ಕೋವಿಡ್: 7ನೇ ಸ್ಥಾನದಲ್ಲಿ ದಾವಣಗೆರೆ; ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಇಲ್ಲೇ ಹೆಚ್ಚು
Team Udayavani, May 8, 2020, 6:13 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಬೆಂಗಳೂರು: ಕೋವಿಡ್ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ವಾರದ ಹಿಂದಷ್ಟೇ 17ನೇ ಸ್ಥಾನದಲ್ಲಿದ್ದ ದಾವಣಗೆರೆ ಜಿಲ್ಲೆ ಈಗ ಏಕಾಏಕಿ 7ನೇ ಸ್ಥಾನಕ್ಕೆ ಜಿಗಿದಿದೆ.
ಇಲ್ಲಿ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಗುರುವಾರ ಮತ್ತೆ ಮೂರು ಪ್ರಕರಣಗಳು ದೃಢವಾಗಿದ್ದು, ಇವರಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿನ ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿದೆ.
ದಾವಣಗೆರೆಯಲ್ಲಿ ಎಪ್ರಿಲ್ ಅಂತ್ಯದಲ್ಲಿದ್ದ ಸೋಂಕುಪೀಡಿತರ ಸಂಖ್ಯೆ 4 ಮಾತ್ರ. ಆದರೆ ಮೇ ಮೊದಲ ವಾರದಲ್ಲಿ 44 ಪ್ರಕರಣಗಳು ದೃಢವಾಗಿವೆ. ಸದ್ಯ ಬೆಂಗಳೂರು ಹೊರತುಪಡಿಸಿದರೆ ಇಲ್ಲಿಯೇ ಅತೀ ಹೆಚ್ಚು ಸಕ್ರಿಯ ಪ್ರಕರಣಗಳಿವೆ (41).
ಉಳಿದಂತೆ ರಾಜ್ಯಾದ್ಯಂತ ಸೋಂಕುಪೀಡಿತರ ಸಂಖ್ಯೆ 700 ದಾಟಿದೆ. ಗುರುವಾರ ಮತ್ತೆ 12 ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸಂಖ್ಯೆ 705ಕ್ಕೆ ಏರಿದೆ. ಇವೆಲ್ಲದರ ನಡುವೆ 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.
ಮಹಾರಾಷ್ಟ್ರ: 18 ಸಾವಿರ ಸೋಂಕು
ಮಹಾರಾಷ್ಟ್ರದಲ್ಲಿ ಕೋವಿಡ್ ಪೀಡಿತರ ಸಂಖ್ಯೆ 18 ಸಾವಿರ ದಾಟಿದೆ. ಗುರುವಾರ 1,362 ಪ್ರಕರಣಗಳು ದಾಖಲಾಗಿವೆ. ಧಾರಾವಿಯಲ್ಲಿ 50 ಪ್ರಕರಣ ಪತ್ತೆಯಾಗಿವೆ.
ಮಹಾರಾಷ್ಟ್ರದಲ್ಲಿ 531 ಪೊಲೀಸರಿಗೆ ಸೋಂಕು ತಗುಲಿದೆ. ಮುಂಬಯಿ ನಗರ ಒಂದರಲ್ಲೇ 250 ಪ್ರಕರಣಗಳು ದೃಢಪಟ್ಟಿವೆ. ಅರ್ಥರ್ ಜೈಲಿನ 72 ಕೈದಿಗಳು ಮತ್ತು 7 ಸಿಬಂದಿಗೂ ಕೋವಿಡ್ ತಗುಲಿದೆ.
ಕರಾವಳಿಯಲ್ಲಿ ಹೊಸ ಪ್ರಕರಣವಿಲ್ಲ
ಕರಾವಳಿ ಜಿಲ್ಲೆಗಳಲ್ಲಿ ಗುರುವಾರ ಹೊಸ ಕೊವಿಡ್ ಪ್ರಕರಣ ಪತ್ತೆಯಾಗಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 92 ವರದಿಗಳು ನೆಗೆಟಿವ್ ಆಗಿವೆ. ಇನ್ನೂ 272 ವರದಿ ಬರಲು ಬಾಕಿ ಇದೆ. ಕಾಸರಗೋಡು ಜಿಲ್ಲೆಯಲ್ಲಿಯೂ ಗುರುವಾರ ಹೊಸ ಸೋಂಕು ದೃಢಪಟ್ಟಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
ICC World Rankings: ಟೆಸ್ಟ್ ಬೌಲಿಂಗ್ ರ್‍ಯಾಂಕಿಂಗ್ ಬುಮ್ರಾ ಮರಳಿ ನಂ.1
Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ
Udupi: ಪೊಲೀಸ್ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.