ಇಡ್ಲಿ ಬೆಲೆ ಏರಿಕೆ ಮಾಡಲ್ಲ ಎಂದ ಅಜ್ಜಿ!
ಆರೋಗ್ಯ ಯೋಧರು
Team Udayavani, May 10, 2020, 6:45 AM IST
ಕೋವಿಡ್ 19ವೈರಸ್ ಮತ್ತು ಲಾಕ್ಡೌನ್ನಿಂದಾಗಿ ಅನೇಕರಿಗೆ ಬದುಕು ಸಾಗಿಸುವುದೇ ಸವಾಲಾಗಿ ಪರಿಣಮಿಸಿರುವ ಈ ಹೊತ್ತಲ್ಲಿ ಬೆಲೆಯೇರಿಕೆಯ ಬಿಸಿ ಕೂಡ ಜನಸಾಮಾನ್ಯರನ್ನು ಕಂಗೆಡಿಸಿದೆ. ದಿನನಿತ್ಯದ ಬಳಕೆಯ ಹಲವು ಸಾಮಗ್ರಿಗಳ ಬೆಲೆ ಏರಿಕೆಯಾಗಿದೆ. ಆದರೆ, ತಮಿಳುನಾಡಿನಲ್ಲಿ ಬಡವರಿಗೆ ಕೇವಲ ಒಂದು ರೂಪಾಯಿಗೆ ಇಡ್ಲಿ ನೀಡುವ 85ರ ಅಜ್ಜಿ ಕೆ. ಕಮಲಥಾಲ್ ಅವರು ಮಾತ್ರ ತಮ್ಮ ಕಾಯಕವನ್ನು ಮುಂದುವರಿಸಿದ್ದಾರೆ. ಯಾರು ಕೂಡ ಹಸಿವಿನಿಂದ ಇರಬಾರದು ಎಂಬ ಉದ್ದೇಶಕ್ಕಾಗಿಯೇ ನಾನು 1 ರೂ.ಗೆ ಮನೆಯಲ್ಲೇ ಮಾಡಿದ ಇಡ್ಲಿಯನ್ನು ಮಾರಾಟ ಮಾಡುತ್ತಿರುವುದು. ಹೀಗಿರುವಾಗ, ಈಗ ನಾನು ಯಾವ ಕಾರಣಕ್ಕೂ ಇಡ್ಲಿಯ ಬೆಲೆ ಏರಿಸುವುದಿಲ್ಲ ಎಂದಿದ್ದಾರೆ ಅಜ್ಜಿ.
ಕೋವಿಡ್ 19 ಶುರುವಾದ ಬಳಿಕ ಪರಿಸ್ಥಿತಿ ಸ್ವಲ್ಪ ಕೆಟ್ಟಿದೆ. ಅಗತ್ಯ ಸಾಮಗ್ರಿಗಳ ಬೆಲೆ ಏರಿಕೆಯಾಗಿದೆ. ಆದರೂ, ನಾನು ಇಡ್ಲಿಯ ಬೆಲೆ ಹೆಚ್ಚಿಸುವುದಿಲ್ಲ. ಎಷ್ಟೋ ಬಡವರು ಈ ಕಡಿಮೆ ಬೆಲೆಯ ಇಡ್ಲಿಯಿಂದ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದಾರೆ. ಅವರ ಹೊಟ್ಟೆಗೆ ಹೊಡೆಯಲು ನಾನು ಇಚ್ಛಿಸುವುದಿಲ್ಲ ಎನ್ನುವ ಮೂಲಕ ಅಜ್ಜಿ ಕಮಲಥಾಲ್ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. 30 ವರ್ಷಗಳಿಂದಲೂ ಅವರು 1 ರೂ.ಗೆ ಇಡ್ಲಿ ಮಾರಾಟ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್ಎಚ್ಆರ್ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru Airport; 20 ಲಕ್ಷ ರೂ.ಗಳ ಚಿನ್ನಾಭರಣವಿದ್ದ ಬ್ಯಾಗ್ ವಾರಸುದಾರರಿಗೆ ಹಸ್ತಾಂತರ
Mangaluru; ಟ್ಯಾಂಕರ್ ವ್ಯವಹಾರ: ನಕಲಿ ದಾಖಲೆ ಸೃಷ್ಟಿಸಿ ವಂಚನೆ
ಮಂಡ್ಯ ಸಾಹಿತ್ಯ ಸಮ್ಮೇಳನದ ನಿರ್ಣಯಗಳು ಶೀಘ್ರ ಅನುಷ್ಠಾನಗೊಳ್ಳಲಿ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.