ರಂಜಾನ್ ಸರಳವಾಗಿ ಆಚರಿಸಿ
Team Udayavani, May 10, 2020, 2:21 PM IST
ಸಾಂದರ್ಭಿಕ ಚಿತ್ರ
ಮುಂಡರಗಿ: ದೇಶಾದ್ಯಂತ ಕೋವಿಡ್ 19 ವೈರಸ್ ಭೀತಿ ಹೆಚ್ಚುತ್ತಿದೆ. ಆದ ಕಾರಣ ರಂಜಾನ್ ಹಬ್ಬವನ್ನುಬಡವರಿಗೆ ದಾನ, ಧರ್ಮ ಮಾಡುವ ಮೂಲಕ ಮನೆಯಲ್ಲಿ ಸರಳವಾಗಿ, ಸಾಂಕೇತಿಕವಾಗಿ ಆಚರಣೆ ಮಾಡಬೇಕು ಎಂದು ಮುಸ್ಲಿಂ ಸಮಾಜದ ಮುಖಂಡ ನಬೀಸಾಬ್ ಕೆಲೂರು ಹೇಳಿದರು.
ಪಟ್ಟಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಆರೋಗ್ಯ ಮತ್ತು ದೇಶದ ಹಿತದೃಷ್ಟಿಯಿಂದ ಎಲ್ಲರೂ ಪರಸ್ಪರ ದೈಹಿಕ ಅಂತರ ಕಾಪಾಡಿಕೊಳ್ಳಬೇಕು. ಸಾಂಪ್ರದಾಯಿಕವಾಗಿ ಹಬ್ಬವನ್ನು ಮನೆಯಲ್ಲಿ ಆಚರಿಸುವ ಮೂಲಕ ಸಮಾಜಕ್ಕೆ ದೇಶಕ್ಕೆ ನಮ್ಮದೆ ಆದಂತಹ ಕೊಡುಗೆ ನೀಡುವ ಮೂಲಕ ಇತರರಿಗೆ ಮಾದರಿ ಆಗುವ ಕೆಲಸ ಮಾಡಬೇಕು. ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಮುಸ್ಲಿಂ ಸಮಾಜ ಬಾಂಧವರು ಮೆರವಣಿಗೆ ಮಾಡುವುದು, ಸಾಮೂಹಿಕ ಪ್ರಾರ್ಥನೆ ಸಲ್ಲಿಸುವುದು ರದ್ದು ಪಡಿಸಲಾಗಿದೆ.
ಎಲ್ಲರೂ ತಮ್ಮ-ತಮ್ಮ ಪ್ರಾರ್ಥನೆ ಸಲ್ಲಿಸಿ, ಮನೆಯಲ್ಲಿ ಹಬ್ಬವನ್ನು ಸಾಂಕೇತಿಕವಾಗಿ ಆಚರಿಸಬೇಕು. ಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಮೂಲಕ ರಂಜಾನ್ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಬೇಕಾಗಿದೆ ಎಂದು ಮುಸ್ಲಿಂ ಸಮಾಜದ ಎಲ್ಲ ಹಿರಿಯರು ಕೂಡಿಕೊಂಡು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು. ಮಹ್ಮದಸಾಬ್ ತಳಗಡೆ, ರಿಯಾಜ್ ತಪ್ಪಡಿ ಪತ್ರಿಕಾಗೋಷ್ಠಿಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಹೊಸ ಸೇರ್ಪಡೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.