ನ್ಯಾಯಬೆಲೆ ಅಂಗಡಿ ವಿರುದ್ಧ ಕ್ರಮ


Team Udayavani, May 10, 2020, 6:20 PM IST

ನ್ಯಾಯಬೆಲೆ ಅಂಗಡಿ ವಿರುದ್ಧ ಕ್ರಮ

ತುಮಕೂರು: ಕೋವಿಡ್ 19 ದಿಂದ ದೇಶ ಸಂಕಷ್ಟದಲ್ಲಿದ್ದು, ರೈತರು ಬೆಳೆದರೆ ಮಾತ್ರ ದೇಶ ಉದ್ಧಾರ ಆಗಲು ಸಾಧ್ಯ ಎನ್ನುವುದನ್ನು ಅರಿತು ಕೃಷಿ ವಲಯಕ್ಕೆ ಲಾಕ್‌ ಡೌನ್‌ ನಡುವೆಯೂ ಸಡಿಲಿಕೆಯನ್ನು ನೀಡಲಾಗಿತ್ತು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಗೋಪಾಲಯ್ಯ ತಿಳಿಸಿದರು.

ತಾಲೂಕಿನ ಬುಗುಡನಹಳ್ಳಿ ಗ್ರಾಮದಲ್ಲಿ ಕೋವಿಡ್ 19  ಲಾಕ್‌ ಡೌನ್‌ ನಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ ಪಡಿತರ ವಿತರಿಸಿ ಮಾತನಾಡಿದ ಅವರು, ಆಹಾರವನ್ನು ಸರಿಯಾಗಿ ಪೂರೈಕೆ ಮಾಡದ 150 ಅಂಗಡಿಗಳ ಪರವಾನಗಿ ಅಮಾನತು ಮಾಡಲಾಗಿದೆ ಎಂದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಪಡಿತರವನ್ನು ಉಚಿತವಾಗಿ ನೀಡಲಾಗುತ್ತಿದೆ. ರಾಜ್ಯ ಸಂಕಷ್ಟದಲ್ಲಿರುವ ಪರಿಸ್ಥಿತಿಯಲ್ಲಿ ಹಣ ಪಡೆಯದಂತೆ ಮನವಿ ಮಾಡಿದರೂ, ಅಂಗಡಿ ಮಾಲೀಕರು ಕೇಳದೇ ಮೋಸ ಮಾಡುತ್ತಿದ್ದ ಅಂಗಡಿಗಳು ಹಾಗೂ ಕಾರ್ಯ ನಿರ್ವಹಿಸದ ಅಧಿಕಾರಿ ಗಳನ್ನು ಅಮಾನತು ಮಾಡಲಾಗಿದೆ ಎಂದು ಹೇಳಿದರು. ಯಾವುದೇ ಕಾರಣಕ್ಕೂ ಕಳಪೆ ಪಡಿತರವನ್ನು ವಿತರಿಸದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪಡಿತರ ಚೀಟಿ ಹೊಂದಿರುವವರಿಗೆ ಉಚಿತವಾಗಿ ನೀಡುವಂತಾಗಬೇಕು ಎಂದರು.

ಜಿಲ್ಲೆಯಲ್ಲಿ ರಾಗಿ ಬೆಳೆಯನ್ನು ಹೆಚ್ಚಾಗಿ ಬೆಳೆಯುವುದರಿಂದ 2ಲಕ್ಷ ಮೆಟ್ರಿಕ್‌ ಟನ್‌ ರಾಗಿಯನ್ನು ರೈತರಿಂದ ಖರೀದಿಸಲಾಗಿದ್ದು, 96 ಸಾವಿರ ರೈತರು ರಾಗಿ ಮಾರಲು ನೋಂದಣಿ ಮಾಡಿಕೊಂಡಿದ್ದು, ಹೆಚ್ಚುವರಿಯಾಗಿ ಒಂದು ಲಕ್ಷ ಮೆಟ್ರಿಕ್‌ ಟನ್‌ ರಾಗಿ ಖರೀದಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ತಿಳಿಸಿದರು.

ಮಾಜಿ ಶಾಸಕ ಸುರೇಶ್‌ ಗೌಡ ಮಾತನಾಡಿ, ಕಳೆದ ತಿಂಗಳಿಂದ ದೇಶ ಸ್ತಬ್ಧವಾಗಿದೆ, ಕೋವಿಡ್ 19  ವಿರುದ್ಧ ಹೋರಾಡಲು ಯುದ್ಧ ಮಾಡುವಂತೆ ಪ್ರಧಾನಿ ಮೋದಿ ಅವರು ನೀಡಿದ ಕರೆಯಂತೆ ದೇಶದ ಜನ ಯುದ್ಧ ಮಾಡಿದ್ದಾರೆ, ಕೊನೆ ಹಂತದಲ್ಲಿ ಭಾರತ ಗೆಲ್ಲಲ್ಲು ಜೂನ್‌, ಜುಲೈವರೆಗೆ ಹೋರಾಡಬೇಕಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.