ಫೇಸ್‌ಬುಕ್‌ನಲ್ಲಿ ವಿದ್ಯಾರ್ಥಿಗಳಿಗೆ ದತ್ತ ಮಾಸ್ಟರ್‌ ಪಾಠ !

Team Udayavani, May 8, 2020, 12:55 PM IST

08-May-10

ಕಡೂರು: ಮಾಜಿ ಶಾಸಕ ವೈ.ಎಸ್‌.ವಿ. ದತ್ತ ಫೇಸ್‌ಬುಕ್‌ ಮೂಲಕ 10 ನೇ ತರಗತಿಯ ಮಕ್ಕಳಿಗೆ ಗಣಿತ ಪಾಠ ಮಾಡಿದರು.

ಕಡೂರು: ಆಡು ಮುಟ್ಟದ ಸೊಪ್ಪಿಲ್ಲ ದತ್ತ ಮಾಸ್ಟರ್‌ ಕಲಿಯದ ವಿದ್ಯೆ ಇಲ್ಲ ಎಂಬ ನಾಣ್ಣುಡಿಯಂತೆ ಮಾಜಿ ಶಾಸಕ ವೈ.ಎಸ್‌. ವಿ. ದತ್ತ ಅವರು ಪ್ರಸಕ್ತ ಕೊರೊನಾದಿಂದ ಮನೆಯಲ್ಲಿಯೇ ಲಾಕ್‌ ಆಗಿರುವ ಎಸ್‌ಎಸ್‌ ಎಲ್‌ಸಿ ಮಕ್ಕಳಿಗೆ ಕಳೆದೆರೆಡು ದಿನಗಳಿಂದ ಗಣಿತ ಪಾಠವನ್ನು ಫೇಸ್‌ಬುಕ್‌ ಮೂಲಕ ಮಾಡಿ ಮಕ್ಕಳ ಮತ್ತು ಪೋಷಕರ ಪ್ರೀತಿಗೆ ಪಾತ್ರರಾಗಿದ್ದಾರೆ.

ಬೆಂಗಳೂರಿನಲ್ಲಿ ಸರಿ ಸುಮಾರು 40 ವರ್ಷಗಳ ಕಾಲ ಟ್ಯೂಷನ್‌ ನಡೆಸಿ ಸಾವಿರಾರು ವಿದ್ಯಾರ್ಥಿಗಳಿಗೆ ಪುಸ್ತಕ ಹಾಗೂ ಜೀವನ ಪಾಠ ಮಾಡಿರುವ ದತ್ತ ಮೇಷ್ಟ್ರು, ಶಾಸಕರಾಗಿ ಗುರುತಿಸಿಕೊಳ್ಳುವುದಕ್ಕಿಂತ ಒಬ್ಬ ಶಿಕ್ಷಕನಾಗಿ ಗುರುತಿಸಿಕೊಳ್ಳಲು ಹೆಚ್ಚಿಗೆ ಬಯಸುತ್ತಾರೆ. ಅವರು ಶಾಸಕರಾಗಿದ್ದ ಅವಧಿಯಲ್ಲಿ ಕಡೂರು ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ಹಲವಾರು ಬಾರಿ ಗಣಿತ ಪಾಠವನ್ನು ಪ್ರಥಮ ಪಿಯು ಮಕ್ಕಳಿಗೆ ಬೋಧನೆ ಮಾಡಿದ್ದಾರೆ.

ಸಿಇಟಿ, ನೀಟ್‌ ಬರೆಯುವ ಮಕ್ಕಳಿಗೆ ಉಚಿತವಾಗಿ ಸಪ್ತಕೋಟಿ ಧನಂಜಯ ತಂಡದ ಮೂಲಕ ಕೋಚಿಂಗ್‌ ಕೊಡಿಸುವ ಮೂಲಕ ಎಂಜಿನಿಯರ್‌, ಮೆಡಿಕಲ್‌ ಕೋರ್ಸ್‌ಗೆ ಸೇರಲು ವಿದ್ಯಾರ್ಥಿಗಳಿಗೆ ನೆರವಾಗಿದ್ದಾರೆ. ಮಂಗಳವಾರ, ಬುಧವಾರ ಎರಡು ದಿನ 10 ನೇ ತರಗತಿಯ ಕನ್ನಡ ಮಾಧ್ಯಮದ ಮಕ್ಕಳಿಗೆ ಗಣಿತ ವಿಷಯ ಕಬ್ಬಿಣದ ಕಡಲೆ ಆದರೆ ಅದನ್ನು ಸರಳವಾಗಿ ಕಲಿಯಲು ಪ್ರೇರಣೆ ನೀಡಿದ್ದಾರೆ.

ಸಮಾಂತರ ಶ್ರೇಢಿ ಪಾಠವನ್ನು ಆಯ್ಕೆ ಮಾಡಿಕೊಂಡು ಅದರಲ್ಲಿ ಬರುವ ಸೂತ್ರಗಳನ್ನು ಬಿಡಿಸುವುದಲ್ಲದೆ ಕ್ಲಿಷ್ಠಕರ ಲೆಕ್ಕಗಳನ್ನು ಬಿಡಿಸಿ ಮಕ್ಕಳ ಮನಗೆದ್ದರು. ದತ್ತ ಮಾಸ್ಟರ್‌ ಹೇಳಿಕೊಟ್ಟ ಗಣಿತ ಪಾಠವನ್ನು ಸುಮಾರು 5.5 ಲಕ್ಷ ಮಕ್ಕಳೂ ವೀಕ್ಷಿಸಿರುವುದು ಒಂದು ದಾಖಲೆಯಾಗಿದೆ. ಗಣಿತ ಬೋಧಿಸುತ್ತಿರುವ ಶಿಕ್ಷಕ ವರ್ಗ ಸಹ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದೆ.

ನನಗೆ ಗಣಿತ ಪಾಠವನ್ನು ಮಾಡುವುದರಲ್ಲಿ ಸಿಗುವ ಸಂತೋಷ ಬೇರೆ ಯಾವ ವೃತ್ತಿಯಲ್ಲಿಯೂ ಸಿಗುವುದಿಲ್ಲ. ಲಾಕ್‌ಡೌನ್‌ ಅವಧಿಯಲ್ಲಿ ಏನಾದರೂ ಮಾಡಬೇಕೆಂಬ ಹಂಬಲವಿತ್ತು. ಕೊನೆಗೆ ಹೊಳೆದಿದ್ದು 10 ನೇ ತರಗತಿಯ ಮಕ್ಕಳಿಗೆ ಗಣಿತ ಪಾಠ ಮಾಡುವುದು. ಸಂಫುರ್ಣ ಪಾಠ ಮಾಡಲಿಕ್ಕಾಗದಿದ್ದರೂ ಮಕ್ಕಳು ಮುಂದೆ ಬರೆಯಲಿರುವ ಪರೀಕ್ಷೆಗೆ ಆತ್ಮಸ್ಥೈರ್ಯ ತುಂಬುವುದೇ ನನ್ನ ಆಶಯವಾಗಿದೆ .
ವೈ.ಎಸ್‌.ವಿ. ದತ್ತ ,
ಮಾಜಿ ಶಾಸಕ

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

9

Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ

8

Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.