ಸೀಲ್‌ಡೌನ್‌ ಪ್ರದೇಶದಲ್ಲಿ ಸಾರ್ವಜನಿಕ ಓಡಾಟ ಬೇಡ


Team Udayavani, May 9, 2020, 3:37 PM IST

ಸೀಲ್‌ಡೌನ್‌ ಪ್ರದೇಶದಲ್ಲಿ ಸಾರ್ವಜನಿಕ ಓಡಾಟ ಬೇಡ

ಹಾವೇರಿ: ಕೋವಿಡ್‌ ಪಾಸಿಟಿವ್‌ ಪ್ರಕರಣದ ಹಿನ್ನೆಲೆಯಲ್ಲಿ ಸೀಲ್‌ಡೌನ್‌ ಆಗಿರುವ ಸವಣೂರ ಪಟ್ಟಣ ರಾಜೀವಗಾಂಧಿ ನಗರ ಹಾಗೂ ಎಸ್‌. ಎಂ.ಕೃಷ್ಣ ಬಡಾವಣೆಯಲ್ಲಿ ಸಾರ್ವಜನಿಕ ಓಡಾಟಕ್ಕೆ ಅವಕಾಶ ನೀಡಲೇ ಬಾರದು. ಅಗತ್ಯ ವಸ್ತುಗಳನ್ನು ಮನೆಗೆ ತಲುಪಿಸುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಆದೇಶಿಸಿದರು.

ಸವಣೂರು ಸೀಲ್‌ಡೌನ್‌ ಪ್ರದೇಶದಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳ ಕುರಿತಂತೆ ಉಪವಿಭಾಗಾಧಿಕಾರಿ ಹಾಗೂ ತಾಲೂಕು ತಹಶೀಲ್ದಾರರೊಂದಿಗೆ ವಿಡಿಯೋ ಸಂವಾದದಲ್ಲಿ ಅವರು ಈ ಆದೇಶ ನೀಡಿದರು.

ಸೀಲ್‌ಡೌನ್‌ ಆಗಿರುವ ಪ್ರದೇಶದಲ್ಲಿ ಉಚಿತ ಹಾಲು ವಿತರಣೆ, ಉಚಿತ ಆಹಾರ ಕಿಟ್‌ ಗಳ ವಿತರಣೆ ನಡೆಯಬೇಕು. ಸಾಧ್ಯವಾದರೆ ದಾನಿಗಳಿಂದ ನೆರವು ಪಡೆದು ತರಕಾರಿ ವಿತರಣೆಗೆ ವ್ಯವಸ್ಥೆ ಮಾಡಬೇಕು ಎಂದು ಉಪವಿಭಾಗಾಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಪ್ರದೇಶದಲ್ಲಿ ಕಡ್ಡಾಯವಾಗಿ ಮನೆಯ ಶೌಚಾಲಯಗಳನ್ನೇ ಬಳಸುವಂತೆ ತಿಳಿವಳಿಕೆ ನೀಡಬೇಕು. ಬಯಲು ಬಹಿರ್ದೆಸೆಗೆ ನಿರ್ಬಂಧ ಹಾಕಬೇಕು. ಶೌಚಾಲಯ ವ್ಯವಸ್ಥೆ ಇಲ್ಲದವರಿಗೆ ಪುರಸಭೆಯಿಂದ ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಕಲ್ಪಿಸಬೇಕು ಎಂದು ಸೂಚನೆ ನೀಡಿದರು. ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಮಾಹಿತಿ ನೀಡಿ, ಮನೆ ಮನೆ ಆರೋಗ್ಯ ತಪಾಸಣೆ ನಡೆಸಲಾಗಿದೆ. ಸಾರ್ವಜನಿಕರಿಗೆ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ವಹಿಸಲಾಗಿದೆ. ಸೀಲ್‌ ಡೌನ್‌ ಪ್ರದೇಶದಲ್ಲಿ ಸಾರ್ವಜನಿಕರಿಗೆ ಅಗತ್ಯ ಮೂಲ ಸೌಕರ್ಯಗಳ ವ್ಯವಸ್ಥೆ ಮಾಡಲಾಗಿದೆ. ತಾಲೂಕು ಆಸ್ಪತ್ರೆಯಲ್ಲಿ ಸಾರ್ವಜನಿಕರ ಆರೋಗ್ಯ ತಪಾಸಣೆ ಮಾಡಲು ಸೂಚಿಸಲಾಗಿದೆ ಎಂದರು. ಪಟ್ಟಣದಲ್ಲಿ ಸ್ವತ್ಛತೆಗೆ ಹೆಚ್ಚಿನ ಆದ್ಯತೆ

