ಮೇ 17 ರ ವರೆಗೆ ನಂದಿ ಗಿರಿಧಾಮಕ್ಕೆ ಪ್ರವೇಶ ನಿಷೇಧ
Team Udayavani, May 8, 2020, 4:41 PM IST
ಚಿಕ್ಕಬಳ್ಳಾಪುರ: ಕೋವಿಡ್ 19 ಸೋಂಕು ತಡೆಯುವ ಉದ್ದೇಶದಿಂದ ಘೋಷಣೆಯಾಗಿರುವ ಲಾಕ್‌ಡೌನ್ ಪರಿಣಾಮ ಜಿಲ್ಲೆಯ ಐತಿಹಾಸಿಕ ಪ್ರಸಿದ್ಧ ನಂದಿಗಿರಿ ಧಾಮದ ಸಾರ್ವಜನಿಕರ ಪ್ರವೇಶ ನಿರ್ಬಂಧದ ಆದೇಶವನ್ನು ಜಿಲ್ಲಾಡಳಿತ ಮೇ 17ರ ರವರೆಗೂ ವಿಸ್ತರಿಸಿದೆ.
ಕೇಂದ್ರ ಸರ್ಕಾರ ಕಳೆದ ಮೇ.3 ರ ವರೆಗೂ ಘೊಷಣೆ ಮಾಡಿದ್ದ ಲಾಕ್ ಡೌನ್‌ನ್ನು ಮೇ.17ರ ತನಕ ವಿಸ್ತರಿಸಿದ ಕಾರಣ ಜಿಲ್ಲಾಡಳಿತ ಕೋವಿಡ್ 19 ಸೋಂಕು ತಡೆಯುವ ಉದ್ದೇಶದಿಂದ ಸಾಮಾಜಿಕ ಅಂತರ ಕಾಯ್ದಕೊಳ್ಳಲು ಜಿಲ್ಲೆಯ ಪ್ರವಾಸಿ ತಾಣವಾದ ನಂದಿಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧಹೇರಿದೆ.
ಡೀಸಿ ಆದೇಶದಲ್ಲಿ ಏನಿದೆ?: ಜಿಲ್ಲೆ ಯಲ್ಲಿ ಕೋವಿಡ್ ವೈರೆಸ್ (ಕೋವಿಡ್ -19) ಸೋಂಕು ಹರುಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳು, ಕೋವಿಡ್-19 ತಡೆಗಟ್ಟುವ ಸಲುವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರವಾಸಿ ತಾಣವಾದ ನಂದಿ ಗಿರಿದಾಮಕ್ಕೆ ಮೇ 5 ರ ರಾತ್ರಿ 12 ಗಂಟೆ ಯಿಂದ ಮೇ 17 ರ ಮಧ್ಯರಾತ್ರಿ 12 ಗಂಟೆಯವರೆಗೆ ಸಾರ್ವಜನಿಕರು ಹಾಗೂ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಆರ್. ಲತಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್ – ಅಥಿಯಾ ಶೆಟ್ಟಿ
ಬೆಳಗಾವಿಯ ಶ್ರೀನಿವಾಸ ಠಾಣೇದಾರ ಅಮೆರಿಕ ಸಂಸತ್‌ಗೆ ಆಯ್ಕೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.