ಕೋವಿಡ್-19 ಲಾಕ್‌ಡೌನ್: ಸೈಬರ್ ಅಪರಾಧಗಳು ಹೆಚ್ಚಾಗುವ ಸಾಧ್ಯತೆ
Team Udayavani, May 8, 2020, 3:00 PM IST
ಸಾಂದರ್ಭಿಕ ಚಿತ್ರ
ಲಂಡನ್: ಕೋವಿಡ್ ವೈರಸ್ ಬಂದ ಬಳಿಕ ಜಗತ್ತೇ ಒದ್ದಾಡುತ್ತಿದೆ. ಅನೇಕ ಸಾವು ನೋವುಗಳಿಗೆ ಕಾರಣವಾದ ಈ ವೈರಸ್ ಇಡೀ ಜಗತ್ತಿನಲ್ಲಿ ಲಾಕ್‌ಡೌನ್ ಹೇರುವಂತೆ ಮಾಡಿದೆ. ಇದೀಗ ಸರಕಾರಗಳು ಲಾಕ್‌ಡೌನ್ ಮೂಲಕ ಕೋವಿಡ್ ಹಬ್ಬುವ ವೇಗಕ್ಕೆ ಕಡಿವಾಣ ಹಾಕಲು ನಿರ್ಧರಿಸಿದ್ದು ಇದು ಮತ್ತೂಂದಿಷ್ಟು ಅಪರಾಧಗಳು ಹೆಚ್ಚಲು ಕಾರಣವಾಗುವ ಆತಂಕ ಆರಂಭವಾಗಿದೆ.
ಕೋವಿಡ್-19 ಬಳಿಕ ಬಿಕ್ಕಟ್ಟಿನಿಂದಾಗಿ ಲಾಕ್‌ಡೌನ್‌ಗೆ ಒಳಗಾದ ಮಕ್ಕಳು ಹೆಚ್ಚು ಸಮಯವನ್ನು ಅಂತರ್ಜಾಲ ಬಳಕೆಯಲ್ಲೇ ಕಳೆಯುತ್ತಿದ್ದಾರೆ. ಇದು ಸೈಬರ್ ಕ್ರೈಂ ಅಪರಾಧಗಳು ಏರಿಕೆಯಾಗಲು ಕಾರಣವಾಗಬಹುದು ಎನ್ನಲಾಗಿದೆ. ಈ ಲಾಕ್‌ಡೌನ್ ಬಳಿಕ 150 ಕೋಟಿ ಮಕ್ಕಳು ಮನೆಯಲ್ಲಿಯೇ ಕಾಲ ಕಳೆಯುತ್ತಿದ್ದಾರೆ. ಶಾಲಾ ಕಾಲೇಜುಗಳು ಮುಚ್ಚಿದ್ದು, ಶೈಕ್ಷಣಿಕ ಉದ್ದೇಶಗಳಿಗಾಗಿ ಅವರು ಆನ್‌ಲೈನ್ ಬಳಸುವುದು ಅನಿವಾರ್ಯ. ಇದು ಮಕ್ಕಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಇಂಟರ್‌ನ್ಯಾಷನಲ್ ಟೆಲಿಕಮ್ಯುನಿಕೇಷನ್ ಯೂನಿಯನ್ (ಐಟಿಯು) ಹೇಳಿದೆ.
ಮನರಂಜನೆ ಕಾರಣಕ್ಕೆ ಮಕ್ಕಳು ಹೆಚ್ಚು ಸಮಯವನ್ನು ಆನ್‌ಲೈನ್‌ನಲ್ಲಿಯೇ ಕಳೆಯಲು ಬಯಸುತ್ತಿದ್ದಾರೆ. ಇಂಟರ್‌ನೆಟ್ ನಿಭಾಯಿಸುವ ಕೌಶಲವನ್ನು ಬೆಳೆಸಿಕೊಳ್ಳುವ ಮುನ್ನವೇ ಅವರು ಆನ್‌ಲೈನ್ ಪ್ರಪಂಚಕ್ಕೆ ತೆರೆದುಕೊಳ್ಳುತ್ತಿರುವುದು ಆತಂಕಕಾರಿ ಎಂದು ಐಟಿಯು ಹೇಳಿದೆ. ಇಂಟರ್‌ನೆಟ್ ಬಳಕೆಗೆ ಸಂಬಂಧಿಸಿದ ಮಾನದಂಡ ಮತ್ತು ಮಾರ್ಗಸೂಚಿಗಳನ್ನು ಅಭಿವೃದ್ಧಿಪಡಿಸಲಾಗಿದ್ದು,15 ದಿನಗಳಲ್ಲಿ ಅವುಗಳು ಬಿಡುಗಡೆಯಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್ ಟೂರಿಸಂ ಹಬ್ಬ!
BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.