ರೈತರಿಗೆ ಮಾರುಕಟ್ಟೆ ಕಲ್ಪಿಸಿದ ಅಧಿಕಾರಿಗಳು
Team Udayavani, May 7, 2020, 6:01 PM IST
ಕೊಪ್ಪಳ: ಕೋವಿಡ್-19 ಹಿನ್ನೆಲೆಯಲ್ಲಿ ಲಾಕ್‌ಡೌನ್ ಜಾರಿಯಲ್ಲಿದ್ದು, ಈ ವೇಳೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು ರೈತರಿಗೆ ಸ್ಪಂದಿಸಿದ್ದಾರೆ. ಸಕಾಲಕ್ಕೆ ಸೂಕ್ತ ಸಲಹೆ, ಮಾರ ಕಟ್ಟೆಯ ವ್ಯವಸ್ಥೆ ಕಲ್ಪಿಸಿ ಗಮನ ಸೆಳೆದಿದ್ದಾರೆ.
ಜಿಲ್ಲೆಯ ಗಂಗಾವತಿ ತಾಲೂಕಿನ ಬೊಮಚ್ಚಿಹಾಳ ಗ್ರಾಮದ ರೈತ ದುರಗನಗೌಡ ಕಳೆದ 2019ರ ಜುಲೈನಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಸಹಾಯಕ ತೋಟಗಾರಿಕೆ ಅಧಿಕಾರಿ ಚಂದಾಲಿಂಗ ಅವರ ಮಾರ್ಗದರ್ಶನದಲ್ಲಿ ತೈವಾನ್-786 ಎನ್ನುವ ಪಪ್ಪಾಯ ತಳಿಯನ್ನು 6×6 ಅಡಿ ಅಂತರದಲ್ಲಿ 4 ಎಕರೆಗೆ ಸುಮಾರು 4800 ಸಸಿಗಳನ್ನು ನಾಟಿ ಮಾಡಿದ್ದಾರೆ. ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ವೆಚ್ಚ ಮತ್ತು ಸಾಮಾಗ್ರಿ ವೆಚ್ಚ ಸೇರಿ ರೂ. 1.64 ಲಕ್ಷ ಭರಿಸಲಾಗಿದೆ. ತೋಟಗಾರಿಕೆ ಅಧಿಕಾರಿಗಳ ಮಾರ್ಗದರ್ಶನದಂತೆ ಪೋಷಕಾಂಶ ಮತ್ತು ಕೀಟನಾಶಕಗಳ ಬಳಕೆ ಮಾಡಿ ಉತ್ತಮ ಫಸಲು ಪಡೆದಿದ್ದಾರೆ.
ಫೆಬ್ರುವರಿ-2020ರಿಂದಲೇ ಕಾಯಿ ಬಿಡಲು ಆರಂಭಿಸಿ ಉತ್ತಮ ಫಸಲು ಬಂದು ಒಳ್ಳೆಯ ಆದಾಯದ ನಿರೀಕ್ಷೆಯಲ್ಲಿದ್ದಾಗ ಹೆಮ್ಮಾರಿಯಂತೆ ಕೋವಿಡ್-19 ಅಪ್ಪಳಿಸಿ ತಮ್ಮ ಉತ್ಪನ್ನವನ್ನು ಮಾರಾಟ ಮಾಡಲಾಗದೇ ರೈತ ದುರಗನಗೌಡ ಸಂಕಷ್ಟಕ್ಕೀಡಾಗಿದ್ದರು. ನಂತರ ಗಂಗಾವತಿ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಶಿವಯೋಗಪ್ಪ ಅವರ ಮುಂದೆ ತಮ್ಮ ಅಳಲು ತೋಡಿಕೊಂಡರು. ಆಗ ಶಿವಯೋಗಪ್ಪ ಅವರು ವಿವಿಧ ಮಾರುಕಟ್ಟೆಗಳನ್ನು ಸಂಪರ್ಕಿಸಿ ಇವರ ಉತ್ಪನ್ನಕ್ಕೆ ಮಾರುಕಟ್ಟೆ ಕಲ್ಪಸಿ ಕೊಟ್ಟಿದ್ದಾರೆ.
