ಕೆರೆ ಹೂಳೆತ್ತುವ ಕಾರ್ಯಕ್ಕೆ ಚಾಲನೆ
Team Udayavani, May 11, 2020, 4:32 PM IST
ಸಂಡೂರು: ಕೊಡಾಲಿನಲ್ಲಿ ನಮ್ಮೂರು ನಮ್ಮ ಕೆರೆ ಯೋಜನೆಯಡಿ ಕೆರೆ ಹೂಳೆತ್ತುವ ಕಾರ್ಯಕ್ಕೆ ಜಿಲ್ಲಾ ನಿರ್ದೇಶಕ ಚಂದ್ರಶೇಖರ ಶೆಟ್ಟಿ ಚಾಲನೆ ನೀಡಿದರು.
ಸಂಡೂರು: ಇಂದು ಬಹಳಷ್ಟು ಕೂಲಿ ಕಾರ್ಮಿಕರಿಗೆ ಕೆಲಸವಿಲ್ಲದೆ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಅಲ್ಲದೆ ವಲಸಿಗರ ಆಗಮನ ಇನ್ನು ಹೆಚ್ಚು ಕಷ್ಟಕ್ಕೆ ದೂಡಿದೆ. ಇದನ್ನು ಪರಿಹರಿಸುವ ಮತ್ತು ಸಾಮಾಜಿಕ ಉಪಯೋಗಿಯಾದ ಕೆರೆ ಹೂಳೆತ್ತುವ ಕಾರ್ಯಕ್ಕೆ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಸ್ಥೆ ಮುಂದಾಗಿದೆ ಎಂದು ಜಿಲ್ಲಾ ನಿರ್ದೇಶಕ ಚಂದ್ರಶೇಖರ್ ಶೆಟ್ಟಿ ಅಭಿಪ್ರಾಯಪಟ್ಟರು.
ಅವರು ತಾಲೂಕಿನ ಕೋಡಾಲು ಗ್ರಾಮದಲ್ಲಿ ನಮ್ಮೂರು ನಮ್ಮ ಕೆರೆ ಯೋಜನೆಯಡಿ ಕೆರೆ ಹೂಳೆತ್ತುವ ಕಾರ್ಯಕ್ಕೆ ಮುಂದಾಗಿದ್ದು ಇದನ್ನು ಸಾರ್ವಜನಿಕರು, ರೈತರು ಸದುಪಯೋಗ ಪಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಕರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ದಾಸನಗೌಡ, ಊರಿನ ಮುಖಂಡರಾದ ತಿಮ್ಮನಗೌಡ, ತಿಪ್ಪೇಸ್ವಾಮಿ, ಹನುಮಂತರಾವ್ ಇತರರು ಮಾತನಾಡಿ, ಈ ಕಾರ್ಯಕ್ಕೆ ಗ್ರಾಮದ ಪ್ರತಿಯೊಬ್ಬರೂ ಸಹ ಬೆಂಬಲಿಸುತ್ತಾರೆ. ಅಲ್ಲದೆ ನಮ್ಮ ಕೆರೆ ಅಭಿವೃದ್ಧಿಗೆ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯವರು ಮುಂದೆ ಬಂದು ಬಡವರ ಪಾಲಿನ ವರವಾಗಿದ್ದಾರೆ ಎಂದರು. ತಾಲೂಕು ಯೋಜನಾಧಿಕಾರಿ ಪ್ರಸಾದ ಮಾತನಾಡಿ ಯೋಜನೆಯ ಮಹತ್ವ ತಿಳಿಸಿದರು. ಗ್ರಾಮದ ರೈತರು, ಗಣ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Siruguppa: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್ ಶಾಸಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.