ಗಡಿ ದಾಟಲು ಜನರ ಹರಸಾಹಸ
ಇ-ಪಾಸ್ ಇದ್ದವರಿಗೆ ಮಾತ್ರ ಪ್ರವೇಶಾವಕಾಶ
Team Udayavani, May 10, 2020, 1:35 PM IST
ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದಲ್ಲಿ ಕೋವಿಡ್ 19 ತಾಂಡವವಾಡುತ್ತಿದೆ. ಹೀಗಾಗಿ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಜನರನ್ನು ಗಡಿ ಭಾಗದ ಕೊಗನ್ನೊಳ್ಳಿ ಚೆಕ್‌ಪೋಸ್ಟ್ ಬಳಿ ನಿಯಂತ್ರಿಸಲು ಜಿಲ್ಲಾಡಳಿತ ಹರಸಾಹಸ ಪಡುತ್ತಿದೆ. ಪಾಸ್ ಇಲ್ಲದೆ ಅಕ್ರಮವಾಗಿ ರಾಜ್ಯದ ಒಳಗೆ ಜನ ನುಸುಳುತ್ತಿರುವ ಪರಿಣಾಮ ಗಡಿಯಲ್ಲಿ ಆತಂಕ ಹೆಚ್ಚಿದೆ.
ಮಹಾರಾಷ್ಟ್ರದ ಮುಂಬೈ, ಪುಣೆ, ಕೊಲ್ಲಾಪೂರ ಮುಂತಾದ ಜಿಲ್ಲೆಗಳಿಂದ ರಾಜ್ಯಕ್ಕೆ ಆಗಮಿಸುವ ಜನರಲ್ಲಿ ಈ-ಪಾಸ್ ಇದ್ದವರಿಗೆ ಮಾತ್ರ ರಾಜ್ಯದ ಒಳಗೆ ಬರಲು ಅವಕಾಶ ಮಾಡಿಕೊಡುತ್ತಿದ್ದಾರೆ. ಕೆಲವು ಈ ಪಾಸ್ ಇಲ್ಲದವರು ಅಕ್ರಮ ಮಾರ್ಗದಲ್ಲಿ ರಾಜ್ಯದ ಒಳಗೆ ನುಸುಳುತ್ತಿರುವುದು ಪೊಲೀಸರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಪೊಲೀಸರು ಎಲ್ಲ ವಾಹನಗಳ ತಪಾಸಣೆ ಮಾಡಿ, ರಾಜ್ಯದ ಈ-ಪಾಸ್ ಹೊಂದಿದಲ್ಲಿ ಮಾತ್ರ, ಅವರ ಆರೋಗ್ಯ ಪರೀಕ್ಷೆ ಮಾಡಿಸಿ ಹೋಮ್ ಕ್ವಾರಂಟೈನ್ ಸೀಲ್ ಹಾಕಿ ರಾಜ್ಯಕ್ಕೆ ಪ್ರವೇಶಿಸಲು ಅನುಮತಿ ನೀಡುತ್ತಿದ್ದಾರೆ. ರಾಜ್ಯದ ಕೊನೆಯ ಗ್ರಾಮ ತಾಲೂಕಿನ ಕೊಗನೋಳಿ ಗ್ರಾಮದಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ಪೊಲೀಸರು ಅಕ್ರಮವಾಗಿ ಜನ ನುಸುಳಿ ಬರದಂತೆ ತಡೆದರೂ ಸಹ ರಸ್ತೆ ಬದಿಯ ಹೊಲದಲ್ಲಿ ಹಾಯ್ದು ಜನರು ಬರುತ್ತಿರುವುದು ಕಂಡು ಬರುತ್ತಿದೆ.