ಇದರಂತೆ 17 ಟನ್ ಪಪ್ಪಾಯವನ್ನು ದೆಹಲಿ ಮಾರುಕಟ್ಟೆಗೆ ರೂ. 7 ಪ್ರತಿ ಕೆ.ಜಿ. ಯಂತೆ ಕಳುಹಿಸಿದ್ದಾರೆ. ದರ ಕಡಿಮೆ ಆಯಿತೆಂದು ರೈತ ದುರಗನಗೌಡರು ತಮ್ಮ ಕಳವಳ ವ್ಯಕ್ತಪಡಿಸಿದಾಗ ಉಡುಪಿ ಹಾಗೂ ಮಂಗಳೂರು ಮಾರುಕಟ್ಟೆ ಸಂಪರ್ಕಿಸಿ ರೂ. 17 ರಂತೆ ಸಾಗಾಣಿಕೆ ವೆಚ್ಚ ಸೇರಿ ದರವನ್ನು ನಿಗದಿ ಪಡಿಸಿದ್ದು, ಈಗಾಗಲೇ 3 ಟನ್‌ನಷ್ಟು ಹಣ್ಣನ್ನು ಕಳುಹಿಸಿದ್ದಾರೆ. ಪ್ರತಿ ವಾರ 2ಟನ್ ಗಳಷ್ಟು ಬೇಡಿಕೆಯಿದ್ದು, ಈ ಮಾರುಕಟ್ಟೆಗಳಿಗೆ ದುರಗನಗೌಡರಿಗೆ ತಮ್ಮ ಉತ್ಪನ್ನವನ್ನು ಕಳುಹಿಸಿಕೊಡುವ ವ್ಯವಸ್ಥೆಯನ್ನು ಇಲಾಖೆಯಿಂದ ಒದಗಿಸಿಕೊಟ್ಟಿದ್ದಾರೆ. ಅಲ್ಲದೇ ಉತ್ಪನ್ನವನ್ನು ಮಾರಾಟ ಮತ್ತು ಸಾಗಾಣಿಕೆ ಮಾಡಲು ಪರವಾನಗಿ ಪತ್ರವನ್ನು (ಪಾಸ್) ನೀಡಿ ಸಹಕರಿಸಿ ಕಷ್ಟಕಾಲದಲ್ಲಿ ನೆರವಾಗಿದ್ದಾರೆ.
ಫಸಲನ್ನು ಚೆನ್ನಾಗಿ ಬೆಳೆಯಲು ಮಾರ್ಗ ದರ್ಶನ ನೀಡಿದ ತೋಟಗಾರಿಕೆ ಅಧಿಕಾರಿಗಳು ನನ್ನ ಉತ್ಪನ್ನವನ್ನು ಮಾರಾಟ ಮಾಡಲೂ ಮಾರುಕಟ್ಟೆ ಒದಗಿಸಿಕೊಟ್ಟಿದ್ದಾರೆ. ಅಲ್ಲದೇ,ಕೋವಿಡ್ ದಂತಹ ಕಷ್ಟದ ಸ್ಥಿತಿಯಲ್ಲೂ ನಮಗೆ ನೆರವಾಗಿದ್ದಕ್ಕೆ ನಾನುಅವರಿಗೆ ಚಿರಋಣಿ. –ದುರಗನಗೌಡ, ರೈತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಹದ್ದೂರ ಬಂಡಿ ಏತ ನೀರಾವರಿ ಪರೀಕ್ಷೆ ? ತುಂಗಾಭದ್ರಾ ಹಿನ್ನೀರಿನಲ್ಲಿ ಜಾಕ್ ವೆಲ್
ಉದ್ಘಾಟನೆ ಭಾಗ್ಯ ನಿರೀಕ್ಷೆಯಲ್ಲಿ ಅಂಗನವಾಡಿ:4 ಕೇಂದ್ರಗಳು ಬಾಡಿಗೆ ಮನೆಯಲ್ಲಿ ಕಾರ್ಯನಿರ್ವಹಣೆ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Uttar Pradesh: 16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾ*ಚಾರ; ಇಬ್ಬರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.