ಪೌರ ಕಾರ್ಮಿಕರಿಗೆ ಸನ್ಮಾನ-ಕಿಟ್ ವಿತರಣೆ
Team Udayavani, May 11, 2020, 1:05 PM IST
ಹುಬ್ಬಳ್ಳಿ: ನಗರವನ್ನು ಸ್ವಚ್ಛವಾಗಿಡುವ ಮೂಲಕ ನಮ್ಮೆಲ್ಲರ ಆರೋಗ್ಯ ಕಾಪಾಡುವಲ್ಲಿ ಪೌರ ಕಾರ್ಮಿಕರು ಹೆಚ್ಚಿನ ಮುತವರ್ಜಿ ವಹಿಸುತ್ತಿದ್ದು, ಅವರೆಲ್ಲರಿಗೂ ಅಭಿನಂದನೆಗಳು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಹೇಳಿದರು.
ವಿದ್ಯಾನಗರ ಹಳೇ ಆದಾಯ ತೆರಿಗೆ ಕಚೇರಿ ರಸ್ತೆಯಲ್ಲಿನ ಗಣಪತಿ ಗುಡಿ ಹತ್ತಿರ ಸ್ಥಳೀಯ ನಿವಾಸಿಗಳು ಸುಮಾರು 30 ಪೌರ ಕಾರ್ಮಿಕರನ್ನು ಸನ್ಮಾನಿಸಿ ಅವರಿಗೆ ದಿನಸಿ ವಸ್ತುಗಳ ಕಿಟ್ ನೀಡಿ ಚಪ್ಪಾಳೆ ತಟ್ಟುವ ಮೂಲಕ ಗೌರವ ಸಲ್ಲಿಸಿದ ನಂತರ ಮಾತನಾಡಿದ ಅವರು, ಮಹಾನಗರದಲ್ಲಿ ಆಶಾ ಕಾರ್ಯಕರ್ತರು, ಪೊಲೀಸ್ ಇಲಾಖೆ ಹಾಗೂ ವೈದ್ಯಕೀಯ ಸಿಬ್ಬಂದಿ ಅವರು ನೆರವಿನಿಂದ ಮಹಾಮಾರಿ ಕೋವಿಡ್ ವೈರಸ್ ವಿರುದ್ಧ ಹೋರಾಟ ಮಾಡುತ್ತಿರುವ ಇವರೆಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಟಿ.ಜಿ. ಶೇಟ್ ದಂಪತಿ 2 ಲಕ್ಷ ರೂ.ಗಳ ಚೆಕ್‌ನ್ನು ಪ್ರಧಾನಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಿದರು. ಮುಖಂಡರಾದ ಲಕ್ಷ¾ಣ ಉಪ್ಪಾರ, ಮಲ್ಲಿಕಾರ್ಜುನ ಸಾವುಕಾರ, ನಾಗೇಶ ಕಲಬುರ್ಗಿ, ಸಂತೋಷ ಚವ್ಹಾಣ, ಲಕ್ಕನಗೌಡ್ರು, ರೂಪಾ ಶೆಟ್ಟಿ ಹಾಗೂ ಇನ್ನಿತರರಿದ್ದರು. ಲಿಂಗರಾಜ ಪಾಟೀಲ ಸ್ವಾಗತಿಸಿದರು. ಶಶಿಧರ ಡಂಗನವರ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.