ಚೆಕ್‌ಪೋಸ್ಟ್ ಬಳಿ ಜನವೋ ಜನ: ಇತ್ತ ರಾಜ್ಯದಿಂದ ಮಹಾರಾಷ್ಟ್ರಕ್ಕೆ ಹೋಗುವ ಹಾಗೂ ಅತ್ತ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವ ಜನ ಕೊಗನ್ನೊಳ್ಳಿ ಚೆಕ್‌ಪೋಸ್ಟ್ ಬಳಿ ಬಂದು ಸೇರುವುದರಿಂದ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಜನರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಕೆಲವರು ಮೂರು ದಿನಗಳಿಂದ ರಸ್ತೆ ಬದಿಯ ಗಿಡದ ನೆರಳಲ್ಲಿ ವಾಸ ಮಾಡುತ್ತಿದ್ದಾರೆ. ಸಣ್ಣ ಮಕ್ಕಳು ಬಿಸಿಲಿನ ತಾಪಕ್ಕೆ ಕಂಗಾಲಾಗಿ ಹೋಗುತ್ತಿದ್ದಾರೆ. ಹೊಲದ ಮಾರ್ಗವಾಗಿ ರಾಜಾರೋಷವಾಗಿ ದ್ವಿಚಕ್ರ ವಾಹನಗಳ ಮೂಲಕ ಸಂಚಾರ ನಡೆದಿದೆ. ರಾತ್ರಿ ಸಮಯದಲ್ಲಿ ಹಲವಾರು ಜನರು ಗ್ರಾಮದ ಲಕ್ಷ್ಮೀನಗರದ ಮೂಲಕ ಹಾದು ಹೋಗುತ್ತಿದ್ದಾರೆ. ಅವರನ್ನು ತಡೆಯಲು ನಮಗೆ ಭಯವಾಗುತ್ತಿದೆ. ಅವರಿಗೆ ಸೋಂಕು ತಗುಲಿದ್ದಲ್ಲಿ ನಮ್ಮದೂ ಅಧೋಗತಿ ಎನ್ನುತ್ತಾರೆ ಕೊಗನ್ನೊಳ್ಳಿ ಗ್ರಾಮಸ್ಥ ಅಜಯ ನವಾಳೆ.
ಈ-ಪಾಸ್ ಇದ್ದವರಿಗೆ ಮಾತ್ರ ರಾಜ್ಯದ ಒಳಗೆ ಬರಲು ಅವಕಾಶಮಾಡಿಕೊಡಲಾಗುತ್ತದೆ. ಪಾಸ್ ಇಲ್ಲದವರು ಯಾ ರೇ ಎಷ್ಟೇ ಒತ್ತಡ ತಂದರೂ ಒಳಗೆ ಬರಲು ಸಾಧ್ಯವಾಗುವುದಿಲ್ಲ, ದಿನದ 24 ಗಂಟೆಗಳ ಕಾಲ ಪೊಲೀಸ್ ಹಾಗೂ ಕಂದಾಯ ಇಲಾಖೆ ಚೆಕ್‌ಪೋಸ್ಟ್‌ದಲ್ಲಿ ಕಾರ್ಯನಿರ್ವಹಿಸುತ್ತಿವೆ. – ರವೀಂದ್ರ ಕರಲಿಂಗನ್ನವರ, ಉಪವಿಭಾಗಾಧಿಕಾರಿ, ಚಿಕ್ಕೋಡಿ
ಅಕ್ರಮವಾಗಿ ಜನ ಗಡಿ ದಾಟಿ ಹೋಗುವುದು ಕಂಡು ಬಂದರೆ ಅಂಥವರನ್ನು ಗುರ್ತಿಸುವ ಕೆಲಸವನ್ನು ಪೊಲೀಸ್ ಹಾಗೂ ಕಂದಾಯ ಇಲಾಖೆ ಮಾಡುತ್ತದೆ. – ಮನೋಜ ನಾಯಿಕ, ಡಿವೈಎಸ್‌ಪಿ ಚಿಕ್ಕೋಡಿ
–ಮಹಾದೇವ ಪೂಜೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.