ರುದ್ರಭೂಮಿ ಸ್ವಚ್ಛತೆಗೆ ಮುಂದಾದ ಗುರುಸ್ವಾಮಿ
ಮಧುಸೂದನ್ ಬೇಕಲ್‌ರಿಂದ ಸ್ವಚ್ಛತಾ ಕಾರ್ಯ
Team Udayavani, May 11, 2020, 1:24 PM IST
ಆನಂದಪುರ: ತಾವರೆಹಳ್ಳಿಯ ಹಿಂದೂ ರುದ್ರಭೂಮಿ ಸ್ವಚ್ಛತೆಗೆ ಮುಂದಾದ ಮಧುಸೂದನ್ ಬೇಕಲ್.
ಆನಂದಪುರ: ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದ ಗುರುಸ್ವಾಮಿಯೊಬ್ಬರು ತಾವರೇಹಳ್ಳಿ ಗ್ರಾಮದ ಹಿಂದೂ ರುದ್ರಭೂಮಿಯ ಸ್ವಚ್ಛತೆಗೆ ಮುಂದಾಗಿದ್ದಾರೆ. ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾವರೇಹಳ್ಳಿ ಗ್ರಾಮದ ಹಿಂದೂ ರುದ್ರಭೂಮಿ ನೂರಾರು ವರ್ಷಗಳಿಂದ ಭಾರೀ ಪ್ರಮಾಣದ ಗಿಡ-ಗಂಟಿ ಹಾಗೂ ಮುಳ್ಳಿನ ಗಿಡಗಳು ಬೆಳೆದು ನಿಂತಿದ್ದವು.
ಇಂತಹ ರುದ್ರಭೂಮಿಯನ್ನು ಸ್ವಚ್ಛ ಮಾಡಲು ಕಳೆದ 3-4 ವರ್ಷಗಳಿಂದ ಯತ್ನಿಸುತ್ತಿರುವ ಮಧುಸೂದನ್ ಬೆಕಲ್ ಅವರು ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನದ ಗುರುಸ್ವಾಮಿಗಳಾಗಿದ್ದಾರೆ. ರುದ್ರಭೂಮಿಯ ಸ್ವಚ್ಛತಾ ಕಾರ್ಯಕ್ಕೆ ದೃಢ ಸಂಕಲ್ಪ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 206 ರ ಸಾಗರ ರಸ್ತೆಯಲ್ಲಿರುವ ಹಿಂದೂ ರುದ್ರಭೂಮಿಯ ಸ್ವಚ್ಛತಾ ಕಾರ್ಯ ಮಾಡಿದ್ದು, ತದನಂತರ ತಾವರೇಹಳ್ಳಿ ಹಿಂದೂ ರುದ್ರಭೂಮಿಯ ಸ್ವಚ್ಛತೆಗೆ ಮುಂದಾಗಿದ್ದಾರೆ. ಇದರಲ್ಲಿ ಕಳೆದ ಒಂದು ತಿಂಗಳಿಂದ ಶ್ರಮದಾನದ ಮೂಲಕ ಸಣ್ಣಪುಟ್ಟ ಗಿಡಗಳನ್ನು ಕಡಿದು ಸ್ವಚ್ಛ ಮಾಡಲಾಗಿದೆ. ಇದರಿಂದ ಸಾರ್ವಜನಿಕರ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಅವರು ಈಗ ಇಲ್ಲಿನ ತಾವರೆಹಳ್ಳಿಯ ರುದ್ರಭೂಮಿಯ ಸ್ವಚ್ಛತೆಗೆ ಮುಂದಾಗಿದ್ದು, ಅಯ್ಯಪ್ಪ ಸ್ವಾಮಿ ಭಕ್ತರು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಯಂತ್ರ ಬಳಸಿ ಮುಳ್ಳಿನ ಗಿಡ-ಗಂಟಿಗಳನ್ನು ತೆರವುಗೊಳಿಸುವುದರ ಮೂಲಕ ಸ್ವಚ್ಛತೆಗೆ ಮುಂದಾಗಿದ್ದಾರೆ. ಅವರು ಈ ಕಾರ್ಯವನ್ನು ಗುರುತಿಸಿ ಅನೇಕ ಸಂಘ-ಸಂಸ್ಥೆಗಳು ಮಧುಸೂದನ್ ಬೇಕಲ್ ಅವರನ್ನು ಸನ್ಮಾನಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.