ರಸ್ತೆಗೆ ಹೂ ಸುರಿದು ಬೆಳೆಗಾರರ ಆಕ್ರೋಶ
ಮಾರುಕಟ್ಟೆ ವ್ಯವಸ್ಥೆ ಇಲ್ಲದೇ ಕಂಗಾಲು; ವಿದ್ಯುತ್ ಶುಲ್ಕ ಮನ್ನಾ ಮಾಡಿ, 6 ತಿಂಗಳ ಜಿಎಸ್‌ಟಿ ಕೈಬಿಡಿ
Team Udayavani, May 11, 2020, 9:14 AM IST
ಸಾಂದರ್ಭಿಕ ಚಿತ್ರ
ದೊಡ್ಡಬಳ್ಳಾಪುರ: ಕೋವಿಡ್ ದಿಂದಾಗಿ ಪಾಲಿಹೌಸ್‌ಗಳಲ್ಲಿ ಹೂ ಬೆಳೆದಿರುವ ರೈತರು, ಮಾರುಕಟ್ಟೆ ವ್ಯವಸ್ಥೆಯಿಲ್ಲದೇ ಸಂಕಷ್ಟದಲ್ಲಿದ್ದು, ಕೂಡಲೇ ರೈತರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಆಗ್ರಹಿಸಿ, ರೈತರು ಹೂ ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ ಹೂಗಳನ್ನು ರಸ್ತೆಗೆ ಸುರಿದು ಪ್ರತಿಭಟಿಸಿದರು.
ದಕ್ಷಿಣ ಭಾರತ ಹೂ ಬೆಳೆಗಾರರ ಸಂಘದ ನಿರ್ದೇಶಕ ಅರವಿಂದ್ ಮಾತನಾಡಿ, ರಾಜ್ಯದಲ್ಲಿ ಸುಮಾರು 2.5 ಸಾವಿರ ಎಕರೆ ಪ್ರದೇಶದಲ್ಲಿ ಪಾಲಿಹೌಸ್‌ಗಳಲ್ಲಿ ಹೂ ಬೆಳೆಯಾಗುತ್ತಿದೆ.
ತಾಲೂಕಿನಲ್ಲಿ 600 ಎಕರೆ ಪ್ರದೇಶದಲ್ಲಿ ಹೂ ಬೆಳೆಯಲಾಗುತ್ತಿದೆ. ಕೋವಿಡ್ ಪರಿಣಾಮದಿಂದಾಗಿ ಪಾಲಿಹೌಸ್‌ಗಳಲ್ಲಿ ಹೂ ಬೆಳೆದಿರುವ ರೈತರು ಹೂಗಳ ಮಾರಾಟ ವ್ಯವಸ್ಥೆಯಿಲ್ಲದೇ ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯ ಸರ್ಕಾರ ಹೆಕ್ಟೇರ್‌ಗೆ 25 ಸಾವಿರ ರೂ. ನಿರ್ವಹಣೆ ವೆಚ್ಚ ನೀಡುತ್ತಿದ್ದು, ನಿರ್ವಹಣೆಗೆ ರೈತರು ಎಕರೆಗೆ 1.25 ಲಕ್ಷ ರೂ. ಖರ್ಚು ಮಾಡುತ್ತಿದ್ದಾರೆ. ರೈತರಿಗೆ ಹೆಚ್ಚಿನ ನಿರ್ವಹಣೆ ವೆಚ್ಚ ನೀಡಬೇಕು. ಬ್ಯಾಂಕ್‌ಗಳಲ್ಲಿ ಪಡೆದ ಸಾಲದ 6 ತಿಂಗಳ ಬಡ್ಡಿ ಮನ್ನಾ ಮಾಡಬೇಕು. ಉಚಿತ ವಿದ್ಯುತ್ ಸರಬರಾಜು ಮಾಡಬೇಕು ಎಂದು ಸಿಎಂಯಡಿ ಯೂರಪ್ಪ ಅವರಿಗೆ ಮನವಿ ಮಾಡಲಾಗಿದೆ. ಆದರೆ ಸರ್ಕಾರ ದಿಂದ ಭರವಸೆ ದೊರೆತಿಲ್ಲ ಎಂದರು.
