ಎರಡು ತಿಂಗಳಲ್ಲಿ ರೈತರಿಗೆ ನೀರು
Team Udayavani, May 10, 2020, 1:24 PM IST
ಯಮಕನಮರಡಿ: ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ಬಳಿ ಇರುವ ರುಸ್ತಂಪೂರ ಏತ ನೀರಾವರಿ ಯೋಜನೆಯ ಮೊದಲ, ಎರಡನೆಯ ಹಂತದ ಕಾಲುವೆ ಪೈಪ್‌ಲೈನ್ ನವೀಕರಣಕ್ಕೆ ಶನಿವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಭೂಮಿಪೂಜೆ ನೆರವೇರಿಸಿದರು. ಶಾಸಕ ಸತೀಶ ಜಾರಕಿಹೊಳಿ
ಮಾತನಾಡಿ, ರುಸ್ತಂಪೂರ ಏತ ನೀರಾವರಿ ಯೋಜನೆಯ ಎರಡು ಹಂತದಲ್ಲಿ ಇರುವ 750ಎಚ್‌ಪಿ ಮೋಟಾರ್‌ಗಳದುರಸ್ತಿ ಹಾಗೂ ದಶಕಗಳಿಂದ ಕಾಲುವೆ ಪೈಪ್ ಒಡೆದಿರುವುದರಿಂದ ರೈತರ ಹೊಲಗದ್ದೆಗಳಿಗೆ ನೀರು ಹೋಗದೆ ಮರಳಿ ಜಲಾಶಯ ಸೇರುತ್ತಿದೆ. ಆದ್ದರಿಂದ ವಿಶೇಷ ಪ್ರಯತ್ನ ಮಾಡಿ ನವೀಕರಣ ಕೈಗೊಳ್ಳಲಾಗುತ್ತಿದ್ದು, ಸುಮಾರು 2226 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಹಾಗೂ 10ಹಳ್ಳಿಯ ದನಕರುಗಳಿಗೆ ಕುಡಿಯುವ ನೀರು ವ್ಯವಸ್ಥೆ ಆಗಲಿದೆ. ಎರಡು ತಿಂಗಳಲ್ಲಿ ಕಾಮಗಾರಿ ಮುಗಿಸಿ ಈ ಭಾಗದ ರೈತರಿಗೆ ನೀರು ಒದಗಿಸಲಾಗುವುದು ಎಂದರು. ನೀರಾವರಿ ಇಲಾಖೆ 3.35ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿದೆ.
ಜಿಪಂ ಸದಸ್ಯ ಮಂಜುನಾಥ ಪಾಟೀಲ, ರುಸ್ತಂಪುರ ಗ್ರಾಪಂ ಅಧ್ಯಕ್ಷ ಶೋಭಾ ರಾಜನಗೋಳ, ಭೀಮರಾಯಿ ಲಕ್ಕೆನವರ, ಮಾರುತಿ ನಾಯಿಕ, ಅಭಿಯಂತರಾದ ಎಂ.ಎಸ್.ಒಡೆಯರ, ಅರವಿಂದ ಜಮಖಂಡಿ ಹಾಗೂ ಗ್ರಾಮಸ್ಥರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Belagavi: ಮರಕ್ಕೆ ಕ್ರೂಸರ್ ಢಿಕ್ಕಿ: ಸ್ಥಳದಲ್ಲೇ ಮೂವರ ಸಾವು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.