ಕೋವಿಡ್ ವಿರುದ್ಧ ಹೋರಾಟಕ್ಕೆ ಸಿದ್ಧರಾಗಿ
Team Udayavani, May 10, 2020, 3:34 PM IST
ಭಾಲ್ಕಿ: ವಿಶ್ವಕ್ಕೆ ಯಮಸ್ವರೂಪಿಯಾಗಿ ಆಗಮಿಸಿರುವ ಕೋವಿಡ್ ವೈರಸ್ ನಿಯಂತ್ರಿಸಲು ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳುವಲ್ಲಿ ಖಾಸಗಿ ಕ್ಲಿನಿಕ್ ವೈದ್ಯರು ಸದಾ ಸಿದ್ಧರಾಗಿರಬೇಕು ಎಂದು ಜಿಲ್ಲಾಧಿಕಾರಿ ಡಾ| ಎಚ್.ಆರ್.ಮಹಾದೇವ ಮನವಿ ಮಾಡಿದರು.
ಪಟ್ಟಣದ ಅಷ್ಟೂರೆ ಕಲ್ಯಾಣ ಮಂಟಪದಲ್ಲಿ ನಡೆದ ಖಾಸಗಿ ಕ್ಲಿನಿಕ್ ವೈದ್ಯರ ಮತ್ತು ಮೆಡಿಕಲ್ ಅಂಗಡಿ ಮಾಲೀಕರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಖಾಸಗಿ ವೈದ್ಯರು ಗುಣಮಟ್ಟದ ಮಾಸ್ಕ್, ಪಿಪಿಇ ಕಿಟ್, ಸ್ಯಾನಿಟೈಸರ್ ಬಳಸಿ ರೋಗಿಗಳಿಗೆ ಚಿಕಿತ್ಸೆ ನೀಡಬೇಕು. ಜ್ವರ, ಕೆಮ್ಮು, ನೆಗಡಿ, ಉಸಿರಾಟದ ತೊಂದರೆ ಎದುರಿಸುತ್ತಿರುವ ವ್ಯಕ್ತಿಗಳ ಗಂಟಲು ದ್ರವ ಮತ್ತು ರಕ್ತ ನಮೂನೆ ಪರೀಕ್ಷೆಗೆ ಕಳುಹಿಸಬೇಕು. ವೈದ್ಯರು ಮತ್ತು ಮೆಡಿಕಲ್ ಶಾಪ್ ಮಾಲೀಕರು ಸಾಮಾಜಿಕ ಅಂತರ ಕಾಪಾಡಿ ವ್ಯವಹರಿಸಬೇಕು. ನಕಲಿ ಮತ್ತು ಅರ್ಹರಿಲ್ಲದ ವೈದ್ಯರು ಚಿಕಿತ್ಸೆ ಕಾರ್ಯದಲ್ಲಿ ತೊಡಗಿದ್ದಲ್ಲಿ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳಲಾವುದು ಎಂದು ಎಚ್ಚರಿಸಿದರು.
ಸಿಇಒ ಗ್ಯಾನೇಂದ್ರಕುಮಾರ ಗಂಗಾವರ, ಡಿಎಚ್ಒ ಡಾ| ವಿ.ಜಿ. ರೆಡ್ಡಿ, ಜಿಲ್ಲಾ ಡ್ರಗ್ ಕಂಟ್ರೋಲರ್ ಎಡಿಸಿ ಹನುಮನಾಳ, ತಹಶೀಲ್ದಾರ್ ಅಣ್ಣಾರಾವ ಪಾಟೀಲ, ತಾಪಂ ಇಒ ಬಸವರಾಜ ನಾಯ್ಕರ, ಸಿಪಿಐ ರಮೇಶ ಮೈಲೂರಕರ್, ಪುರಸಭೆ ಅಧಿಕಾರಿ ಸ್ವಾಮಿದಾಸ, ತಾಲೂಕು ಆರೋಗ್ಯಾಧಿಕಾರಿ ಡಾ| ಜ್ಞಾನೇಶ್ವರ ನಿರಗೂಡೆ, ಡಾ| ಅನೀಲ ಸುಕಾಳೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.