ತಾಲೂಕು ಹಸಿರು ಮನೆ ಹೂವು ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘದ ಖಜಾಂಚಿ ವೆಂಕಟೇಶ್ ಮಾತನಾಡಿ, ಲಾಕ್‌ಡೌನ್ ಈಗ ಮುಕ್ತಾಯವಾದರೂ ಹೂವಿನ ವ್ಯಾಪಾರ ಬೇಗ
ಆರಂಭವಾಗುತ್ತದೆ ಎನ್ನುವ ನಂಬಿಕೆ ಇಲ್ಲದಾಗಿದೆ. ರಸಗೊಬ್ಬರ, ಕ್ರಿಮಿನಾಶಕದ ಮೇಲಿನ ಜಿಎಸ್‌ಟಿ 6 ತಿಂಗಳ ಕೈ ಬಿಡಬೇಕು ಎಂದು ಒತ್ತಾಯಿಸಿದರು.
ಸಂಘದ ಕಾರ್ಯದರ್ಶಿ ಶಾಮಸುಂದರ್ ಮಾತನಾಡಿ, ಹೂವು ಮಾರಾಟವಾಗದೇ ಕಂಗಾಲಾಗಿದ್ದ ಬೆಳೆಗಾರರಿಗೆ ಈಗ ಬೆಸ್ಕಾಂ ವಿದ್ಯುತ್ ಶುಲ್ಕ ಪಾವತಿ ಮಾಡಲು ಬಿಲ್ ನೀಡಿ, ಶುಲ್ಕ ಪಾವತಿಗೆ ಮೇ 18 ಕೊನೆಯ ದಿನ ಎಂದು ಗಡುವು ನೀಡುವ ಮೂಲಕ ಶಾಕ್ ನೀಡಿದೆ. ಆರು ತಿಂಗಳವರೆಗೆ ವಿದ್ಯುತ್ ಶುಲ್ಕ ಮನ್ನಾ ಮಾಡಬೇಕು ಎಂದರು. ಸಂಘದ ತಾಲೂಕು ಘಟಕದ ಅಧ್ಯಕ್ಷ ಕೆ.ಎಸ್.ಚನ್ನರಾ ಮಯ್ಯ, ದಕ್ಷಿಣ ಭಾರತ ಹೂ ಬೆಳೆ ಗಾರರ ಸಂಘದ ನಿರ್ದೇಶಕ ಶ್ರೀಕಾಂತ್, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಟಿ.ವಿ.ಲಕ್ಷ್ಮೀ ನಾರಾಯಣ್, ಜಿಪಂ ಮಾಜಿ ಅಧ್ಯಕ್ಷ
ಸಿ.ಡಿ. ಸತ್ಯನಾರಾಯಣ ಗೌಡ, ಮುಖಂಡ ಬಿ.ಸಿ.ನಾರಾಯಣ ಸ್ವಾಮಿ, ತಾಲೂಕು ಸಂಘದ ಸದಸ್ಯ ಸತೀಶ್, ನಾಗರಾಜ್, ಶಿವಾನಂದರೆಡ್ಡಿ, ಶ್ರೀನಿವಾಸ್, ಮಲ್ಲೇಶ್, ಮುದ್ದುಕೃಷ್ಣಪ್ಪ,
ಹನುಮಂತಯ್ಯ, ರವಿಕುಮಾರ್ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nelamangala: ಸಾಕು ನಾಯಿ ಸತ್ತಿದ್ದಕ್ಕೆ ಮಾಲಕ ಆತ್ಮಹ*ತ್ಯೆ
Doddaballapur: ಹೊಲದಲ್ಲಿ ಹೂ ಬಿಡಿಸುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ: ಸಾವು
Road Mishap: ಬೈಕ್ ವ್ಹೀಲಿಂಗ್ ಮಾಡುವಾಗ ಕ್ಯಾಂಟರ್‌ಗೆ ಡಿಕ್ಕಿ; ಇಬ್ಬರು ಸಾವು
Tragic: ಮದುವೆ ಹರಕೆ ಹೊತ್ತು ಘಾಟಿ ದೇಗುಲಕ್ಕೆ ಬಂದಿದ್ದ ಯುವತಿ ಸಾವು
Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.