ಮಾತೃ ವಾತ್ಸಲ್ಯ ಅಮೃತಕ್ಕೆ ಸಮ
Team Udayavani, May 11, 2020, 3:34 PM IST
ಮುದ್ದೇಬಿಹಾಳ: ಶಾಸಕ ಎ.ಎಸ್. ಪಾಟೀಲರ ದಾಸೋಹ ನಿಲಯದಲ್ಲಿ ವಿಶ್ವ ತಾಯಂದಿರ ದಿನವನ್ನು ಕೇಕ್ ಕತ್ತರಿಸಿ ಆಚರಿಸಲಾಯಿತು.
ಮುದ್ದೇಬಿಹಾಳ: ಪ್ರತಿಯೊಬ್ಬ ತಾಯಿ ಮಕ್ಕಳನ್ನು ಕಾಳಜಿಯಿಂದ, ಜವಾಬ್ದಾರಿಯುತವಾಗಿ ಬೆಳೆಸಿರುತ್ತಾಳೆ. ಮಕ್ಕಳು ತಾಯಂದಿರನ್ನು ಗೌರವಿಸಿದಾಗ ಸಮಾಜದಲ್ಲಿ ಮಕ್ಕಳ ಗೌರವ ಹೆಚ್ಚುತ್ತದೆ ಎಂದು ಶಾಸಕ ಎ.ಎಸ್ .ಪಾಟೀಲ ನಡಹಳ್ಳಿ ಅವರ ಪತ್ನಿ ಮಹಾದೇವಿ ಪಾಟೀಲ ಹೇಳಿದರು.
ಇಲ್ಲಿನ ಶಾಸಕರ ದಾಸೋಹ ನಿಲಯದಲ್ಲಿ ರವಿವಾರ ನಡೆದ ವಿಶ್ವ ತಾಯಂದಿರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಭಗವಂತ ಎಲ್ಲೆಡೆ ಇರಲಾಗುವುದಿಲ್ಲ ಎಂದು ತಾಯಿಯನ್ನು ಸೃಷ್ಟಿಸಿದ್ದಾನೆ. ತಾಯಿಯ ತ್ಯಾಗಕ್ಕೆ ಯಾವುದೂ ಸಮನಾಗದು. ಜೀವನವಿಡೀ ತನ್ನ ಪತಿ, ಮಕ್ಕಳಿಗಾಗಿ ಜೀವನ ಸವೆಸುವ ತಾಯಿಯ ವಾತ್ಸಲ್ಯ ಅಮೃತಕ್ಕೆ ಸಮಾನವಾದದ್ದು. ಆಧುನಿಕ ಜನಾಂಗ ತಾಯಿಗೆ ಅಗೌರವ ತೋರಿಸದೆ ಆಕೆಯನ್ನು ಲಾಲಿಸಿ, ಪಾಲಿಸುವ ಗುಣ ಮೈಗೂಡಿಸಿಕೊಂಡು ಸಮಾಜಕ್ಕೆ ಉತ್ತಮ ಸಂದೇಶ ಕೊಡುವಂತಾಗಬೇಕು ಎಂದರು.
ಇದೇ ವೇಳೆ ವಿಶ್ವ ತಾಯಂದಿರ ದಿನಾಚರಣೆ ಅಂಗವಾಗಿ ಶಾಸಕರ ತಾಯಿ ಗಂಗಮ್ಮಗೌಡತಿ ಪಾಟೀಲರ ಜೊತೆಗೂಡಿ ಮಹಾದೇವಿ ಪಾಟೀಲ ಕೇಕ್ ಕತ್ತರಿಸಿ, ಪರಸ್ಪರ ಸಿಹಿ ಹಂಚಿ, ಶುಭಾಶಯ ವಿನಿಮಯ ಮಾಡಿಕೊಂಡರು. ಪುರಸಭೆ ಸದಸ್ಯರಾದ ಸಂಗಮ್ಮ ದೇವರಳ್ಳಿ ಮತ್ತು ಸಹನಾ ಬಡಿಗೇರ, ವಿವಿಧ ಮಹಿಳಾ ಸಂಘಟನೆಗಳ ಪ್ರಮುಖರಾದ ಸುಧಾ ಪಾಟೀಲ, ಗೌರಮ್ಮ ಹುನಗುಂದ, ಬಸಮ್ಮ ಸಿದರಡ್ಡಿ, ನೀಲಮ್ಮ ಚಲವಾದಿ, ನಿರ್ಮಲಾ ಪುರಾಣಿಕಮಠ, ಶಾಂತಾ ಹಾವರಗಿ, ಶಿಲ್ಪಾ ಶರ್ಮಾ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.