ಮತ್ತೊಂದು ಕೋವಿಡ್-19 ಕೇಸ್ ಪತ್ತೆ: 848ಕ್ಕೇರಿದ ರಾಜ್ಯದ ಸೋಂಕಿತರ ಸಂಖ್ಯೆ
Team Udayavani, May 10, 2020, 6:05 PM IST
ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಕೋವಿಡ್-19 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೋವಿಡ್-19 ಸೋಂಕು ಪತ್ತೆಯಾದವರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ.
ರವಿವಾರ ಮಧ್ಯಾಹ್ನದ ಬಳಿಕ ಕಲಬುರಗಿಯಲ್ಲಿ ಮತ್ತೊಂದು ಪ್ರಕರಣ ದೃಢವಾಗಿದೆ. ಉಸಿರಾಟದ ಸಮಸ್ಯೆ, ಜ್ವರದಿಂದ ಬಳಲುತ್ತಿರುವ ಕಲಬುರಗಿಯ 35 ವರ್ಷದ ವ್ಯಕ್ತಿಗೆ ಸೋಂಕು ತಾಗಿರುವುದು ದೃಢವಾಗಿದೆ. ಇಂದು ಕಲಬುರಗಿಯಲ್ಲಿ ಪತ್ತೆಯಾದ ಒಟ್ಟು ನಾಲ್ಕನೇ ಪ್ರಕರಣ ಇದಾಗಿದೆ.
ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 848ಕ್ಕೆ ಏರಿಕೆಯಾಗಿದೆ. ಇದರಲ್ಲಿ 31 ಜನರು ಸಾವನ್ನಪ್ಪಿದರೆ 422 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಮತ್ತು ಓರ್ವ ಕೋವಿಡ್ ಅಲ್ಲದ ಕಾರಣದಿಂದ ಸಾವನ್ನಪ್ಪಿದ್ದಾರೆ.
ಇಂದು ಒಟ್ಟು 36 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಕಲಬುರಗಿಯಲ್ಲಿ ಅತೀ ಹೆಚ್ಚು ಅಂದರೆ 13 ಮಂದಿ ಬಿಡುಗಡೆಯಾಗಿದ್ದಾರೆ. ವಿಜಯಪುರದಲ್ಲಿ ಎಂಟು, ಚಿಕ್ಕಬಳ್ಳಾಪುರದಲ್ಲಿ ನಾಲ್ಕು, ಗದಗ, ಬೆಳಗಾವಿ, ಬಾಗಲಕೋಟೆ ತಲಾ ಮೂರು, ಮತ್ತು ಮೈಸೂರಿನಲ್ಲಿ ಓರ್ವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ
MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.