ಹೆತ್ತವರ ಮಡಿಲು ಸೇರಿದ ಸಹೋದರಿಯರು
Team Udayavani, May 10, 2020, 10:30 AM IST
ಧಾರವಾಡ: ಲಾಕ್‌ಡೌನ್ ಜಾರಿಯಿಂದಾಗಿ ದೂರದ ರಾಜಸ್ಥಾನದಲ್ಲಿದ್ದ ತಮ್ಮ ಪಾಲಕರನ್ನು ಸೇರಲಾಗದೇ ಆತಂಕಕ್ಕೀಡಾಗಿದ್ದ ರೋಮುಕುಮಾರಿ ಮತ್ತು ಪೋಸುಕುಮಾರಿ ಎಂಬ ಇಬ್ಬರು ಮಕ್ಕಳು ಶುಕ್ರವಾರ ರಾತ್ರಿ ರಾಜಸ್ಥಾನದ ಸಿರೋಹಿ ಜಿಲ್ಲೆಯ ಮೆಮಂಡ್ವಾರ ಗ್ರಾಮದಲ್ಲಿರುವ ತಮ್ಮ ಹೆತ್ತ ತಂದೆ-ತಾಯಿಗಳ ಮಡಿಲು ಸೇರಿದ್ದಾರೆ.
ಕಳೆದ ಐವತ್ತು ದಿನಗಳಿಂದ ಹೆತ್ತವರಿಂದ ಅಗಲಿದ್ದ ಈ ಮಕ್ಕಳನ್ನು ಅವರ ಪಾಲಕರೊಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್, ಹುಬ್ಬಳ್ಳಿ ಶಹರ ತಹಶೀಲ್ದಾರ್ ಶಶಿಧರ ಮಾಡ್ಯಾಳ ಸೇರಿದಂತೆ ಹಲವರು ವಿಶೇಷ ಪ್ರಯತ್ನ ಮಾಡಿದ್ದರು. ಮೇ 7ರಂದು ಜಿಲ್ಲಾಧಿಕಾರಿಗಳು ಶುಭ ಹಾರೈಸಿ ಮಕ್ಕಳನ್ನು ಬೀಳ್ಕೊಟ್ಟಿದ್ದರು. ರಮೇಶ್ ರಾವಲ್ ಅವರು ತಮ್ಮ ಸ್ವಂತ ಕಾರನ್ನು ಸ್ವತಃ ಚಾಲನೆ ಮಾಡಿಕೊಂಡು ದೂರದ ರಾಜಸ್ಥಾನವರೆಗೆ ಹೋಗಿ ಮಕ್ಕಳನ್ನು ಅವರು ಪಾಲಕರಿಗೆ ತಲುಪಿಸಿದ್ದಾರೆ. ಮಕ್ಕಳು ತಲುಪಿರುವ ಕುರಿತು ರಾಜಸ್ಥಾನದ ಸಿರೋಹಿ ಜಿಲ್ಲಾಧಿಕಾರಿ ಭಗವತಿ ಪ್ರಸಾದ ಅವರು ಧಾರವಾಡ ಜಿಲ್ಲಾಧಿಕಾರಿಗೆ ಲಿಖೀತ ಪತ್ರ ಬರೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
MUST WATCH
ಹೊಸ ಸೇರ್ಪಡೆ
Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್ ಬಾಬಾ…ರುದ್ರಾಕ್ಷಾ!
Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್ ಜಾಮ್
Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!
Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.