ಜಮ್ಮು-ಕಾಶ್ಮೀರದಲ್ಲಿ 4ಜಿ ಇಂಟರ್ನೆಟ್ ಪುನರಾರಂಭಿಸಲು ಸುಪ್ರೀಂಕೋರ್ಟ್ ನಕಾರ
ಗೃಹ ಸಚಿವಾಲಯದ ಕಾರ್ಯದರ್ಶಿಯನ್ನೊಳಗೊಂಡ ಉನ್ನತ ಮಟ್ಟದ ಸಮಿತಿ ರಚಿಸುವಂತೆ ಸುಪ್ರೀಂಪೀಠ ಸೂಚನೆ
Team Udayavani, May 11, 2020, 3:26 PM IST
Representative Image
ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಕಾಶ್ಮೀರದಲ್ಲಿ 4ಜಿ ಇಂಟರ್ನೆಟ್ ಪುನರಾರಂಭಿಸಲು ಸುಪ್ರೀಂಕೋರ್ಟ್ ಸೋಮವಾರ ನಿರಾಕರಿಸಿದೆ. ಆದರೆ ಜಮ್ಮು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ 4ಜಿ ಇಂಟರ್ನೆಟ್ ಪುನರಾರಂಭಿಸುವ ನಿರ್ಧಾರ ಕೈಗೊಳ್ಳುವ ಬಗ್ಗೆ ಕೇಂದ್ರ ಮತ್ತು ಜಮ್ಮು-ಕಾಶ್ಮೀರ ಆಡಳಿತ ಗೃಹಸಚಿವಾಲಯದ ಕಾರ್ಯದರ್ಶಿಯನ್ನೊಳಗೊಂಡ ಸಮಿತಿಯನ್ನು ರಚಿಸುವಂತೆ ಸೂಚನೆ ನೀಡಿದೆ.
ಗೃಹ ಸಚಿವಾಲಯದ ಕಾರ್ಯದರ್ಶಿಯನ್ನೊಳಗೊಂಡ ಉನ್ನತ ಮಟ್ಟದ ಸಮಿತಿ ರಚಿಸುವಂತೆ ಸುಪ್ರೀಂಪೀಠ ಸೂಚನೆ ನೀಡಿದೆ. ಈ ಸಮಿತಿ 4ಜಿ ಇಂಟರ್ನೆಟ್ ಸಂಪರ್ಕ ನೀಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ತಿಳಿಸಿದೆ.
ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರೀಯ ಭದ್ರತೆ ಮತ್ತು ಮಾನವ ಹಕ್ಕುಗಳನ್ನು ಸರಿತೂಗಿಸಿಕೊಂಡು ಹೋಗಬೇಕು. ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಕಾಶ್ಮೀರದಲ್ಲಿ ಬಿಕ್ಕಟ್ಟು ಇದ್ದಿರುವುದನ್ನು ನಾವು ಗಮನಿಸಿದ್ದೇವೆ. ಏತನ್ಮಧ್ಯೆ ದೇಶದಲ್ಲಿ ಹಾವಳಿ ಎಬ್ಬಿಸಿರುವ ಕೋವಿಡ್ ವೈರಸ್ ಮತ್ತು ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿರುವ ಬಗ್ಗೆಯೂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಸೈಫ್ ಮೇಲೆ ಹಲ್ಲೆಗೆ ಬಳಸಿದ್ದ ಚಾಕುವಿನ ಮೂರನೇ ಭಾಗ ಬಾಂದ್ರಾ ಕೆರೆ ಬಳಿ ಪತ್ತೆ
Holy Dip: ಮಹಾಕುಂಭದಲ್ಲಿ ಸಿಎಂ ಯೋಗಿ ಸಂಪುಟ ಸದಸ್ಯರ ಪವಿತ್ರ ಸ್ನಾನ
Crew Module: ಗಗನಯಾನಕ್ಕೆ ಮಾನವರ ಕರೆದೊಯ್ಯುವ ನೌಕೆ ಶ್ರೀಹರಿಕೋಟಾಕ್ಕೆ ರವಾನೆ
Mosque Survey: ಮಥುರಾ ಮಸೀದಿ ಸಮೀಕ್ಷೆ… ಸುಪ್ರೀಂ ತಡೆಯಾಜ್ಞೆ ಮುಂದುವರಿಕೆ
ನಮ್ಮ ಪಕ್ಷಕ್ಕೆ ಮಾನ್ಯತೆ ಸಿಗುತ್ತಿಲ್ಲ, ಸಚಿವ ಸ್ಥಾನ ತೊರೆವೆ: ಮಾಂಜಿ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್