ರೈತರಿಗೆ ಶೀಘ್ರ ಪರಿಹಾರ ಒದಗಿಸಿ
Team Udayavani, May 9, 2020, 6:45 PM IST
ಹುಣಸಗಿ: ಆಲಿಕಲ್ಲು ಮಳೆಯಿಂದಾಗಿ ನಷ್ಟಕ್ಕೀಡಾದ ರೈತರಿಗೆ ಅತಿ ಶೀಘ್ರದಲ್ಲಿಯೇ ಪರಿಹಾರ ವಿತರಿಸಿ ರೈತರ ಜೀವನಮಟ್ಟ ಸುಧಾರಿಸಬೇಕು ಎಂದು ರಾಜ್ಯ ರೈತ ಸಂಘ ಮಹಿಳಾ ಘಟಕದ ರಾಜ್ಯ ವಿಭಾಗೀಯ ಕಾರ್ಯದರ್ಶಿ ಮಹಾದೇವಿ ಬೇನಾಳಮಠ ಆಗ್ರಹಿಸಿದರು.
ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಆಲಿಕಲ್ಲು ಮಳೆಗೆ ರೈತರ ಭತ್ತ, ಇನ್ನಿತರ ಬೆಳೆಗಳು ನೆಲಕಚ್ಚಿ ನಾಶವಾಗಿದ್ದವು. ಇದರಿಂದಾಗಿ ರೈತ ಕಂಗಾಲಾಗಿದ್ದಾನೆ. ಪರಿಹಾರ ಮಾತ್ರ ಇನ್ನು ಬಂದಿಲ್ಲ ಎಂದು ದೂರಿದರು. ಮುಂಗಾರು ಹಂಗಾಮು ಪ್ರಾರಂಭವಾಗಲು ಇನ್ನು ಕೆಲವೇ ದಿನಗಳು ಉಳಿದಿವೆ. ಮಳೆ ಪ್ರಾರಂಭವಾಗುವ ಮುಂಚೆಯೇ ರೈತರಿಗೆ ಬಿತ್ತನೆ ಬೀಜ ಹಾಗೂ ಕೃಷಿ ಉಪಕರಣ, ರಾಸಾಯನಿಕ ಗೊಬ್ಬರ ಕೊರತೆ ಆಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕೋವಿಡ್ ನಿಂದಾಗಿ ರೈತರು ನಲುಗಿದ್ದಾರೆ. ಜಿಲ್ಲಾಡಳಿತ ಕ್ರಮದಿಂದ ಜಿಲ್ಲೆಯಲ್ಲಿ ಕೊರೊನಾ ಹಸಿರು ವಲಯದಲ್ಲಿದೆ. ಹೀಗಾಗಿ ಕೋವಿಡ್ ಜಾಗೃತೆಯೊಂದಿಗೆ ರೈತರಿಗೆ ಅವಶ್ಯ ಬೇಕಾಗುವ ಎಲ್ಲ ಸೌಕರ್ಯ ತಲುಪುವಂತಾಗಬೇಕು. ಕೃಷಿ ಪತ್ತಿನ ಸಹಕಾರ ಸಂಘದಿಂದ ರೈತರಿಗೆ ಸಾಲ ದೊರಕಿಸಬೇಕು ಎಂದು ಆಗ್ರಹಿಸಿದರು. ರೈತ ಸಂಘಟನೆ ಪದಾಧಿಕಾರಿಗಳಾದ ರುದ್ರಗೌಡ ಮೇಟಿ, ಬಸವರಾಜ ಬೂದಿಹಾಳ, ಶರಣಮ್ಮ ಬೂದಿಹಾಳ, ಶಿವಲಿಂಗಯ್ಯ ಬೇನಾಳಮಠ ಸೇರಿದಂತೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.