲಿ ಇರುವ ಕೊಠಡಿಗಳಲ್ಲಿ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಬೇಕು. ಹಾಸ್ಟೆಲ್‌ನ ಅಡುಗೆ ಕೋಣೆಯಿಂದ ಪ್ರತಿನಿತ್ಯ ಕರ್ತವ್ಯ ನಿರತ ಎಲ್ಲ ಸಿಬ್ಬಂದಿಗೆ ಊಟದ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.
ಕೆಎಸ್‌ಆರ್‌ಟಿಸಿ ಹಾವೇರಿ ವಿಭಾಗದಿಂದ ಸಂಚಾರಿ ಫೀವರ್ ಕ್ಲಿನಿಕ್ ಸೋಂಕಿತ ಪ್ರದೇಶದಲ್ಲಿ ಕಾರ್ಯನಿರ್ವಹಿಸಬೇಕು. ಹೊರ ಪ್ರದೇಶದಿಂದ ಬರುವ ಜನರ ಓಡಾಟವನ್ನು ಸಂಪೂರ್ಣವಾಗಿ ನಿರ್ಬಂಧಿಸಬೇಕು. ಸೀಲ್‌ಡೌನ್ ಪ್ರದೇಶದಲ್ಲಿರುವ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಜಿಪಂ ಸಿಇಒ ರಮೇಶ ದೇಸಾಯಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಜಿ. ದೇವರಾಜು, ಅಪರ ಜಿಲ್ಲಾಧಿಕಾರಿ ಯೋಗೇಶ್ವರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಸವಣೂರು ಸಹಾಯಕ ಆಯುಕ್ತೆ ಅನ್ನಪೂರ್ಣ ಮುದಕಮ್ಮನವರ, ಸವಣೂರು ತಹಶೀಲ್ದಾರ್, ತಾಲೂಕು ವೈದ್ಯಾ ಧಿಕಾರಿಗಳು ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ
Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ
Adi Jambava Samavesha: ಅಂಬೇಡ್ಕರ್ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.