ಅಂತರ್ಜಲ ಚೇತನ ಯೋಜನೆ; 23 ಕೋಟಿ ರೂ. ವೆಚ್ಚ
Team Udayavani, May 7, 2020, 12:26 PM IST
ಸಾಂದರ್ಭಿಕ ಚಿತ್ರ
ಸಾಗರ: ತಾಲೂಕಿನಲ್ಲಿ ಸುಮಾರು 23 ಕೋಟಿ ರೂ. ವೆಚ್ಚದಲ್ಲಿ ಅಂತರ್ಜಲ ಚೇತನ ಯೋಜನೆಯಡಿ ಬೆಂಗಳೂರಿನ ಆರ್ಟ್ ಆಫ್ ಲೀವಿಂಗ್ ಸಂಸ್ಥೆಯ ಸಹಯೋಗದೊಂದಿಗೆ 2937 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಶಾಸಕ ಎಚ್. ಹಾಲಪ್ಪ ಹರತಾಳು ತಿಳಿಸಿದರು.
ತಾಲೂಕಿನ ಪಡವಗೋಡು ಗ್ರಾಪಂ ವ್ಯಾಪ್ತಿಯ ಮರೂರು ಗ್ರಾಮದಲ್ಲಿ ಬುಧವಾರ ಬೋಲ್ಡರ್ ಚೆಕ್ ಡ್ಯಾಂ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು. ತಾಲೂಕಿನಲ್ಲಿ 1455 ಕಲ್ಲುಗುಂಡು ತಡೆ ಯೋಜನೆ, 1423 ಇಂಗು ಬಾವಿ ನಿರ್ಮಾಣ, 32 ಇಂಗು ಕೊಳವೆ ಬಾವಿ, 27 ಕೆರೆಹೊಂಡ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಇಂದಿನಿಂದ ರಾಜ್ಯದ 9 ಆಯ್ದ ಜಿಲ್ಲೆಗಳಲ್ಲಿ ಅಂತರ್ಜಲ ಪುನಶ್ಚೇತನ ಯೋಜನೆಯನ್ನು ಪ್ರಾರಂಭಿಸಲಾಗುತ್ತಿದೆ ಎಂದು ತಿಳಿಸಿದರು.
ಪಡವಗೋಡು ಗ್ರಾಪಂ ಅಧ್ಯಕ್ಷ ಪಿ.ಡಿ. ಬಂಗಾರಪ್ಪ, ತಾಪಂ ಸದಸ್ಯರಾದ ದೇವೇಂದ್ರಪ್ಪ ಯಲಕುಂದ್ಲಿ, ಸವಿತಾ ನಟರಾಜ್, ಗ್ರಾಪಂ ಸದಸ್ಯರಾದ ವೆಂಕಟೇಶ್, ನಾಗರಾಜ್, ರೇಣುಕಾ ರಾಜಪ್ಪ, ತಾಪಂ ಕಾರ್ಯನಿರ್ವಾಹಣಾಧಿಕಾರಿ ಪುಷ್ಪಾ ಎಂ. ಕಮ್ಮಾರ್, ಎನ್ ಆರ್‌ಇಜಿ ಸಹಾಯಕ ನಿರ್ದೇಶಕ ಬಾಲಸುಬ್ರಹ್ಮಣ್ಯ, ಪಿಡಿಒ ರಾಘವೇಂದ್ರ, ಆರ್ಟ್ ಆಫ್ ಲೀವಿಂಗ್ ಸಂಸ್ಥೆಯ ಶ್ರೀನಿವಾಸ್, ಭಾಗ್ಯದರ್ಶಿನಿ, ದತ್ತಮೂರ್ತಿ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Infectious Disease: ರಾಜ್ಯಕ್ಕೂ ಬೇಕಿದೆ “ವಿಷಾಣು ಯುದ್ಧ ಅಭ್ಯಾಸ್”
Sagara: ಭೀಕರ ಅಪಘಾತ… ರಿಕ್ಷಾ ಚಾಲಕ ಸೇರಿ ಇಬ್ಬರು ಮೃತ್ಯು, ಮೂವರಿಗೆ ಗಾಯ
MUST WATCH
ಹೊಸ ಸೇರ್ಪಡೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.