ನೀಡಲಾಗಿದ್ದು, ಖಾದರಭಾಗ್‌, ಸುಣಗಾರ ಓಣಿ, ಕಮಲಬಂಗಡಿ ಓಣಿಗಳಲ್ಲಿ ಮೆಲಾಥಿನ್‌ ದ್ರಾವಣ ಸಿಂಪಡಣೆ ಮಾಡಲಾಗಿದೆ. ಅಗ್ನಿಶಾಮಕ ವಾಹನದಿಂದ ಕಂಟೈನ್ಮೆಂಟ್‌ ಜೋನ್‌ ಪ್ರದೇಶದಲ್ಲಿ ಹೈಪೋ ಕ್ಲೋರೈಡ್‌ ದ್ರಾವಣ ಸಿಂಪಡಿಸಲಾಗಿದೆ. ಶುದ್ಧ ಕುಡಿಯುವ ನೀರು ಪೂರೈಸಲಾಗುತ್ತಿದೆ ಹಾಗೂ 394 ಆಹಾರ್‌ ಕಿಟ್‌ ವಿತರಿಸಲಾಗಿದೆ ಎಂದು ಅವರು ತಿಳಿಸಿದರು.

ಎಸ್‌.ಎಂ. ಕೃಷ್ಣ ನಗರದಲ್ಲಿನ 374 ಮನೆಗಳಿಗೆ ಭೇಟಿ ನೀಡಿ ಪ್ರತಿ ಸದಸ್ಯರ ಆರೋಗ್ಯ ತಪಾಸಣೆ ನಡೆಸಲಾಗಿದೆ ಹಾಗೂ ದೇಹದ ಉಷ್ಣಾಂಶವನ್ನು ಥರ್ಮಲ್‌ ಸ್ಕ್ಯಾನರ್‌ದಿಂದ ಪರೀಕ್ಷೆ ಮಾಡಲಾಗಿದೆ. ಈ ಪೈಕಿ ಏಳು ಜನರ ಗಂಟಲು ದ್ರವ ಮಾದರಿ ಪರೀಕ್ಷೆ ನಡೆಸಲಾಗಿದೆ. ಹೊರ ರಾಜ್ಯ, ಹೊರ ಜಿಲ್ಲೆಯಿಂದ ಆಗಮಿಸಿದವರ ಆರೋಗ್ಯ ತಪಾಸಣೆ ನಡೆಸಲಾಗಿದೆ. ಆಶಾ ಕಾರ್ಯಕರ್ತೆಯರ ಸಹಾಯದೊಂದಿಗೆ 10 ತಂಡಗಳನ್ನು ರಚಿಸಿ ದಿನಕ್ಕೆ 1,068 ಮನೆಗಳನ್ನು ಸಮೀಕ್ಷೆ ಕೈಗೊಳ್ಳಲಾಗಿದೆ ಎಂದು ಉಪವಿಭಾಗಾಧಿಕಾರಿ ತಿಳಿಸಿದರು.

ಟಾಪ್ ನ್ಯೂಸ್

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

18-bng

Bengaluru: ಅನಧಿಕೃತ ಮಳಿಗೆಗಳ ತೆರವು ಕೋರಿ ಅರ್ಜಿ:ಪಾಲಿಕೆಗೆ ಹೈಕೋರ್ಟ್ ನೋಟಿಸ್‌

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.