ಸಂತಸ ಮೂಡಿಸಿದ ಮಳೆ
Team Udayavani, May 11, 2020, 9:26 AM IST
ಗದಗ: ಒಂದು ವಾರದಿಂದ ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಸುರಿಯುತ್ತಿದೆ. ಅವಳಿ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಆಗಾಗ ಮಳೆಯಾಗುತ್ತಿದ್ದು, ರೈತರು ಹಾಗೂ ಸಾರ್ವಜನಿಕರಲ್ಲಿ ಸಂತಸ ತಂದಿದೆ.
ರವಿವಾರ ಬೆಳಗ್ಗೆಯಿಂದಲೇ ಅವಳಿ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು. ಸಂಜೆ 4 ಗಂಟೆ ಸುಮಾರಿಗೆ ಆರಂಭಗೊಂಡ ಮಳೆ ಅರ್ಧ ಗಂಟೆಗೂ ಹೆಚ್ಚು ಕಾಲ ಬಿರುಸಿನಿಂದ ಸುರಿಯಿತು. ಇದರಿಂದಾಗಿ ಹಳೇ ಡಿಸಿ ಆಫೀಸ್ ಸರ್ಕಲ್, ಗಾಂಧಿ ವೃತ್ತ ಹಾಗೂ ತೋಂಟದಾರ್ಯ ಮಠದ ಹೆಬ್ಟಾಗಿಲು ಬಳಿ ಎರಡು ಅಡಿ ಎತ್ತರದಷ್ಟು ನೀರು ಹರಿಯಿತು. ಮಳೆ ನೀರಿನಿಂದಾಗಿ ಚರಂಡಿಗಳು ತುಂಬಿ ಹರಿದವು. ಇಲ್ಲಿನ ಹೊಂಬಳ ನಾಕಾ, ಜನತಾ ಕಾಲೋನಿ ಸೇರಿದಂತೆ ಅವಳಿ ನಗರದ ವಿವಿಧೆಡೆ ತಗ್ಗು ಪ್ರದೇಶದಲ್ಲಿರುವ ಮನೆಗಳಿಗೆ ಮಳೆ ನೀರು ನುಗ್ಗಿದ್ದರಿಂದ ಭಾರೀ ಅವಾಂತರ ಸೃಷ್ಟಿಯಾಗಿತ್ತು. ಬಿರುಗಾಳಿ ಸಹಿತ ಸುರಿದ ಮಳೆಗೆ ಅಲ್ಲಲ್ಲಿ ಮರಗಳು ವಿದ್ಯುತ್ ತಂತಿಗಳ ಮೇಲೆ ಒರಗಿದ್ದರಿಂದ ನಗರದಲ್ಲಿ ಕೆಲಕಾಲ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.
ಬಳಿಕ ಸ್ಥಳಕ್ಕೆ ಧಾವಿಸಿದ ಹೆಸ್ಕಾಂ ಸಿಬ್ಬಂದಿ, ಮರಗಳನ್ನು ತೆರವುಗೊಳಿಸಿ, ವಿದ್ಯುತ್ ಪೂರೈಕೆಗೆ ಅನುವು ಮಾಡಿಕೊಟ್ಟರು. ತಾಲೂಕಿನ ಹರ್ಲಾಪುರ, ತಿಮ್ಮಾಪುರ, ಮುಂಡರಗಿ ತಾಲೂಕಿನ ಮೇವುಂಡಿ, ಶಿಂಗಟಾಲೂರ ಕೆರೆ ಭಾಗದಲ್ಲಿ ಆಲಿಕಲ್ಲಿ ಮಳೆ ಸುರಿದಿದೆ. ನರಗುಂದ ಭಾಗದಲ್ಲೂ ಸಾಧಾರಣ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.