ಮುಂಗಾರು ಬಿತ್ತನೆಗೆ ಅನುಕೂಲ ಕಲ್ಪಿಸಿ: ಸುಗೂರ
Team Udayavani, May 10, 2020, 10:51 AM IST
ಸಾಂದರ್ಭಿಕ ಚಿತ್ರ..
ಆಳಂದ: ಕೋವಿಡ್-19 ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಲಾಕ್‌ಡೌನ್ ಜಾರಿಯಲ್ಲಿರುವುದರಿಂದ ಮುಂಗಾರು ಹಂಗಾಮಿನ ಬಿತ್ತನೆಗೆ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಕಲಬುರಗಿ ಜಂಟಿ ಕೃಷಿ ನಿರ್ದೇಶಕ ರಿತೇಂದ್ರನಾಥ ಸುಗೂರ ಹೇಳಿದರು.
ತಾ.ಪಂ ಕಚೇರಿಯಲ್ಲಿ ನಡೆದ ಕೃಷಿ ಇಲಾಖೆ ಅಧಿಕಾರಿಗಳು, ಕ್ರಿಮಿನಾಶಕ, ಗೊಬ್ಬರ ವ್ಯಾಪಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಗೊಬ್ಬರ ಮಾರಾಟ ವ್ಯಾಪಾರಿಗಳು ಸುರಕ್ಷಾ ಕ್ರಮ ಅಳವಡಿಸಿ, ದಟ್ಟಣೆ ಆಗದಂತೆ ರೈತರಿಗೆ ತಿಳಿಹೇಳಿ ಸಕಾಲಕ್ಕೆ ಬೀಜ ಮತ್ತು ಗೊಬ್ಬರ ಮಾರಾಟ ಮಾಡಬೇಕು. ಲಾಕ್ ಡೌನ್ ನಿಯಮ ಉಲ್ಲಂಘಿಸಿದರೆ ಅದಕ್ಕೆ ವ್ಯಾಪಾರಿಗಳೇ ಹೊಣೆಯಾಗಬೇಕಾಗುತ್ತದೆ ಎಂದರು.
ವ್ಯಾಪಾರಿಗಳು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಗ್ರಾಹಕರ ಕೈ ಉಜ್ಜಿಕೊಳ್ಳಲು ಸ್ಯಾನಿಟೈಸರ್ ಇಡಬೇಕು. ರೈತರಿಗೂ ಮಾಸ್ಕ್ಧ ರಿಸಿಕೊಂಡು ಬರುವಂತೆ ತಿಳಿಸಬೇಕು ಎಂದು ಹೇಳಿದರು. ತಹಶೀಲ್ದಾರ್ ದಯಾನಂದ ಪಾಟೀಲ ಮಾತನಾಡಿ, ಬಿತ್ತನೆ ಸೇರಿದಂತೆ ಕೃಷಿ ಕಾರ್ಯಕ್ಕೆ ಯಾವುದೇ ಅಡ್ಡಿಪಡಿಸುವಂತಿಲ್ಲ ಎಂದರು. ಸಹಾಯಕ ಕೃಷಿ ನಿರ್ದೇಶಕ ಶರಣಗೌಡ ಪಾಟೀಲ ಮಾತನಾಡಿ, ಕೋವಿಡ್ ವೈರಸ್ ಹರಡದಂತೆ ತಡೆಯುವ ನಿಟ್ಟಿನಲ್ಲಿ ಹೆಚ್ಚುವರಿ ಬೀಜ ವಿತರಣಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ. ಐದು ಹೋಬಳಿ ಒಳಗೊಂಡು ಆಯಾ ಹೋಬಳಿ ಮಟ್ಟದಲ್ಲಿ ಸೇರಿ 21 ಕಡೆ ಬೀಜ ವಿತರಣಾ ಕೇಂದ್ರ ತೆರೆಯಲಾಗುತ್ತಿದೆ ಎಂದು ತಿಳಿಸಿದರು.
ನರೋಣಾ ಕೃಷಿ ಅಧಿಕಾರಿ ಬಸವರಾಜ ಅಟ್ಟೂರ, ನಿಂಬರಗಾ ಅಪ್ಪಾಸಾಬ್ ಜಗಶೆಟ್ಟಿ, ಮಾದನಹಿಪ್ಪರಗಾದ ವೀರೇಶ ಮಠಪತಿ, ಆಳಂದನ ಸರೋಜನಿ ಅಂಕಲಗಿ, ಖಜೂರಿಯ ಬಿ.ಎಂ. ಬಿರಾದಾರ ಹಾಗೂ ಖಾಸಗಿ ಬೀಜ, ರಸಗೊಬ್ಬರ ವ್ಯಾಪಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ
Wadi: ನಿರ್ಜನ ಪ್ರದೇಶದಲ್ಲಿ ಎಸೆದ ನವಜಾತ ಶಿಶುವನ್ನು ಬದುಕಿಸಲು ಪೊಲೀಸರ ಪರದಾಟ
Waqf issue: ರೈತರ ಜಮೀನು ಪಡೆಯಲು ಬಿಡುವುದಿಲ್ಲ: ಬಿಜೆಪಿ ಗುಡುಗು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
MUST WATCH
ಹೊಸ ಸೇರ್ಪಡೆ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Hassan: ವಿವಾಹ ಆಮಂತ್ರಣ ಪತ್ರಿಕೆ ಹಂಚಿ ಮನೆಗೆ ಮರಳುತ್ತಿದ್ದ ಪೊಲೀಸ್ ಬರ್ಬರ ಹ*ತ್ಯೆ!
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Udupi: ಗೀತಾರ್ಥ ಚಿಂತನೆ-85: ಕಶ್ಮಲ-ಕಲ್ಮಶಗಳ ವ್ಯತ್ಯಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.