ಗುತ್ತಿಗೆದಾರರಿಂದ ಕ್ಷೇತ್ರದ ಅಭಿವೃದ್ಧಿಗೆ ತೊಡಕು
Team Udayavani, May 9, 2020, 2:35 PM IST
ಮೂಡಿಗೆರೆ: ಕ್ಷೇತ್ರದ ಅಭಿವೃದ್ಧಿಗೆಂದು ಸರ್ಕಾರ ಕೋಟ್ಯಂತರ ರೂ. ಬಿಡುಗಡೆ ಮಾಡಿದ್ದರೂ ಕ್ಷೇತ್ರದ ಅಭಿವೃದ್ಧಿ ಮಾಡಲು ಕೆಲ ಗುತ್ತಿಗೆದಾರರು ತೊಡಕಾಗಿದ್ದಾರೆ ಎಂದು ಶಾಸಕ ಎಂ.ಪಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಕೂಡಲೇ ಕ್ಷೇತ್ರದ ಅಭಿವೃದ್ಧಿಗೆ 17 ಕೋ.ರೂ. ಬಿಡುಗಡೆ ಮಾಡಿದ್ದಾರೆ. ಆ ನಂತರದಲ್ಲಿ 2019-20ರ ಅವಧಿಯಲ್ಲಿ 19 ಕೋಟಿ ಅನುದಾನ, ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 19 ಕೋಟಿ, ಪ್ರಧಾನಿ ಗ್ರಾಮ್ ಸಡಕ್ ಯೋಜನೆಯಿಂದ 36 ಕೋಟಿ, ಅತಿವೃಷ್ಟಿ ಅಭಿವೃದ್ಧಿ ಕಾಮಗಾರಿಗಾಗಿ 20 ಕೋಟಿ. ಬಂಕೇನಹಳಿ, ಮಾಳಿಂಗನಾಡು, ಮುಗ್ರಹಳ್ಳಿ ಸೇತುವೆ ಕಾಮಗಾರಿಗಾಗಿ 8 ಕೋಟಿ. ಭಾರೀ ಮಳೆಯಿಂದ ಹಾಳಾದ ರಸ್ತೆ ಅಭಿವೃದ್ಧಿಗೆ 6 ಕೋಟಿ ಸೇರಿದಂತೆ ಹಲವಾರು ಸರ್ಕಾರದಿಂದ ಅನುದಾನ ನೀಡಲಾಗಿದೆ. ಆದರೆ ಕ್ಷೇತ್ರದಲ್ಲಿರುವ ಕೆಲವು ಗುತ್ತಿಗೆದಾರರು ಸರ್ಕಾರಿ ಅಧಿಕಾರಿಗಳನ್ನು ಬ್ಲಾಕ್ ಮೇಲ್ ಮಾಡುತ್ತಿದ್ದು, ಕ್ಷೇತ್ರದ ಅಭಿವೃದ್ಧಿಗೆ ತೊಡಕಾಗಿದ್ದಾರೆ. ಕೆಲವು ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಆದೇಶ ಪ್ರತಿಗಳು ಗುತ್ತಿಗೆದಾರರ ಕೈ ಸೇರಿದ್ದರೂ ಕಾಮಗಾರಿಗಳ ಕಾರ್ಯ ಆರಂಭಿಸಿಲ್ಲ. ಇದು ಕ್ಷೇತ್ರದ ಅಭಿವೃದ್ಧಿಗೆ ಮಾರಕವಾಗಿ ಪರಿಣಮಿಸಿದೆ. ಗುತ್ತಿಗೆದಾರರ ವಿರುದ್ಧ ಆರೋಪಿಸಿದ್ದಾರೆ.
64 ಕೋಟಿ ರೂ. ಟೆಂಡರ್ ಪ್ರಕ್ರಿಯೆ ಸದ್ಯದಲ್ಲಿಯೇ ಪೂರ್ಣಗೊಳ್ಳಲಿದ್ದು, ಇಂಥ ಕೆಲವು ಗುತ್ತಿಗೆದಾರರು ಪುನಃ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡರೆ ಕ್ಷೇತ್ರದ ಅಭಿವೃದ್ಧಿಗೆ ಹಿನ್ನಡೆಯುಂಟಾಗುತ್ತದೆ. ಕಾಮಗಾರಿ ಕೆಲಸ ನಿರ್ವಹಿಸದ ಕೆಲ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು. ಕ್ಷೇತ್ರದ ಅಭಿವೃದ್ಧಿಯಲ್ಲಿ ತೊಡಕು ಉಂಟುಮಾಡುವ ಯಾವುದೇ ಷಡ್ಯಂತ್ರಗಳಿಗೆ ಬೆದರುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.