ಭರದಿಂದ ಸಾಗಿದ ನರೇಗಾ ಕಾಮಗಾರಿ; ನೂರಾರು ಜನರಿಗೆ ಕೆಲಸ
Team Udayavani, May 9, 2020, 5:43 AM IST
ಹುಬ್ಬಳ್ಳಿ: ಕಲಘಟಗಿ ತಾಲೂಕಿನ ಬೆಲವಂತರ ಮತ್ತು ಬಮ್ಮಿಗಟ್ಟಿ ಗ್ರಾಪಂ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿಗಳು ಭರದಿಂದ ಸಾಗಿವೆ.
ಬೆಲವಂತರ ಗ್ರಾಮದ ಗೊಳಿಮರಿ ಕೆರೆಯ ಹೂಳೆತ್ತುವ ಕಾಮಗಾರಿಯನ್ನು ಸುಮಾರು 3,45 ಲಕ್ಷ ರೂ.ಗಳ ವೆಚ್ಚ ಹಾಗೂ ಬಮ್ಮಿಗಟ್ಟಿ ಗ್ರಾಪಂ ವ್ಯಾಪ್ತಿಯ ರಾಜಾಜಿನಗರ ತಾಂಡಾದ ಮಂಡರ ಕೆರೆ ಹೂಳೆತ್ತುವ ಕಾಮಗಾರಿಯನ್ನು 2,50 ಲಕ್ಷ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗಿದೆ. ಎರಡೂ ಕಾಮಗಾರಿಗಳಲ್ಲಿ ನೂರಾರು ಜನರಿಗೆ ಉದ್ಯೋಗ ದೊರೆತಿದೆ.
ಕೆಲಸದ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಕಾಯಕ ಮಿತ್ರ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳುವುದು ಮತ್ತು ಕೋವಿಡ್-19ರ ತಡೆಗೆ ಪಂಚ ಸೂತ್ರಗಳ ಬಗ್ಗೆ ಕೂಲಿ ಕಾರ್ಮಿಕರಿಗೆ ತಿಳಿವಳಿಕೆ ನೀಡಲಾಗುತ್ತಿದೆ. ಈ ಸಂಕಷ್ಟದ ದಿನಗಳಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮೂಲಕ ಉದ್ಯೋಗ ಒದಗಿಸುತ್ತಿರುವುದು. ಗ್ರಾಮಸ್ಥರು ಹಾಗೂ ತಾಂಡಾದ ಜನರಲ್ಲಿ ಸಂತಸ ಮೂಡಿಸಿದೆ.
ಕುಂದಗೋಳ ತಾಲೂಕಿನ ತಲರ್ಘಟ್ಟ ಗ್ರಾಪಂ ವ್ಯಾಪ್ತಿಯ ಗೌಸುಸಾಬ್ ಬೆಂಡಿಗೇರಿ ಇವರ ಜಮೀನಿನಲ್ಲಿ 20 ಸಾವಿರ ರೂ. ವೆಚ್ಚದಲ್ಲಿ ಬದು ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಬದು ನಿರ್ಮಿಸಿದ ಕೂಡಲೇ ಮಳೆ ಬಂದು ಹೊಲದಲ್ಲಿ ನೀರು ಸಂಗ್ರಹವಾಗಿರುವುದರಿಂದ ರೈತರ ಮೊಗದಲ್ಲಿ ಸಂತಸ ಮೂಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.