96 ಕಾರ್ಮಿಕರು ತವರಿನತ್ತ
Team Udayavani, May 10, 2020, 10:24 AM IST
ಹುಬ್ಬಳ್ಳಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ನಗರದಲ್ಲಿ ಉಳಿದುಕೊಂಡಿದ್ದ ರಾಜಸ್ಥಾನದ ಮೂಲದ 96 ಕಾರ್ಮಿಕರನ್ನು ಶನಿವಾರ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ 4 ಬಸ್‌ಗಳ ಮೂಲಕ ಅವರ ರಾಜ್ಯಕ್ಕೆ ಕಳುಹಿಸಲಾಯಿತು.
ಇಲ್ಲಿನ ಗೋಕುಲ ರಸ್ತೆ ಹೊಸ ಬಸ್ ನಿಲ್ದಾಣದಿಂದ ನಾಲ್ಕು ಬಸ್‌ಗಳ ಮೂಲಕ ಅವರ ರಾಜಸ್ಥಾನದ ಬಲ್ಹೋತ್ರಾ ಜಿಲ್ಲೆಗೆ ಕಳುಹಿಸಲಾಯಿತು. ತಮ್ಮ ರಾಜ್ಯಕ್ಕೆ ತೆರಳಲು ಕಾರ್ಮಿಕರು ಸೇವಾ ಸಿಂಧು ವೆಬ್‌ಸೈಟ್ ಮೂಲಕ ಹೆಸರು ನೋಂದಾಯಿಸಿದ್ದರು. ರಾಜ್ಯಕ್ಕೆ ತೆರಳಲು ಅನುಮತಿ ದೊರೆತ ಹಿನ್ನೆಲೆಯಲ್ಲಿ ಸಾರಿಗೆ ಸಂಸ್ಥೆಯ ಬಸ್‌ಗಳನ್ನು ಒಪ್ಪಂದ ಮೇರೆಗೆ ಬಾಡಿಗೆ ಪಡೆದುಕೊಂಡಿದ್ದರು.
ವಲಸೆ ಕಾರ್ಮಿಕರನ್ನು ಅವರ ರಾಜ್ಯಕ್ಕೆ ತಲುಪಿಸಲು ವಾಯವ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳು ಜಿಲ್ಲಾಡಳಿತದಿಂದ ಅನುಮತಿ ಪಡೆದು ಪ್ರಯಾಣ ಆರಂಭಿಸಿದರು. ಈ ನಾಲ್ಕು ಬಸ್ ಸೇರಿದಂತೆ ಹುಬ್ಬಳ್ಳಿ ಗ್ರಾಮೀಣ ವಿಭಾಗದಿಂದ ರಾಜಸ್ಥಾನಕ್ಕೆ ಒಟ್ಟು 5 ಬಸ್ ಗಳು ತೆರಳಿದಂತಾಗಿದೆ. ಪ್ರತಿ ಬಸ್‌ಗೆ ಇಬ್ಬರನ್ನು ಚಾಲಕರನ್ನು ನಿಯೋಜಿಸಿದ್ದು, ರಾಜಸ್ಥಾನದ ಬಲ್ಹೋತ್ರಾಕ್ಕೆ ಹೋಗಿ ಬರಲು ಸುಮಾರು 3,000 ಕಿ.ಮೀ. ಆಗಲಿದೆ. ಮಾರ್ಗ ಮಧ್ಯದಲ್ಲಿ ಕಾರ್ಮಿಕರಿಗೆ ಬೇಕಾಗುವ ಆಹಾರ, ನೀರಿನ ವ್ಯವಸ್ಥೆ ಮಾಡಲಾಗಿದೆ.
ಕಾರ್ಮಿಕರನ್ನು ಸುರಕ್ಷಿತವಾಗಿ ತಲುಪಿಸಿ ವಾಪಸ್ಸಾಗಬೇಕು. ಉತ್ತರ ಭಾರತದ ರಾಜ್ಯಗಳಲ್ಲಿ ಸೋಂಕಿನ ಪ್ರಮಾಣದ ಹೆಚ್ಚಿದ್ದು, ಈ ಕುರಿತು ಜಾಗೃತಿ ವಹಿಸುವಂತೆ ಅಧಿಕಾರಿಗಳು ಚಾಲಕರಿಗೆ ಸಲಹೆ ನೀಡಿದರು. ಎಚ್.ರಾಮನಗೌಡ, ಅಶೋಕ ಪಾಟೀಲ ಹಾಗೂ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.