ಲಾಕ್‌ಡೌನ್ ಸಡಿಲಿಕೆ ದುರ್ಬಳಕೆ ಆಗದಿರಲಿ
Team Udayavani, May 8, 2020, 6:31 PM IST
ದೇವನಹಳ್ಳಿ: ಕೋವಿಡ್ 19 ನಿಯಂತ್ರಣಕ್ಕಾಗಿ ಸರ್ಕಾರ, ಸಾರ್ವಜನಿಕರ ಹಿತದೃಷ್ಟಿಯಿಂದ ಲಾಕ್‌ಡೌನ್ ನಿಯಮ ಸಡಿಲಗೊಳಿಸಿದೆ. ಸಾರ್ವಜನಿಕರು ಮಾಸ್ಕ್ ಧರಿಸದಿದ್ದರೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ಮುಂದಾಗುವ ಅನಾಹುತ ಎದುರಿಸಬೇಕಾಗುತ್ತದೆ ಎಂದು ಶಾಸಕ ಎಲ್.ಎನ್.ನಾರಾಯಣಸ್ವಾಮಿ ತಿಳಿಸಿದರು.
ತಾಲೂಕಿನ ಬೆಟ್ಟೇನಹಳ್ಳಿಯಲ್ಲಿ ಜೆಡಿಎಸ್‌ನಿಂದ ಆಹಾರದ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಈಗಗಾಲೇ ತಾಲೂಕಿನಲ್ಲಿ ವಿವಿಧ ದಾನಿಗಳು ಮತ್ತು ದೇವನಹಳ್ಳಿಯಲ್ಲಿ 35 ಸಾವಿರ ಕಿಟ್ ವಿತರಿಸಲಾಗಿದೆ. ಲಾಕ್‌ಡೌನ್ ಸಡಲಿಕೆಯಾಗಿದೆ ಎಂಬ ಕಾರಣಕ್ಕಾಗಿ ಮನೆಗಳಿಂದ ಹೊರ ಬರಬಾರದು. ಕೋವಿಡ್ 19 ನಿಯಂತ್ರಿಸಲು ಪ್ರತಿಯೊಬ್ಬರೂ ಸಹಕರಿಸ ಬೇಕು ಎಂದರು.
ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸೊಣ್ಣಪ್ಪ ಮಾತನಾಡಿದರು. ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಿ.ಮುನೇ ಗೌಡ, ತಾಲೂಕು ಜೆಡಿಎಸ್ ಅಧ್ಯಕ್ಷ ಬಿ.ಶ್ರೀನಿವಾಸ್, ಪುರಸಭೆ ಸದಸ್ಯ ಜಿ.ಎ.ರವೀಂದ್ರ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಮುನಿರಾಜು, ತಾಪಂ ಸದಸ್ಯ ಗೋಪಾಲ ಸ್ವಾಮಿ, ಮಹೇಶ್, ಕುಂದಾಣ ಹೋಬಳಿ ಜೆಡಿಎಸ್ ಅಧ್ಯಕ್ಷ ಚಂದ್ರೇಗೌಡ, ಜೆಡಿಎಸ್ ಮಹಿಳಾ ಘಟಕದ ಕಾರ್ಯಾ ಧ್ಯಕ್ಷೆ ಭಾಗ್ಯಮ್ಮ, ಮುಖಂಡ ಭೀರಪ್ಪ, ನಾಗರಾಜ್, ರಾಜಣ್ಣ, ಕೆಂಪರಾಜು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.